ಮಡಿಕೇರಿ ಬಳಿ ಹೊಳೆಗೆ ಉರುಳಿ ಬಿದ್ದ ಕೆಎಸ್ಆರ್ಟಿಸಿ ಬಸ್, ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯ

ಕಿರು ಹೊಳೆಗೆ ಕೆಎಸ್ಆರ್ಟಿಸಿ ಬಸ್ ಉರುಳಿ ಬಿದ್ದು ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಹಾಗೂ 25 ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಧರ್ಮಸ್ಥಳದಿಂದ‌ ಗುಂಡ್ಲುಪೇಟೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಸಣ್ಣ ನದಿಗೆ ಉರುಳಿದೆ.

ಮಡಿಕೇರಿ ಬಳಿ ಹೊಳೆಗೆ ಉರುಳಿ ಬಿದ್ದ ಕೆಎಸ್ಆರ್ಟಿಸಿ ಬಸ್, ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯ
ಮಡಿಕೇರಿ ಬಳಿ ಹೊಳೆಗೆ ಉರುಳಿ ಬಿದ್ದ ಕೆಎಸ್ಆರ್ಟಿಸಿ ಬಸ್, ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯ
Follow us
TV9 Web
| Updated By: ಆಯೇಷಾ ಬಾನು

Updated on:Mar 17, 2022 | 7:21 PM

ಮಡಿಕೇರಿ: ಕೆಎಸ್ಆರ್ಟಿಸಿ ಬಸ್ ಉರುಳಿ ಬಿದ್ದು ಬೀಕರ ಅಪಘಾತ ಸಂಭವಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಂಪಾಜೆ ಬಳಿಯ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಿರು ಹೊಳೆಗೆ ಕೆಎಸ್ಆರ್ಟಿಸಿ ಬಸ್ ಉರುಳಿ ಬಿದ್ದು ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಹಾಗೂ 25 ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಧರ್ಮಸ್ಥಳದಿಂದ‌ ಗುಂಡ್ಲುಪೇಟೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಸಣ್ಣ ನದಿಗೆ ಉರುಳಿದೆ. ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಂಗಳೂರು-ಕೃಷ್ಣಗಿರಿ ಹೆದ್ದಾರಿಯಲ್ಲಿ ದಂಪತಿ ಮೇಲೆ ಹರಿದ ಬಸ್, ಸ್ಥಳದಲ್ಲೇ ಮಹಿಳೆ ಸಾವು ಬೈಕ್ ಮೇಲೆ ತೆರಳುತ್ತಿದ್ದ ದಂಪತಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದರೆ, ಗಾಯಗೊಂಡ ಗಂಡನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು – ಕೃಷ್ಣಗಿರಿ ಹೈವೆಯಲ್ಲಿ ಘಟನೆ ನಡೆದಿದೆ. ಸರ್ವೀಸ್ ರೋಡ್ ನಲ್ಲಿ ಚಲಿಸುತ್ತಿದ್ದ ಬೈಕ್ ಗೆ ತಮಿಳುನಾಡು ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಮಹಿಳೆಯ ಶವ ದಾರಿಯಲ್ಲಿಯೇ ಬಹಳ ಹೊತ್ತು ಇತ್ತು. ಅಂಬುಲೆನ್ಸ್‌ ಸರಿಯಾದ ಸಮಯಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್​ ಸಿನಿಮಾದಂತೆ ದಿ ಲಖಿಂಪುರ್​ ಫೈಲ್ಸ್​ ಸಿನಿಮಾವೂ ಬರಲಿ: ಎಸ್​ಪಿ ಮುಖ್ಯಸ್ಥ ಅಖಿಲೇಶ್​ ಯಾದವ್​

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡ IAS ಅಧಿಕಾರಿ, ನಾರ್ಮಲ್ ಡೆಲಿವರಿ ಮೂಲಕ ಹೆಣ್ಣು ಮಗುವಿಗೆ ಜನ್ಮ

Published On - 3:53 pm, Thu, 17 March 22