ಕಾಫಿ ಬೆಳೆಗಾರರ 10 HP ವರೆಗಿನ ಪಂಪ್ ಸೆಟ್ಗೆ ಉಚಿತ ವಿದ್ಯುತ್: ಸಿಎಂ ಬೊಮ್ಮಾಯಿ ಘೋಷಣೆ
ಕಾಫಿ ಬೆಳೆಗಾರರ 10 HP ವರೆಗಿನ ಪಂಪ್ ಸೆಟ್ಗೆ ಉಚಿತ ವಿದ್ಯುತ್ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಕೊಡಗು: ಕಾಫಿ ಬೆಳೆಗಾರರ 10 HP ವರೆಗಿನ ಪಂಪ್ ಸೆಟ್ಗೆ ಉಚಿತ ವಿದ್ಯುತ್ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಘೋಷಣೆ ಮಾಡಿದ್ದಾರೆ. ಮಡಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬಳಿಕ ಫಲಾನುಭವಿಗಳಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಳೆ ಬಾಕಿ ಗಣನೆಗೆ ತೆಗೆದುಕೊಳ್ಳದೆ ಉಚಿತ ವಿದ್ಯುತ್ ಪೂರೈಸುವಂತೆ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಮೌಖಿಕ ಆದೇಶ ನೀಡಿದ್ದಾರೆ. ಶಾಲೆಗೆ ತೆರಳುವ ಹೆಣ್ಣುಮಕ್ಕಳಿಗಾಗಿ ಉಚಿತ ಬಸ್ ಪಾಸ್ ಒದಗಿಸಲಾಗುತ್ತಿದೆ. 8 ಲಕ್ಷ ವಿದ್ಯಾರ್ಥಿನಿಯರಿಗೆ ಇದರಿಂದ ಲಾಭವಾಗಿದೆ. ಸಾಮಾಜಿಕ ನ್ಯಾಯ ಹೆಚ್ಚಿಸಲು ಕ್ರಮಕೈಗೊಳ್ಳಲಾಗಿದೆ. ಹಾಗಾಗಿ ಜೇನು ಗೂಡಿಗೆ ಕೈ ಹಾಕುವ ಕೆಲಸಮಾಡಿದ್ದೇನೆ. ಬರೇ ಭಾಷಣದಲ್ಲಿ ಸಾಮಾಜಿಕನ್ಯಾಯ ಸಾಧ್ಯವಿಲ್ಲ. ಕೆಲವರನ್ನ ಕೆಲವು ಸಮಯ ಮೋಸ ಮಾಡಬಹುದು. ಆದರೆ ಜನರನ್ನ ಎಲ್ಲಾ ಸಮಯದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ಗೆ ಅಧಿಕಾರವಿದ್ದಾಗ ಯಾಕೆ ಸೌಲಭ್ಯ ನೀಡಲಿಲ್ಲ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ಬೋಗಸ್ ಕಾರ್ಡ್ ಎಂದು ಸಿಎಂ ಬೊಮ್ಮಾಯಿ ಟೀಕೆ ಮಾಡಿದರು.
ಅಪ್ಪಚ್ಚು ರಂಜನ್, ಕೆಜಿ ಬೋಪಯ್ಯ ಪರ ಸಿಎಂ ಬೊಮ್ಮಾಯಿ ಬ್ಯಾಟಿಂಗ್
ಮಡಿಕೇರಿಯಲ್ಲಿ 2000 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಇಬ್ಬರು ಶಾಸಕರು ಮತ್ತಷ್ಟು ಕೆಲಸಮಾಡಲು ಅವಕಾಶಕೊಡಿ ಎಂದು ಅಪ್ಪಚ್ಚು ರಂಜನ್, ಕೆಜಿ ಬೋಪಯ್ಯ ಪರ ಸಿಎಂ ಬ್ಯಾಟಿಂಗ್ ಮಾಡಿದರು. ಜನಸಾಮಾನ್ಯರ ಭಾಗ್ಯದ ಬಾಗಿಲು ತೆರೆದಿದೆ. ಎಲ್ಲರೂ ಸೇರಿ ಹೊಸ ನಾಡನ್ನು ಕಟ್ಟೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕರೆ ನೀಡಿದರು.
ಇದನ್ನೂ ಓದಿ: ರಾಜ್ಯದ ರೈತರಿಗೆ ಲೈಪ್ ಇನ್ಸೂರೆನ್ಸ್, ಮರಣ ಹೊಂದಿದರೆ 2 ಲಕ್ಷ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ
ನಿಜವಾದ ಸಾಮಾಜಿಕ ನ್ಯಾಯ ಕೊಟ್ಟವರು ಯಡಿಯೂರಪ್ಪ: ಸಿಎಂ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿಜವಾದ ಸಾಮಾಜಿಕ ನ್ಯಾಯ ಕೊಟ್ಟವರಾಗಿದ್ದಾರೆ. ಭಾಗ್ಯ ಲಕ್ಷ್ಮೀ ಯೋಜನೆ, ಕಾಗಿನೆಲೆ ಅಭಿವೃದ್ಧಿ, ತಾಂಡಾ ಅಭಿವೃದ್ಧಿ ನಿಗಮ ಹಾಗೂ ಬೋವಿ ಅಭಿವೃದ್ಧಿ ನಿಗಮ ಮಾಡಿದ್ದು ಯಡಿಯೂರಪ್ಪನವರು ಎಂದು ಸಿಎಂ ಬೊಮ್ಮಾಯಿ ಯಡಿಯೂರಪ್ಪ ಅವರ ಸಾಧನೆಗಳನ್ನು ಹೊಗಳಿದರು.
ಇದನ್ನೂ ಓದಿ: ಹಾಸನದಲ್ಲಿ ತಾರಕಕ್ಕೇರಿದ ಜೆಡಿಎಸ್ ಟಿಕೆಟ್ ಫೈಟ್: ರೇವಣ್ಣ ನಡೆಯಿಂದ ಬೇಸರ ವ್ಯಕ್ತಪಡಿಸಿದ ಹೆಚ್ಡಿ ಕುಮಾರಸ್ವಾಮಿ
ಅಲ್ಲದೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಮೀಸಲಾತಿ ಹೆಚ್ಚಿಸುವ ಸಂದರ್ಭದಲ್ಲಿ ಜೇನುಗೂಡಿಗೆ ಕೈಹಾಕಿದಂತೆ ಎಂದು ಹೇಳುತ್ತಿದ್ದರು. ಆದರೆ ಧ್ವನಿ ಇಲ್ಲದ ಹಾಗೂ ನೆಲೆ ಇಲ್ಲದ ಜನಾಂಗಕ್ಕೆ ಜೇನು ತುಪ್ಪ ಕೊಡುವ ದಿಟ್ಟ ಹೆಜ್ಜೆ ಇಡಲಾಗಿದೆ. ಅಭಿವೃದ್ಧಿ ಕೆಲಸಗಳನ್ನು ನೋಡಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಮತ ನೀಡಬೇಕು ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:39 pm, Sat, 18 March 23