ಕೊಡಗಿನಲ್ಲಿ ಸಿಎಂ ಆದೇಶಕ್ಕೆ ಡೋಂಟ್ ಕೇರ್; ವೀಕೆಂಡ್ ಕರ್ಫ್ಯೂ ನಡುವೆ ಬೆಳಗಾವಿಯಲ್ಲಿ ನಾಟಿ ಕೋಳಿಗೆ ಮುಗಿಬಿದ್ದ ಜನ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಇಂದಿನಿಂದಲೇ (ಆಗಸ್ಟ್ 7) ವೀಕೆಂಡ್ ಕರ್ಫ್ಯೂ ಆರಂಭವಾಗಲಿದೆ.

ಕೊಡಗಿನಲ್ಲಿ ಸಿಎಂ ಆದೇಶಕ್ಕೆ ಡೋಂಟ್ ಕೇರ್; ವೀಕೆಂಡ್ ಕರ್ಫ್ಯೂ ನಡುವೆ ಬೆಳಗಾವಿಯಲ್ಲಿ ನಾಟಿ ಕೋಳಿಗೆ ಮುಗಿಬಿದ್ದ ಜನ
ಚೆಕ್​ಪೋಸ್ಟ್​ನಲ್ಲಿ ಆರೋಗ್ಯ ಸಿಬ್ಬಂದಿ ಇಲ್ಲದೆ ವಾಹನಗಳು ರಾಜಾರೋಷವಾಗಿ ಓಡಾಡುತ್ತಿವೆ
Follow us
TV9 Web
| Updated By: sandhya thejappa

Updated on: Aug 07, 2021 | 10:02 AM

ಮಡಿಕೇರಿ: ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಅಲ್ಲಿಂದ ಬರುವ ಪ್ರವಾಸಿಗರಿಗೆ ಆರ್​ಟಿಪಿಸಿಆರ್​ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಕೇರಳ, ಕೊಡಗು ಗಡಿಯಲ್ಲಿ ತಪಾಸಣೆ ನಡೆಸಿ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡಬೇಕೆಂದು ರಾಜ್ಯ ಸರ್ಕಾರ ತಿಳಿಸಿದೆ. ಆದರೆ ಕೇರಳ, ಕೊಡಗು ಗಡಿಯಲ್ಲಿ ಯಾವುದೇ ತಪಾಸಣೆ ನಡೆಯುತ್ತಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಕೊಡಗು ಜಿಲ್ಲೆಯ ಕುಶಾಲನಗರ ಬಳಿಯ ಕೊಪ್ಪ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ಮಾಡಲು ಆರೋಗ್ಯ ಇಲಾಖೆ ಸಿಬ್ಬಂದಿ ಕಾಣೆಯಾಗಿದ್ದು, ಕೇರಳದಿಂದ ವಾಹನಗಳು ರಾಜಾರೋಷವಾಗಿ ಆಗಮಿಸುತ್ತಿವೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಇಂದಿನಿಂದಲೇ (ಆಗಸ್ಟ್ 7) ವೀಕೆಂಡ್ ಕರ್ಫ್ಯೂ ಆರಂಭವಾಗಲಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಿದ್ದರೂ ಜನ ನಿರ್ಲಕ್ಷ್ಯ ತೋರಿದ್ದಾರೆ. ರವಿವಾರ ಪೇಟೆಯಲ್ಲಿ ಭರ್ಜರಿಯಾಗಿ ನಾಟಿ ಕೋಳಿಗಳು ಮರಾಟವಾಗುತ್ತಿದ್ದು, ಮಾಸ್ಕ್ ಧರಿಸದೇ, ದೈಹಿಕ ಅಂತರ ಪಾಲಿಸದೇ ಖರೀದಿಗೆ ಜನ ಮುಗಿಬಿದ್ದಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಜಿಲ್ಲೆಯ 6 ಚೆಕ್​ಪೋಸ್ಟ್​ಗಳಲ್ಲಿ ತಪಾಸಣೆ ನಡೆಯುತ್ತಿದೆ. ಮಹಾರಾಷ್ಟ್ರದಿಂದ ಬರುವವರಿಗೆ 72 ಗಂಟೆಯೊಳಗಿನ ಕೊರೊನಾ ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.

ಕಲಬುರಗಿಯಲ್ಲಿ ವೀಕೆಂಡ್ ಕರ್ಪ್ಯೂ ಜಾರಿಯಿರುವ ಹಿನ್ನೆಲೆ ಮಾರುಕಟ್ಟೆಗೆ ಹೆಚ್ಚಿನ ಜನರು ಬಂದಿಲ್ಲ. ಹೀಗಾಗಿ ವ್ಯಾಪಾರವಿಲ್ಲದೆ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಇನ್ನು ವಿಜಯಪುರ ಜಿಲ್ಲೆಯ 11 ಗಡಿಗಳಲ್ಲಿ ಚೆಕ್​ಪೋಸ್ಟ್ ನಿರ್ಮಾಣವಾಗಿವೆ. ಕೊರೊನಾ ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸ್ಥಳದಲ್ಲಿಯೇ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಇನ್ನುಳಿದವರು ಕಡ್ಡಾಯವಾಗಿ ವರದಿ ತರಬೇಕಾಗಿದೆ.

ಇದನ್ನೂ ಓದಿ

ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 65 ವರ್ಷ ಪ್ರಾಯದ ವ್ಯಕ್ತಿ ಬಂಧನ

ವೀಕೆಂಡ್​ ಕರ್ಫ್ಯೂ: ಯಾವ ಯಾವ ಜಿಲ್ಲೆಗಳಲ್ಲಿ ಏನು ಕ್ರಮ? ಮನೆಯಿಂದ ಹೊರಬರುವ ಮುನ್ನ ಗಮನಿಸಿ

(Health Department Staff are not doing health checks in kodagu and Belagavi People are over buying poultry)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್