ಕೊಡಗು: ಜಿಲ್ಲೆಯಾದ್ಯಂತ ವರುಣಾರ್ಭಟ ಹಿನ್ನೆಲೆ ವಿದ್ಯುತ್ (Electrical Power) ಸಂಪರ್ಕ ಕಡಿತವಾಗಿದ್ದು, ಕೆಲ ಪಟ್ಟಣ, ಹಳ್ಳಿಗಳಲ್ಲಿ ಕರೆಂಟ್ ಇಲ್ಲದೇ ಜನರು ಪರದಾಡುವಂತ್ತಾಗಿದೆ. 15 ದಿನಗಳಲ್ಲಿ 650 ವಿದ್ಯುತ್ ಕಂಬಗಳು ಮಳೆಯಿಂದಾಗಿ ಧರೆಗುರುಳಿವೆ. ಇನ್ನೂ ಅಂಗನವಾಡಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಭಾರೀ ಮಳೆಗೆ ಜಿಲ್ಲೆಯಾದ್ಯಂತ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ವಿದ್ಯುತ್ ಇಲ್ಲದೆ ಗ್ರಾಮೀಣ ಕೊಡಗು ಭಾಗದಲ್ಲಿ ಜನರು ಪರದಾಡುತ್ತಿದ್ದಾರೆ. ವಿದ್ಯುತ್ ವ್ಯವಸ್ಥೆ ಮರುಸ್ಥಾಪನೆಗೆ ಚೆಸ್ಕಾಂ ಹರಸಾಹಸ ಪಡುತ್ತಿದೆ. ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯಲ್ಲಿ ವರ್ಷಧಾರೆ ಹಿನ್ನೆಲೆ, ಭಾಗಮಂಡಲದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಸಂಪರ್ಕಕಡಿತವಾಗಿದ್ದು, ಭಾಗಮಂಡಲ-ತಲಕಾವೇರಿ ರಸ್ತೆಗೆ ಎರಡು ಮರಗಳು ಉರುಳಿವೆ.
ಇದನ್ನೂ ಓದಿ: Earthquake: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಮತ್ತೆ ಲಘು ಭೂಕಂಪದ ಅನುಭವ
ಮಡಿಕೇರಿ ತಾಲೂಕಿನ ಭಾಗಮಂಡಲ-ತಲಕಾವೇರಿ ರಸ್ತೆ ಸಂಚಾರವೂ ಸ್ಥಗಿತಗೊಂಡಿದ್ದು, ಜನರ ಪರದಾಡುತ್ತಿದ್ದಾರೆ. ಜಿಲ್ಲೆಯ ಪೊನ್ನಂಪೇಟೆ ಭಾಗದಲ್ಲಿ ಬಿರುಗಾಳಿ ಮಳೆಯಾಗಿದ್ದು, ಶ್ರೀಮಂಗಲ-ನಾಲ್ಕೇರಿ ಗ್ರಾಮದ ಸಂಪರ್ಕ ಸೇತುವೆ ಜಲಾವೃತವಾಗಿದೆ.
ಸೋಮವಾರಪೇಟೆ ತಾಲ್ಲೂಕಿನಾದ್ಯಂತವೂ ಭಾರೀ ಮಳೆಯಾಗಿದೆ.
ಕೊಡಗಿನಲ್ಲಿ ನಿರಂತರ ಭೂಕಂಪನ:
ಇನ್ನೂ ಜಿಲ್ಲೆಯಲ್ಲಿ ನಿರಂತರ ಭೂಕಂಪನವಾಗುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಭೇಟಿ ನೀಡಿ ಭೂಕಂಪನ ಅಧ್ಯಯನಕ್ಕೆ ಭೌಗೋಳಿಕ ರಾಷ್ಟ್ರೀಯ ಸಂಸ್ಥೆಗೆ ಪತ್ರ ಬರೆದಿದ್ದೇನೆ. ಭೂಕಂಪನದ ವಿಸ್ತೃತ ಅಧ್ಯಯನಕ್ಕೆ ಮನವಿ ಮಾಡಿದ್ದೇನೆ. ವಿಜ್ಞಾನಿಗಳ ಅಧ್ಯಯನ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಈ ಹಿಂದೆ ಮಡಿಕೇರಿಯಲ್ಲಿ ಹೇಳಿದ್ದರು. ಭೂಕುಸಿತ ತಡೆಯಲು ಹಲವು ತಂತ್ರಜ್ಞಾನ ಬಳಕೆಗೆ ಚಿಂತನೆ ಮಾಡಲಾಗುತ್ತಿದೆ. ಭೂಕುಸಿತ ತಡೆ ಸಂಬಂಧ ಅಮೃತ್ ವಿಶ್ವವಿದ್ಯಾಲಯ ಸಲಹೆ ನೀಡಲಿದೆ. ಗ್ರಾಮಾಂತರ ಪ್ರದೇಶದಲ್ಲಿ ಟಾಸ್ಕ್ ಫೋರ್ಸ್ ಮಾಡಲಾಗಿದೆ. ವಿದ್ಯುತ್ ನಿರ್ವಹಣೆಗೆ ವಿಶೇಷ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದಿದ್ದರು.
ಇದನ್ನೂ ಓದಿ: ಕೊಡಗಿನಲ್ಲಿ ಕಾಳಜಿ ಕೇಂದ್ರದ ಮೇಲೆ ಕುಸಿದು ಬಿದ್ದ ಗುಡ್ಡ! ದೃಶ್ಯ ಮೊಬೈಲ್ನಲ್ಲಿ ಸೆರೆ
ಅಗತ್ಯಬಿದ್ದರೆ ಜಿಲ್ಲಾಧಿಕಾರಿಗೆ ಹೆಚ್ಚುವರಿ ಹಣ ನೀಡಲಾಗುವುದು. ಕಾಳಜಿ ಕೇಂದ್ರಗಳಲ್ಲಿ ಇರುವ ಸಂತ್ರಸ್ತರಿಗೆ ಅಗತ್ಯ ಸೌಲಭ್ಯ ನೀಡಿ. ಸಂಬಂಧಿಕರ ಮನೆಯಲ್ಲಿರುವ ಸಂತ್ರಸ್ತರಿಗೂ ಪಡಿತರ ವಿತರಿಸುತ್ತೇವೆ. ಕಾಳಜಿ ಕೇಂದ್ರದಿಂದ ಮನೆಗೆ ಮರಳುವಾಗಲೂ ಪಡಿತರ ನೀಡಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.
Published On - 7:16 am, Fri, 15 July 22