ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಮಳೆ ಆರ್ಭಟ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಹಿನ್ನೆಲೆ ಸಂಪರ್ಕ ಕಟ್ ಆಗಿದ್ದು, ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ.

ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಮಳೆ ಆರ್ಭಟ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 29, 2022 | 7:08 AM

ಕೊಡಗು: ಸಂಪಾಜೆ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದಾಗಿ ಎರಡು ಕಡೆ ಭೂ ಕುಸಿತ (Landslide) ಉಂಟಾಗಿರುವಂತಹ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಹಿನ್ನೆಲೆ ಸಂಪರ್ಕ ಕಟ್ ಆಗಿದ್ದು, ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲುಗಟ್ಟಿ ವಾಹನಗಳು ನಿಂತಿವೆ. ಮಣ್ಣಿನೊಂದಿಗೆ ರಸ್ತೆ ಮೇಲೆ‌ ಮರಗಳು ಬಂದು ಬಿದಿದ್ದು, ರಸ್ತೆಯಲ್ಲಿ ಬಿದ್ದಿರುವ ಮರವನ್ನು ಪ್ರಯಾಣಿಕರು ತೆರವುಗೊಳಿಸಿದರು.

ಮಳೆಯಿಂದಾಗಿ ಕುಸಿದ ಮನೆ ಗೋಡೆ:

ಮೈಸೂರು: ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಮುಂದುವರೆದಿದ್ದು, ನಂಜನಗೂಡು ತಾಲೂಕಿನ ಆಲಂಬೂರು ಮುಂಟಿ ಗ್ರಾಮದಲ್ಲಿ ಮನೆ ಗೋಡೆ ಕುಸಿದಿದೆ. ಗೌರಮ್ಮ ಬಸವೇಗೌಡ ಎಂಬುವರ ಮನೆ ಗೋಡೆ ಕುಸಿದಿದ್ದು, ಅದೃಷ್ಟವಶಾತ್​ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸೂಕ್ತ ಪರಿಹಾರ ನೀಡುವಂತೆ ಕುಟುಂಬಸ್ಥರಿಂದ ಮನವಿ ಮಾಡಲಾಗಿದೆ. ನಂಜನಗೂಡು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಂದಿ ಹಿಲ್ಸ್ ಬಿಟ್ಟು ಶ್ರೀನಿವಾಸ ಸಾಗರ ಜಲಾಶಯದತ್ತ ಜನವೂ ಜನ: ಧುಮ್ಮಿಕ್ಕುತ್ತಿರುವ ನೀರಲ್ಲಿ ಮಿಂದು ಎಂಜಾಯ್, ಫೋಟೋಗಳಿವೆ

ಆಗಾಗ ಬಿಡುವು ನೀಡಿ ಸುರಿಯುತ್ತಿರುವ ಜಡಿ ಮಳೆ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಬೆಳಗ್ಗೆ 4:30ರಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿದೆ. ನಗರ ಸೇರಿ ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಬಯಲುಸೀಮೆಯ ಭೂಮಿಗೆ ಮಳೆ ತಂಪೆರೆದಿದೆ. ಆಗಾಗ ಬಿಡುವು ನೀಡಿ ಜಡಿ ಮಳೆ ಸುರಿಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.