AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳ, ರಸ್ತೆ ಕುಸಿಯುವ ಭೀತಿ: ಕೊಡಗಿನಲ್ಲಿ ಜೂ.27ರಂದು ಶಾಲೆಗಳಿಗೆ ರಜೆ ಘೋಷಣೆ!

ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ ಕರ್ನಾಟಕದ ಹಲವೆಡೆ ಮುಂಗಾರು ಮಳೆ ಆರ್ಭಟ ಜೋರಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗಿನಲ್ಲಿ ವರುಣದೇವ ಅಬ್ಬರಿಸುತ್ತಿದ್ದಾನೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಇಂದು ಬೆಳಗ್ಗೆಯಿಂದಲೇ ಭರ್ಜರಿ ಮಳೆಯಾಗಿದೆ. ಕೊಂಚ ಬಿಡುವು ಕೊಟ್ಟಿದ್ದ ವರುಣ ಮಧ್ಯಾಹ್ನದ ಬಳಿಕ ಮತ್ತೆ ಧಾರಾಕಾರವಾಗಿ ಸುರಿದಿದೆ. ಭರ್ಜರಿ ಮಳೆಯಿಂದಾಗಿ ಜನರು ಮನೆಯಿಂದ ಹೊರಗೆ ಬರದಂತ ಪರಿಸ್ಥಿತಿ ಎದುರಾಗಿದೆ. ನಾಳೆಯೂ (ಜೂನ್ 27) ಯೆಲ್ಲೋ ಅಲರ್ಟ್ ಇರುವುದರಿಂದ ಶಾಲೆಗಳಿಗೆ ರಜೆ ನೀಡಲಾಗಿದೆ.

ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳ, ರಸ್ತೆ ಕುಸಿಯುವ ಭೀತಿ: ಕೊಡಗಿನಲ್ಲಿ ಜೂ.27ರಂದು ಶಾಲೆಗಳಿಗೆ ರಜೆ ಘೋಷಣೆ!
ಕೊಡಗಿನಲ್ಲಿ ಜೂ.27ರಂದು ಶಾಲೆಗಳಿಗೆ ರಜೆ
Gopal AS
| Updated By: ರಮೇಶ್ ಬಿ. ಜವಳಗೇರಾ|

Updated on: Jun 26, 2024 | 11:09 PM

Share

ಕೊಡಗು, (ಜೂನ್ 26): ಕರ್ನಾಟಕದಲ್ಲಿ ಮುಂಗಾರು ಮಳೆ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ಕೊಡಗಿನಲ್ಲೂ ಸಹ ಇಂದು (ಜೂನ್ 26) ಎಡಬಿಡದೆ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಇನ್ನು ಈ ವರ್ಷಧಾರೆ ನಾಳೆಯೂ(ಗುರುವಾರ) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ(ಜೂನ್ 27) ಕೊಡಗು ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೊಡಗಿನಲ್ಲಿ ನಾಳೆ ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಇದರ ಮೇರೆಗೆ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಿದ್ದಾರೆ. ಈಗಾಗಲೇ ದಕ್ಷಿಣ ಕನ್ನಡದಲ್ಲೂ ಸಹ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಜಿಲ್ಲೆಯಾದ್ಯಂತ ಜೂ.27ರಂದು ಶಾಲೆಗಳಿಗೆ ರಜೆ ಘೋಷಣೆ

ಕೊಡಗಿನಲ್ಲಿ ರಸ್ತೆ ಕುಸಿಯುವ ಭೀತಿ

ಕೊಡಗು ಜಿಲ್ಲೆಯಲ್ಲಿ ಭರ್ತಿ ಒಂದು ತಿಂಗಳ ಬಳಿಕ ಮುಂಗಾರು ಆರ್ಭಟಿಸಲಾರಂಭಿಸಿದೆ. ವರುಣಾರ್ಭಟದ ಮೊದಲ ದಿನವೇ ನದಿ ತೊರೆಗಳು ಉಕ್ಕಲಾರಂಭಿಸಿವೆ. ಅಲ್ಲಲ್ಲಿ ಮಳೆ ಸಂಬಂಧಿತ ಅನಾಹುತಗಳು ಸಂಭವಿಸುತ್ತಿವೆ. ಭಅಗಮಂಡಲ ತ್ರಿವೇಣಿ ಸಂಗಮ ಜಲಾವೃತವಾಗುತ್ತ ಸಾಗಿದೆ. ಮಡಿಕೇರಿಯಲ್ಲಿ ತಡೆಗೋಡೆ ಇಲ್ಲದೆ ಮುಖ್ಯ ರಸ್ತೆ ರಾಜಕಾಲುವೆಗೆ ಕುಸಿಯುವ ಭಿತಿ ಎದುರಾಗಿದೆ.

ಮಡಿಕೇರಿ ನಗರದ ಹೃದಯ ಭಾಗದಲ್ಲಿಯೇ ಮುಖ್ಯ ರಸ್ತೆಯೊಂದು ಕುಸಿಯುತ್ತಿದೆ. ಮಡಿಕೇರಿಯಿಂದ ಗಾಳಿಬೀಡು, ಕಾಲೂರು ಮೊಣ್ಣಂಗೇರಿ ಗ್ರಾಮಗಳಿಗೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಎರಡು ವರ್ಷಗಳ ಹಿಮದೆ ಮಳೆಗಾಲದಲ್ಲಿ ಈ ಸರ್ತೆ ಕುಸಿತವಾಗಿತ್ತು. ರಸ್ತೆಯ ಕೆಳಭಾಗದಲ್ಲೇ ರಾಜಕಾಲುವೆ ಹರಿಯುತ್ತದೆ. ರಸ್ತೆಗೆ ಎರಡು ವರ್ಷಗಳ ಕಾಲ ತಡೆಗೋಡೆ ನಿರ್ಮಿಸಿದ ಜಿಲ್ಲಾಡಳಿತ ಇದೀಗ ಮಳೆಗಾಲ ಶುರುವಾಗುತ್ತಲೇ ಒಂದು ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದೆ. ತಡೆಗೋಡೆಗೆಂದು ರಸ್ತೆಯ ಕೆಳಭಾಗದ ಹಿಟಾಚಿಯಿಂದ ಮಣ್ಣು ಕೊರೆದಿದೆ. ಇದೀಗ ರಸ್ತೆ ಕುಸಿಯಲಾರಂಭಿಸಿದೆ. ಯಾವುದೇ ಕ್ಷಣ ಇಡೀ ರಸ್ತೆಯೇ ಕುಸಿಯುವ ಭೀತಿ ಎದುರಾಗಿದೆ. ಹಾಗಾಗಿ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ.

ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳ

ಇನ್ನು ಮಳೆಯಿಂದಾಗಿ ಜಿಲ್ಲೆಯ ನದಿ ತೊರೆಗಳು ತುಂಬಲಾರಂಭಿಸಿವೆ. ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಳೆ ಹೀಗೆ ಮುಂದುವರೆದರೆ ನಾಳೆಯ ವೇಳೆಗೆ ಸಂಗಮ ಜಲಾವೃತವಾಗುವ ಸಾಧ್ಯತೆ ಇದೆ. ಹಾಗೆಯೇ ಮಡಿಕೇರಿ ತಾಲ್ಲೂಕಿನ ಮೂರ್ನಾಡು ಗ್ರಾಮದ ಬಲಮುರಿಯಲ್ಲಿ ಹಳೆಯ ಸೇತುವೆ ಮುಳಗಡೆಯಾಗಿದೆ. ಸಂಚಾರಕ್ಕೆ ಹೊಸ ಸೇತುವೆ ಇರುವುದರಿಂದ ಸದ್ಯ ಜನರಿಗೆ ಯಾವುದೇ ಅಪಾಯವಿಲ್ಲ. ಉಳಿದಂತೆ ಮಡಿಕೇರಿ ತಾಲ್ಲೂಕಿನ ಬೇಂಗೂರು, ಹೊದವಾಡ, ಕೊಟ್ಟಮುಡಿ, ಧೋನಿ ಕಡವು, ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು, ಸಿದ್ದಾಪುರದಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರವಾಹದ ಆತಂಕ ಶುರುವಾಗಿದೆ. ಹಾಗಾಗಿ ಜಿಲ್ಲಾಡಳಿತ ನದಿ ತೀರದ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರುವದಂತೆ ಮುನ್ನೆಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?