ಮುಂದಿನ ನಾಲ್ಕು ದಿನ ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಸೆ.15ರ ವರೆಗೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ನಾಲ್ಕು ದಿನ ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ
ಮಳೆಯ ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on: Sep 12, 2021 | 10:37 AM

ಕೊಡಗು : ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ಜಿಲ್ಲೆಯ ಜನ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಟ್ಟ, ಗುಡ್ಡ, ತಗ್ಗು ಪ್ರದೇಶದ ನಿವಾಸಿಗಳಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಸೆ.15ರ ವರೆಗೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಭೀಕರ ಮಳೆ ಕಂಡ ದೆಹಲಿ ಶತಮಾನದಲ್ಲೇ‌ ಕಂಡು ಕೇಳರಿಯದ ಮಳೆ‌ ನಿನ್ನೆ (ಸೆಪ್ಟೆಂಬರ್ 11) ಒಂದೇ ದಿನ ದೆಹಲಿಯಲ್ಲಿ ಸುರಿದಿದೆ. ಮಹಾ ಮಳೆಯಲ್ಲಿ ಸಿಲುಕಿದ ದೆಹಲಿ ತತ್ತರಿಸಿದ್ದು, ಪ್ರತಿಯೊಂದು ಏರಿಯಾದಲ್ಲೂ ಮಳೆ ನೀರು ತುಂಬಿ ಹೋಗಿತ್ತು. ಇನ್ನು ದೆಹಲಿ ರಸ್ತೆಗಳು ನದಿಯಂತಾಗಿದ್ದು, ಸವಾರರು ಪರದಾಡಿದರು. ಈ ಮಧ್ಯೆ ಇವತ್ತು ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ನಿನ್ನೆ ಸುರಿದ ಮಹಾ ಮಳೆಗೆ ರಾಷ್ಟ್ರ ರಾಜಧಾನಿ ತತ್ತರಿಸಿದೆ. ದೆಹಲಿ ಹೃದಯ ಭಾಗವೂ ಸೇರಿದಂತೆ ರಾಷ್ಟ್ರ ರಾಜಧಾನಿಯ ಹೊರ ವಲಯದಲ್ಲಿ ಭಾರಿ ಮಳೆ ಬಿದ್ದಿದೆ. ನಿನ್ನೆ ಬೆಳಿಗ್ಗೆಯಿಂದಲೇ ಶುರು ಆಗಿದ್ದ ಮಳೆ ಎಡಬಿಡದೆ ಸುರಿಯಿತು. ಹೀಗಾಗಿ ಹಲವು ಪ್ರದೇಶಗಳಿಗೆ ನೀರು ನುಗ್ಗಿತ್ತು. ರಸ್ತೆಗಳಲ್ಲಿ ನೀರು ತುಂಬಿದ್ದು, ದೆಹಲಿಯ ಬಹುತೇಕ ಪ್ರದೇಶಗಳಲ್ಲಿ ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇದನ್ನೂ ಓದಿ

‘ಕುಡಿಯೋ ಎಂದು ಅಂಬರೀಷ್​ ಯಾವತ್ತೂ ಒತ್ತಾಯ ಮಾಡಲಿಲ್ಲ, ಅದು ದೊಡ್ಡಗುಣ’; ರವಿಚಂದ್ರನ್​

ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು

(Heavy Rain in Kodagu and Yellow Alert is announced in Kodagu)