AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ: ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ. ಮಳೆಯಿಂದಾಗಿ ಕೊಡುಗು ಜಿಲ್ಲೆಯಲ್ಲಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ: ಕಾಲೇಜುಗಳಿಗೆ ರಜೆ ಘೋಷಣೆ
ಕೊಡಗು ಮಳೆ
Gopal AS
| Edited By: |

Updated on: May 25, 2025 | 11:05 PM

Share

ಕೊಡಗು, ಮೇ 25: ಕೊಡಗು (Kodagu) ಜಿಲ್ಲೆಯಾದ್ಯಂತ ವರುಣಾರ್ಭಟ ಮುಂದುವರೆದಿದೆ. ರವಿವಾರ (ಮೇ.25) ಬೆಳಗ್ಗೆಯಿಂದ ಬಿಟ್ಟೂ ಬಿಡದೆ ಮಳೆ (Rain) ಸುರಿಯುತ್ತಿದೆ. ಭಾರಿ ಮಳೆಗೆ ಕೊಡಗಿನ ಹಲವೆಡೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ನದಿ ತೀರದ ನಿವಾಸಿಗಳಿಗೆ ಪ್ರವಾಹದ ಆತಂಕ ಎದುರಾಗಿದೆ. ಹೀಗಾಗಿ, ಎರಡು ದಿನಗಳ ಕಾಲ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲ ಕಾಲೇಜುಗಳಿಗೆ ಮೇ 26 ಮತ್ತು 27 ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಹಾಗೇ, ಅಂಗನವಾಡಿಗಳಿಗೂ ಕೂಡ ಜಿಲ್ಲಾಡಳಿತ ರಜೆ ಘೋಷಿಸಿದೆ.

ಮೈಸೂರಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿದೆ. ಮೇ.26 ರಂದು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಹಾಸನದಲ್ಲಿ ಮಳೆ ಹೊಡೆತಕ್ಕೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ

ಹಾಸನ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮಳೆ ಹೊಡೆತಕ್ಕೆ ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಸಕಲೇಶಪುರ ತಾಲೂಕಿನ ರಾಟೆ ಮನೆ ಬಳಿ ಅವಘಡ ಸಂಭವಿಸಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ
Image
ಮಳೆ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತ: ಮಂಗಳೂರು-ಬೆಂಗಳೂರು ರಸ್ತೆ ಕುಸಿತ
Image
ಸಸ್ಯ ಕಾಶಿ ಲಾಲ್ ಬಾಗ್​ನಲ್ಲಿ ನೆಲಕ್ಕುರುಳಿದ 150 ವರ್ಷದ ಹಳೆ ವೃಕ್ಷ
Image
ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಹಾವಳಿ: ಆತಂಕ
Image
ಕರ್ನಾಟಕದ ಕರಾವಳಿ ಸೇರಿ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್

ಇದನ್ನೂ ಓದಿ: ಕರ್ನಾಟಕದ ಕರಾವಳಿ ಸೇರಿ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​, ಮುಂಗಾರು ಅಬ್ಬರ ಶುರುವಾಯ್ತಾ?

ಬೇಲೂರು ತಾಲೂಕಿನ, ಕುಪ್ಪಗೋಡು ಗ್ರಾಮದಲ್ಲಿ ಮಳೆ ಅಬ್ಬರಕ್ಕೆ ಕೆರೆ ಕೋಡಿ ಒಡೆದು ರೈತರ ಜಮೀನುಗಳಿಗೆ ನೀರು ನುಗ್ಗಿದೆ. ಅಂದಾಜು 60 ಎಕರೆ ಜಮೀನಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ಭಾರೀ ಮಳೆಗೆ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಉಂಟಾಗಿದೆ. ಚತುಷ್ಪಥ ರಸ್ತೆ ನಿರ್ಮಾಣದಿಂದ ಮಣ್ಣು ಸಡಿಲಗೊಂಡಿದ್ದು, ತಡೆಗೋಡೆ ನಿರ್ಮಿಸಿದ್ದರೂ ಮಣ್ಣು ಕುಸಿಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮಂಗಳೂರಿನ ಅಡ್ಯಾರ್ ಗ್ರಾಮದ ಜನರು ಪರದಾಡುತ್ತಿದ್ದಾರೆ. ಮಳೆಯಿಂದ ಚರಂಡಿಯಲ್ಲಿ ಹರಿಯುವ ನೀರು ಬಾವಿ ಸೇರುತ್ತಿದೆ. ಇದರಿಂದ ಗ್ರಾಮದ ಜನ ಉಪಯೋಗಿಸುವ ಬಾವಿಯ ನೀರೂ ಕಲುಷಿತವಾಗಿದೆ.

ನಿರಂತರವಾಗಿ ಸುರಿಯುತ್ತಿರವ ಮಳೆಯಿಂದ ಹಳೆ ಕಟ್ಟಡದ ಗೋಡೆ ಕುಸಿದು ಹೂ ಮಾರಾಟ ಮಾಡುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮಹಿಳೆಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಪಟ್ಟಣದ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಘಟನೆ ನಡೆದಿದೆ. ಇತ್ತೀಚೆಗೆ ಕಟ್ಟಡವನ್ನು ನೆಲಸಮಗೊಳಿಸಲಾಗಿತ್ತು. ಆದರೆ ಗೋಡೆಯ ಒಂದು ಪಾರ್ಶ್ವವನ್ನು ಹಾಗೇ ಬಿಡಲಾಗಿತ್ತು. ಭಾರೀ ಮಳೆಯ ಹಿನ್ನಲೆಯಲ್ಲಿ ಗೋಡೆ ಕುಸಿದು ಬಿದ್ದಿದೆ.

ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ತುಂಬಿ ಹರಿಯುತ್ತಿದೆ. ಬೆಳ್ತಂಗಡಿಯಲ್ಲಿ ಅಡಕೆ ತೋಟಕ್ಕೆ ನದಿ‌ ನೀರು ನುಗ್ಗಿದೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಯರ್ತೋಡಿ ಎಂಬಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ