ಕೊಡಗು, (ಜೂನ್ 28): ಕೊಡಗು ಜಿಲ್ಲಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಇದರ ಬೆನ್ನಲ್ಲೇ ಇದೀಗ ಪ್ರವಾಸಿಗರ ಪ್ರಮುಖ ತಾಣವಾಗಿರುವ ಮಡಿಕೇರಿ ತಾಲ್ಲೂಕಿನ ಉಡತ್ವಮೊಟ್ಟೆ ಹಾಗೂ ಕೆ ನಿಡುಗಣೆ ಗ್ರಾಮದಲ್ಲಿರುವ ಗ್ಲಾಸ್ ಬ್ರಿಡ್ಜ್ ಬಂದ್ ಮಾಡಲಾಗಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಸೆಪ್ಟೆಂಬರ್ 15ರ ವರೆಗೆ ಗ್ಲಾಸ್ ಬ್ರಿಡ್ಜ್ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಎರಡು ಗ್ಲಾಸ್ ಬ್ರಿಡ್ಜ್ ಗಳು ಕಾರ್ಯಾರಂಭ ಮಾಡಿವೆ. ಮಡಿಕೇರಿ ತಾಲ್ಲೂಕಿನ ಉಡತ್ವಮೊಟ್ಟೆ ಹಾಗೂ ಕೆ ನಿಡುಗಣೆ ಗ್ರಾಮದಲ್ಲಿ ಗ್ಲಾಸ್ ಬ್ರಿಡ್ಜ್ ಇದ್ದು, ಇವು ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವಾಗಿವೆ. ಆದ್ರೆ, ಸೂಕ್ತ ಸುರಕ್ಷಾ ಕ್ರಮಗಳಿಲ್ಲದೆ ಗ್ಲಾಸ್ ಬ್ರಿಡ್ಜ್ ಕಟ್ಟಲಾಗಿದೆ ಎಂಬ ದೂರು ಕೇಳಿಬಂದಿವೆ. ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯಿಂದ ಜಿಲ್ಲಾಡಳಿತ ಈ ಕ್ರಮಕೈಗೊಂಡಿದೆ.
ಇದನ್ನೂ ಓದಿ: ಕೊಡಗಿನಲ್ಲಿ ಮುಂದುವರಿದ ವರುಣಾರ್ಭಟ; ದುಬಾರೆ ಪ್ರವಾಸಿ ತಾಣಕ್ಕೆ ಎಂಟ್ರಿ ಬಂದ್
ಮಳೆಗಾಲ ಶುರುವಾಗುತ್ತಲೇ ಕೊಡಲು ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ. ಮಡಿಕೇರಿ ನಗರದ ಹೃದಯ ಭಾಗದಲ್ಲಿಯೇ ಮುಖ್ಯ ರಸ್ತೆಯೊಂದು ಕುಸಿಯುತ್ತಿದೆ. ಇತ್ತ ಮುಂದುವರೆದ ಮಳೆಯ ಆರ್ಭಟಕ್ಕೆ ತ್ರಿವೇಣಿ ಸಂಗಮ ತುಂಬಿದೆ. ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾವಾಗಿ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ