ನಿಟ್ಟೂರಿನಲ್ಲಿ ಹುಲಿ ದಾಳಿ; ಅಸ್ಸಾಂ ಮೂಲದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

ಇತ್ತೀಚೆಗೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಅರಸಿ ನಾಡಿಗೆ ನುಗ್ಗುತ್ತಿವೆ. ಅದರಂತೆ ಇಂದು(ಏ.18) ಜಿಲ್ಲೆಯ ಪೊನ್ನಂಪೇಟೆ (Ponnampet) ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ದನ ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿದ್ದು, ಅಸ್ಸಾಂ ಮೂಲದ ಕೂಲಿ ಕಾರ್ಮಿಕ ರೆಹಮಾನ್‌(50) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ನಿಟ್ಟೂರಿನಲ್ಲಿ ಹುಲಿ ದಾಳಿ; ಅಸ್ಸಾಂ ಮೂಲದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು
ಹುಲಿ ದಾಳಿ
Follow us
Gopal AS
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 18, 2024 | 8:25 PM

ಕೊಡಗು, ಏ.18: ಜಿಲ್ಲೆಯ ಪೊನ್ನಂಪೇಟೆ(Ponnampet) ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ದನ ಮೇಯಿಸುತ್ತಿದ್ದಾಗ ಹುಲಿ ದಾಳಿ(Tiger Attack) ನಡೆಸಿದ್ದು, ಅಸ್ಸಾಂ ಮೂಲದ ಕೂಲಿ ಕಾರ್ಮಿಕ ರೆಹಮಾನ್‌(50) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೆಲಸಕ್ಕಾಗಿ ಅಸ್ಸಾಂನಿಂದ ವಲಸೆ ಬಂದಿದ್ದ. ಎಂದಿನಂತೆ ದನ ಮೇಯಿಸಲು ತೆರಳಿದಾಗ ಈ ದುರ್ಘಟನೆ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹೂವಿನಹಳ್ಳಿಯಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಗಾಯಾಳು ಸಲ್ಮಾನ್ ಎಂಬಾತನನ್ನು ಕೂಡಲೇ​ ಹಾಸನದ ಹಿಮ್ಸ್​​ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆ ಹಿಡಿಯುವಂತೆ ಹೂವಿನಹಳ್ಳಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ. ಈ ಕುರಿತು ಹೊಳೆನರಸೀಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕೊಪ್ಪಳ: ಒಂದೇ ದಿನದಲ್ಲಿ ಎರಡು ಕಡೆ ಕರಡಿ ದಾಳಿ; ಓರ್ವ ಸಾವು, ಮೂವರು ಗಂಭೀರ ಗಾಯ

ಗ್ರಾಮಸ್ಥರ ನಿದ್ದೆ ಕೆಡಿಸಿದ್ದ ಚಿರತೆ ಕೊನೆಗೂ ಸೆರೆ

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ತಾಲೂಕಿನ ಸೂಲುಕುಂಟೆ ಗ್ರಾಮದ ಹೊರ ವಲಯದಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಸೂಲುಕುಂಟೆ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಗ್ರಾಮಸ್ಥರ ನಿದ್ದೆ ಕೆಡಿಸಿದ್ದ ಚಿರತೆ ಇದಾಗಿದ್ದು, ಹಲವು ಬಾರಿ ಅರಣ್ಯ ಅಧಿಕಾರಿಗಳಿಗೆ ಚಿರತೆ ಸೆರೆಗಾಗಿ ಆಗ್ರಹಿಸಿದ್ದಾರೆ. ಚಿರತೆ ಸೆರೆಸಿಕ್ಕ ಹಿನ್ನೆಲೆ ಗ್ರಾಮಸ್ಥರು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Thu, 18 April 24