Karnataka Rain: ಕೊಡಗಿನಲ್ಲಿ ಭಾರಿ ಮಳೆ, ಶಾಲೆಗಳಿಗೆ ಇಂದು ರಜೆ, ಸಿಎಂ ಬೊಮ್ಮಾಯಿ ಜಿಲ್ಲೆಗೆ ದೌಡು

ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಕೆಲವೊಂದು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದಲ್ಲಿರುವ ಕೆಪಿಎಸ್ ಶಾಲೆ, ವಿರಾಜಪೇಟೆಯ ಸಂತ ಅನ್ನಮ್ಮ ಪ್ರಾರ್ಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Karnataka Rain: ಕೊಡಗಿನಲ್ಲಿ ಭಾರಿ ಮಳೆ, ಶಾಲೆಗಳಿಗೆ ಇಂದು ರಜೆ, ಸಿಎಂ ಬೊಮ್ಮಾಯಿ ಜಿಲ್ಲೆಗೆ ದೌಡು
ಕೊಡಗಿನಲ್ಲಿ ಮಳೆ
Follow us
TV9 Web
| Updated By: Rakesh Nayak Manchi

Updated on:Jul 12, 2022 | 7:24 AM

ಕೊಡಗು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಕೆಲವೊಂದು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದಲ್ಲಿರುವ ಕೆಪಿಎಸ್ ಶಾಲೆ, ವಿರಾಜಪೇಟೆಯ ಸಂತ ಅನ್ನಮ್ಮ ಪ್ರಾರ್ಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಆಡಳಿತ ಮಂಡಳಿಗಳು ಶಾಲೆಗಳಿಗೆ ರಜೆ ಘೋಷಣೆ ಮಾಡಿವೆ. ಇನ್ನೊಂದೆಡೆ ಮಳೆ ಹೆಚ್ಚಾಗುತ್ತಿರುವ ಕೊಡಗು ಜಿಲ್ಲೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಹುತೇಕ ಕಡೆ ಧಾರಾಕಾರ ಮಳೆ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚಿಸಿದ ಶಿಕ್ಷಣ ಇಲಾಖೆ

ಕೊಡಗಿನಲ್ಲಿ ಮಳೆರಾಯನ ಆರ್ಭಟಕ್ಕೆ ಅವಾಂತರಗಳೇ ಸೃಷ್ಟಿಯಾಗಿದ್ದು, ಭೂಕುಸಿತ ಉಂಟಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಳೆಯಿಂದ ಹಾನಿಗೊಳಗಾದ ಹಾಗೂ ಭೂಕುಸಿತ ಉಂಟಾದ ಸ್ಥಳಗಳಿಗೆ ಸಿಎಂ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಡಿಕೇರಿಗೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ, ಮಳೆಹಾನಿ ಪ್ರದೇಶಗಳನ್ನ ವೀಕ್ಷಣೆ ಮಾಡಲಿದ್ದಾರೆ. ಇವರೊಂದಿಗೆ ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಲಿದ್ದಾರೆ.

ಮಳೆಯಿಂದ ಉಂಟಾದ ಹಾನಿಗಳಿಗೆ ಪರಿಹಾರ ನೀಡುವ ಕ್ರಮಗಳ ಕುರಿತು ಜಿಲ್ಲಾಡಳಿತದ ಜೊತೆ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೆ ಸಂತ್ರಸ್ತರ ಜೊತೆಗೆ ಮಾತಾಡಿ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲಿಯೂ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆ; ಜಮೀನುಗಳಿಗೆ ನೀರು ನುಗ್ಗಿ 200 ಎಕರೆಗೂ ಹೆಚ್ಚು ಬೆಳೆ ನಾಶ

ಬಂಗಾಳಕೊಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಮುಂದಿನ 4 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರವಾಳಿ ಭಾಗಕ್ಕೆ ರೆಡ್ ಅಲರ್ಟ್ ಮುಂದುವರೆದಿದ್ದು, ಧಾರವಾಡ, ಹಾವೇರಿ, ಕಲಬುರಗಿ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಮೈಸೂರು ಸೇರಿದಂತೆ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ

ಇದನ್ನೂ ಓದಿ:  Karnataka Rain: ರಾಜ್ಯದಲ್ಲಿ ಇನ್ನೂ 5 ದಿನಗಳ‌ ಕಾಲ ಮಳೆಯಾಗುವ ಸಾಧ್ಯತೆ; ಕರಾವಳಿ ಭಾಗದಲ್ಲಿ ದಾಖಲೆ ಪ್ರಮಾಣದ ಮಳೆ, ವಿವರ ಇಲ್ಲಿದೆ

Published On - 7:24 am, Tue, 12 July 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ