ಮಸೀದಿಯಲ್ಲಿ ಮಹಿಳೆ ನಮಾಜ್ ಮಾಡಿದ್ದ ಆರೋಪ: ಇಡೀ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ

ವಿರಾಜಪೇಟೆ ತಾಲ್ಲೂಕಿನ ಗುಂಡಿಗೆರೆಯಲ್ಲಿ ಮಸೀದಿಯಲ್ಲಿ ನಮಾಜ್ ಮಾಡಿದ್ದಕ್ಕೆ ಮಹಿಳೆಯ ಇಡೀ ಕುಟುಂಬವನ್ನು ಗ್ರಾಮದಿಂದ ಬಹಿಷ್ಕಾರ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೇರಳದ ಕೋಜಿಕೋಡಿನ ನಿವಾಸಿ ಜುಬೈದಾ, ವಿವಾಹದ ಬಳಿಕ ವಿರಾಜಪೇಟೆ ಮಸೀದಿಯಲ್ಲಿ ನಮಾಜ್ ಮಾಡಿದ್ದರು. ಇದೇ ಕಾರಣಕ್ಕೆ ಜುಬೈದಾ ಮತ್ತು ಅಹಮ್ಮದ್ ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿದೆ. ಜುಬೈದಾ ಪುತ್ರ ರಶೀದ್​ರಿಂದ ದೂರು ನೀಡಲಾಗಿದೆ.

ಮಸೀದಿಯಲ್ಲಿ ಮಹಿಳೆ ನಮಾಜ್ ಮಾಡಿದ್ದ ಆರೋಪ: ಇಡೀ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ
ಪ್ರಾತಿನಿಧಿಕ ಚಿತ್ರ
Follow us
Gopal AS
| Updated By: ಡಾ. ಭಾಸ್ಕರ ಹೆಗಡೆ

Updated on:Feb 24, 2024 | 4:04 PM

ಕೊಡಗು, ಫೆಬ್ರವರಿ 24: ಮಸೀದಿಯಲ್ಲಿ ನಮಾಜ್ (namaz) ಮಾಡಿದ್ದಕ್ಕೆ ಮಹಿಳೆಯ ಇಡೀ ಕುಟುಂಬವನ್ನು ಗ್ರಾಮದಿಂದ ಬಹಿಷ್ಕಾರ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿರಾಜಪೇಟೆ ತಾಲ್ಲೂಕಿನ ಗುಂಡಿಗೆರೆಯಲ್ಲಿ ಘಟನೆ ನಡೆದಿದೆ. 25 ವರ್ಷಗಳ ಹಿಂದೆಯೇ ಜುಬೈದಾ ಎಂಬ ಮಹಿಳೆಯ ಕುಟುಂಬವನ್ನು ಬಹಿಷ್ಕಾರ ಹಾಕಿರುವುದಾಗಿ ಆರೋಪ ಮಾಡಲಾಗಿದೆ. 30 ವರ್ಷದ ಹಿಂದೆ ಅಹಮ್ಮದ್ ಎಂಬುವರನ್ನು ಜುಬೈದಾ ವಿವಾಹವಾಗಿದ್ದರು. ಜುಬೈದಾ ಅಹಮದ್​ನ ಎರಡನೇ ಪತ್ನಿ. ಕೇರಳದ ಕೋಜಿಕೋಡಿನ ನಿವಾಸಿ ಜುಬೈದಾ, ವಿವಾಹದ ಬಳಿಕ ವಿರಾಜಪೇಟೆ ಮಸೀದಿಯಲ್ಲಿ ನಮಾಜ್ ಮಾಡಿದ್ದರು.

ಇದೇ ಕಾರಣಕ್ಕೆ ಜುಬೈದಾ ಮತ್ತು ಅಹಮ್ಮದ್ ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿದೆ. ಇನ್ನು ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಅಹಮ್ಮದ್ ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಯಲ್ಲಿ ಜುಬೈದಾ ಭಾಗವಹಿಸಲು ಶಾಫಿ ಮಸೀದಿ ಜಮಾತ್ ಅವಕಾಶ‌ ನೀಡಿಲ್ಲ. ಜುಬೈದಾ ಪುತ್ರ ರಶೀದ್​ರಿಂದ ಜಿಲ್ಲಾ ವಕ್ಫ್ ಬೋರ್ಡಿಗೆ ಮತ್ತು ವಿರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಮೇಯರ್ ಚುನಾವಣೆ ಬಹಿಷ್ಕಾರ

ವಿಜಯಪುರ: ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಿತು. ಬೆಳಗಾವಿಯ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣನವರ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಮೊದಲಿಗೆ ನೂತನವಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸ್ವೀಕಾರ ಪ್ರಕ್ರಿಯೆ ನಡೆಯಿತು. ಸದಸ್ಯರ ಪ್ರಮಾಣ ವಚನದ ಬಳಿಕ ಬಿಜೆಪಿ ಸದಸ್ಯರು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ಮೇಯರ್ ಚುನಾವಣೆಯನ್ನು ಬಹಿಷ್ಕರಿಸಿ ಕಪ್ಪು ಪಟ್ಟಿ ಪ್ರದರ್ಶನ ಮಾಡುವ ಮೂಲಕ ಬಿಜೆಪಿ ಚುನಾವಣಾ ಬಹಿಷ್ಕಾರ ಮಾಡಿತು.

ಇದನ್ನೂ ಓದಿ: ತುಮಕೂರು ಜಿಲ್ಲೆಯಲ್ಲಿ ಮುಂದುವರಿದ ಮೌಢ್ಯಾಚರಣೆ: 1 ತಿಂಗಳ ಹಸುಗೂಸು, ಬಾಣಂತಿಯನ್ನ ಊರಾಚೆ ಇರಿಸಿದ ಗ್ರಾಮಸ್ಥರು

ಪ್ರಾದೇಶಿಕ ಆಯುಕ್ತರು ಸರ್ಕಾರದ ಕೈಗೊಂಬೆಯಾಗಿ ಚುನಾವಣೆ ನಡೆಸುತ್ತಿದ್ದಾರೆಂದು ಶಾಸಕ ಯತ್ನಾಳ ಆರೋಪ ಮಾಡಿದರು. ಬಿಜೆಪಿಯ ಓರ್ವ ಪಾಲಿಕೆ ಸದಸ್ಯ ಆನಾರೋಗ್ಯದಿಂದ ನಿಧನರಾಗಿದ್ಧಾರೆ. ಈ ಕಾರಣ ಚುನಾವಣೆ ಮುಂದೂಡುವಂತೆ ಜಿಲ್ಲಾಧಿಕಾರಿಗಳಿಗೆ, ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಕೆ ಮಾಡಿದ್ದೇವೆ. ಆದರೆ ಯಾವುದಕ್ಕೂ ಆಯುಕ್ತರು ಉತ್ತರ ನೀಡಲಿಲ್ಲಾ, ಸ್ಪಷ್ಣೆಯನ್ನೂ ನೀಡಲಿಲ್ಲಾ. ಈ ಕುರಿತು ನಾವು ಕಲಬುರಗಿ ಹೈಕೋರ್ಟಿನಲ್ಲಿ ಮನವಿ ಸಲ್ಲಿಕೆ ಮಾಡಿದ್ದೇವೆ.

ಇದನ್ನೂ ಓದಿ: ತುಮಕೂರು: 1,35,000 ಪ್ಲಾಸ್ಟಿಕ್ ಬಾಟಲಿಗಳಿಂದ ಮೂಡಿದ “ನಮ್ಮ ಸಂವಿಧಾನ”

ಹೈಕೋರ್ಟ್ ನಿಂದ ಸಲಹೆ ಸೂಚನೆ ಬರುವ ಮುನ್ನವೇ ಚುನಾವಣೆ ನಡೆಸುತ್ತಿದ್ದಾರೆ. ಈ ಕುರಿತು ಪ್ರಶ್ನೆ ಮಾಡಿದರೂ ಉತ್ತರ ನೀಡದೇ ಮೇಯರ್ ಉಪ ಮೇಯರ್ ಚುನಾವಣೆಗೆ ಮುಂದಾದರು. ಆದ ಕಾರಣ ನಾವು ಚುನಾವಣೆಯನ್ನು ಬಹಿಷ್ಕರಿಸಿ ಕಪ್ಪು ಪಟ್ಟಿ ಪ್ರದರ್ಶನ ಮಾಡಿ ಹೊರ ಬಂದಿದ್ದೇವೆ ಎಂದು ಯತ್ನಾಳ ಹೇಳಿದರು. ಈ ನಿಟ್ಟಿನಲ್ಲಿ ನಾವು ಕಾನೂನು ಮೂಲಕ ಕೋರಾಟ ಮಾಡೋದಾಗಿಯೂ ತಿಳಿಸಿದರು. ಈ ವೇಳೆ ಬಿಜೆಪಿ ಸದಸ್ಯರು ಪ್ರಾದೇಶಿಕ ಆಯುಕ್ತರು ಹಾಗೂ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಕಪ್ಪು ಪಟ್ಟಿ ಪ್ರದರ್ಶನ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:05 pm, Sat, 24 February 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ