AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಪತ್ನಿ, ಮಕ್ಕಳು ಪಾರು

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಉದ್ಯಮಿ ಕೇರಳದ ವಯನಾಡಿನಲ್ಲಿ ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೂ ಮುನ್ನ ಉದ್ಯಮಿ ವಿಡಿಯೋ ರೆಕಾರ್ಡ್ ಮಾಡಿ ಸಾವಿಗೆ ಕಾರಣವಾದ ವ್ಯಕ್ತಿಯ ಹೆಸರು ಹೇಳಿದ್ದಾರೆ. ಸದ್ಯ ಪೊಲೀಸರು ತನಿಖೆ ನಡೆಸಿದ್ದಾರೆ.

ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಪತ್ನಿ, ಮಕ್ಕಳು ಪಾರು
ಸಜೀರ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿImage Credit source: onmanorama
Gopal AS
| Edited By: |

Updated on: Feb 07, 2026 | 3:33 PM

Share

ಕೊಡಗು, ಫೆಬ್ರವರಿ 07: ಕೇರಳದ ವಯನಾಡಿನಲ್ಲಿ ಕರ್ನಾಟಕ ಮೂಲದ ಉದ್ಯಮಿ (businessman)  ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ (suicide) ಯತ್ನಿಸಿರುವಂತಹ ಘಟನೆ ನಡೆದಿದೆ. ದುರಂತದಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ, ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ. ಸಜೀರ್ ಪತ್ನಿಗೆ ಗಂಭೀರ ಗಾಯವಾಗಿದ್ದು, ಕಲ್ಲಿಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

ನಡೆದಿದ್ದೇನು?

ಕೊಡಗು ಜಿಲ್ಲೆಯ ಉದ್ಯಮಿ ಸಜೀರ್​​​ ಕುಟ್ಟ ಗ್ರಾಮದಲ್ಲಿ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಬಾಪು ಎಂಬಾತ ಸಜೀರ್​​ಗೆ 20 ಲಕ್ಷ ರೂ. ನೀಡಬೇಕಿತ್ತು. ಸಾಲ ಪಡೆದಿದ್ದ ಬಾಪುನ ಮನೆ ಎದುರೇ ಸಜೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಆತ್ಮಹತ್ಯೆಗೂ ಮುನ್ನ ಕಾರಿನಲ್ಲೇ ಕುಳಿತು ಉದ್ಯಮಿ ಸಜೀರ್​ ವಿಡಿಯೋ ರೆಕಾರ್ಡ್ ಮಾಡಿದ್ದು, ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಬಾಪು ಕಾರಣ ಎಂದು ಹೇಳಿದ್ದಾರೆ.

ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಭಯೋತ್ಪಾದಕ ಸಾವು

ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಭಯೋತ್ಪಾದಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಡರಾತ್ರಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸಾಧಿಕ್​ ಪಾಷಾ(47) ಮೃತ ಶಂಕಿತ ಭಯೋತ್ಪಾದಕ. ಕಳೆದ 6 ತಿಂಗಳಿಂದ ಲೋ ಬಿಪಿ ಮತ್ತು ಹೈಶುಗರ್​ ಸೇರಿದಂತೆ ಕೆಲ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ.

ಇದನ್ನೂ ಓದಿ: ಫ್ರೀಫೈರ್​​ಗೆ ಅಡಿಕ್ಟ್ ಆಗಿದ್ದ ಅಕ್ಕನ ಮಗನನ್ನೇ ಕೊಂದಿದ್ದ ಮಾವ ಸೇರಿ ಕುಟುಂಬದ ನಾಲ್ವರು ಬಿಹಾರದಲ್ಲಿ ಆತ್ಮಹತ್ಯೆಗೆ ಶರಣು!

ಸುದ್ದಗುಂಟೆಪಾಳ್ಯ ಸ್ಫೋಟಕವಸ್ತು ಸಂಗ್ರಹ ಕೇಸ್​ನಲ್ಲಿ ಜೈಲು ಸೇರಿದ್ದ ಸಾಧಿಕ್​ ಪಾಷಾ 2020ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ. ಪ್ರಕರಣ ಸಂಬಂಧ ಸಾಧಿಕ್ ಸೇರಿ ಒಟ್ಟು 6 ಶಂಕಿತರನ್ನು ಎನ್​​ಐಎ ಬಂಧಿಸಿತ್ತು. ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಕುದುರೆ ಗಾಡಿ, ಬೈಕ್ ಡಿಕ್ಕಿ: ಸವಾರ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಠೆ ಗ್ರಾಮದಲ್ಲಿ ಕುದುರೆ ಗಾಡಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಂಡು ಪವಾರ್(42) ಮೃತ ದುರ್ದೈವಿ. ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.