AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಮೊಟ್ಟೆ ಎಸೆತ ಪ್ರಕರಣ: ಆರೋಪಿಗಳ ಗಡಿಪಾರು ಖಂಡಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ಆರೋಪಿಗಳಿಗೆ ಎಸಿ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ನಿಮನ್ನು ಯಾಕೆ‌ ಗಡಿ ಪಾರು ಮಾಡಬಾರದೆಂದು ಕಾರಣ ಕೇಳಿ‌ದೆ. ಇದನ್ನು ಹಿಂದೂ ಸಂಘಟನೆಗಳು ಖಂಡಿಸುತ್ತಿವೆ.

ಸಿದ್ದರಾಮಯ್ಯಗೆ ಮೊಟ್ಟೆ ಎಸೆತ ಪ್ರಕರಣ: ಆರೋಪಿಗಳ ಗಡಿಪಾರು ಖಂಡಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಗಳ ಗಡಿಪಾರು ಖಂಡಿಸಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರು
TV9 Web
| Updated By: Rakesh Nayak Manchi|

Updated on:Feb 02, 2023 | 4:49 PM

Share

ಮಡಿಕೇರಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ (Eggs thrown at Siddaramaiah’s car) ಆರೋಪಿಗಳ ಗಡಿಪಾರು ಮಾಡಲು ಮುಂದಾಗಿರುವ ಬಗ್ಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿವೆ. ಆರೋಪಿಗಳ ಗಡಿಪಾರಿಗೆ ಪೊಲೀಸ್ ಇಲಾಖೆಯು ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಶಿಫಾರಸು ಮಾಡಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಹಿಂದೂ ಕಾರ್ಯಕರ್ತರು, ಗಡಿಪಾರು ನೋಟಿಸ್​ (Deportation Notice) ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. ಮಡಿಕೇರಿ ನಗರದ ಜ. ತಿಮ್ಮಯ್ಯ ವೃತ್ತದಲ್ಲೂ ಪ್ರತಿಭಟನೆ ನಡೆಯಿತು. ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಕವನ್ ಕಾವೇರಪ್ಪ, ವಿನಯ್ ಗಡಿಪಾರಿಗೆ ಪೊಲೀಸ್ ಇಲಾಖೆ ಶುಫಾರಸು ಮಾಡಿದ ಹಿನ್ನಲೆ ಎಸಿ ಯತೀಶ್ ಉಲ್ಲಾಳ್ ಅವರು ಆರೋಪಿಗಳಿಗೆ ನಿನ್ನೆ (ಫೆಬ್ರವರಿ 1) ನೋಟಿಸ್ ಜಾರಿ ನಿಮನ್ನು ಯಾಕೆ‌ ಗಡಿ ಪಾರು ಮಾಡಬಾರದೆಂದು ಕಾರಣ ಕೇಳಿದ್ದರು.

ಪ್ರಜಾಪ್ರಭುತ್ವ, ಜಾತ್ಯಾತೀತೆ ಬಗ್ಗೆ ಮಾತನಾಡುವ ಮಾಜಿ ಮುಖ್ಯಮಂತ್ರಿಯೂ ಆಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವದ ವಿರುದ್ಧ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್ ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ ಬಿಜೆಪಿ ಕಾರ್ಯಕರ್ತರು, ಮಡಿಕೇರಿಗೆ ಸಿದ್ದರಾಮಯ್ಯ ಆಗಮಿಸಿದ್ದ ವೇಳೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣ ಸಂಬಂಧ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಬಳಿಕ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.

ಇದನ್ನೂ ಓದಿ: ಚಿಕ್ಕಮಗಳೂರು: ಸಿ.ಟಿ.ರವಿ ವಿರುದ್ಧ ಕಣಕ್ಕಿಳಿಯುವಂತೆ ಸಿದ್ದರಾಮಯ್ಯಗೆ ಆಹ್ವಾನ ನೀಡಿದ ಅಭಿಮಾನಿ

ಮಡಿಕೇರಿಯಲ್ಲಿ ಮಳೆಯ ಅವಾಂತರಗಳಿಂದಾಗಿ ಅನೇಕ ನಷ್ಟ ಸಂಭವಿಸಿದ್ದು, ಇದನ್ನು ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಭೇಟಿ ಕೊಟ್ಟಿದ್ದರು. ಇದಕ್ಕೂ ಮುನ್ನ ಅವರು ನೀಡಿದ ಹೇಳಿಯಿಂದ ಕೆರಳಿದ ಬಿಜೆಪಿ ಕಾರ್ಯಕರ್ತರು ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಗ್ರಾಮದಲ್ಲಿ ಭಾರೀ ಪ್ರತಿಭಟನೆ, ಆಕ್ರೋಶವನ್ನು ಎದುರಿಸಿದ್ದರು. ಇದೇ ವೇಳೆ ಅವರ ಕಾರಿಗೆ ಮೊಟ್ಟೆಯನ್ನು ಎಸೆಯಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Thu, 2 February 23