AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಿಲ್ಲದ ಕಾಡಾನೆ ಹಾವಳಿ; ಕೊಡಗಿನಲ್ಲಿ ಆನೆ ದಾಳಿಗೆ ಕಾರ್ಮಿಕ ಬಲಿ

ಮೈಸೂರು ಮತ್ತು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಹುಲಿ ಮತ್ತು ಆನೆ ದಾಳಿಯಿಂದ ಹಲವು ಸಾವುಗಳು ಸಂಭವಿಸಿವೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಕಾಡಾನೆ ದಾಳಿಗೆ ಹಲವರು ಬಲಿಯಾಗುತ್ತಿದ್ದು, ಕೊಡಗಿನಲ್ಲಿ ಕಾಫಿ ತೋಟದ ಕಾರ್ಮಿಕ ಮೃತಪಟ್ಟಿದ್ದಾನೆ. ಆನೆ ಟ್ರ್ಯಾಕರ್ ಆಗಿ ಕಾರ್ಯ ನಿರ್ವಸುತ್ತಿದ್ದಾತನ ಮೇಲೆ ಏಕಾಏಕಿ ಕಾಡಾನೆ ದಾಳಿ ಮಾಡಿತ್ತು. ದಾಳಿಯಿಂದ ಗಂಭೀರ ಗಾಯಗೊಂಡ ಕಾರ್ಮಿಕ ಕೊನೆಯುಸಿರೆಳೆದಿದ್ದಾನೆ.

ರಾಜ್ಯದಲ್ಲಿ ನಿಲ್ಲದ ಕಾಡಾನೆ ಹಾವಳಿ; ಕೊಡಗಿನಲ್ಲಿ ಆನೆ ದಾಳಿಗೆ ಕಾರ್ಮಿಕ ಬಲಿ
ಕೊಡಗಿನಲ್ಲಿ ಆನೆ ದಾಳಿಗೆ ಟ್ರ್ಯಾಕರ್ ಬಲಿ
ಭಾವನಾ ಹೆಗಡೆ
| Edited By: |

Updated on:Nov 11, 2025 | 12:49 PM

Share

ಕೊಡಗು, ನವೆಂಬರ್ 11: ಇತ್ತೀಚೆಗೆ ರಾಜ್ಯದಲ್ಲಿ ಕಾಡು ಪ್ರಾಣಿಗಳ ದಾಳಿಗೆ ಹಲವರು ಬಲಿಯಾಗುತ್ತಲೇ ಇದ್ದಾರೆ. ರಾಜ್ಯದಲ್ಲಿ ಕಾಡಾನೆ ( Elephant attack )ಮತ್ತು ಹುಲಿ ದಾಳಿಯಿಂದಾಗಿ ( Tiger attack ) ಹಲವು ರೈತರು ಮೃತಪಟ್ಟ ಘಟನೆಗಳು ಜನರಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ ಮತ್ತೊಂದೆ ಇಂಥದ್ದೇ ಘಟನೆ ಕೊಡಗಿನಲ್ಲಿ ಕೇಳಿಬಂದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಬಳಿಯ ಎಮ್ಮೆಗುಂಡಿ ತೋಟದಲ್ಲಿ ಸೋಮವಾರ (ನ.10) ಕಾಡು ಆನೆಯೊಂದು ದಾಳಿ ಮಾಡಿದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ.

ಆನೆ ದಾಳಿಗೆ ಟ್ರ್ಯಾಕರ್ ಬಲಿ

ಹಾಸನ ಸಮೀಪದ ರಾಮನಾಥಪುರದ ಹನುಮಂತ (57) ಮೃತ ದುರ್ದೈವಿ. ಆನೆ ದಾಳಿಯಿಂದ ಮೃತರ ಎದೆ ಮತ್ತು ಹೊಟ್ಟೆಯ ಮೇಲೆ ತೀವ್ರ ಗಾಯಗಳಾಗಿದ್ದವು ಎಂದು ತಿಳಿದುಬಂದಿದೆ. ಹನುಮಂತ ಕಳೆದ 30 ವರ್ಷಗಳಿಂದ ಖಾಸಗಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಲೈನ್ ಹೌಸ್‌ನಲ್ಲಿ ವಾಸಿಸುತ್ತಿದ್ದರು. ತೋಟದ ಮಾಲೀಕರು ಅವರನ್ನು ಆನೆ ಟ್ರ್ಯಾಕರ್ ಆಗಿ ನಿಯೋಜಿಸಿದ್ದರು. ಆನೆಗಳ ಉಪಸ್ಥಿತಿಯ ಬಗ್ಗೆ ಇತರ ಕಾರ್ಮಿಕರಿಗೆ ಎಚ್ಚರಿಕೆ ನೀಡುವ ಕೆಲಸ ಅವರದಾಗಿತ್ತು. ಇದೇ ವೇಳೆ ಈ ದುರ್ಘಟನೆ ಸಂಭವಿಸಿದೆ. ಅವರ ಸಹ ಕಾರ್ಮಿಕ ಅದೃಷ್ಟವಷಾತ್ ಈ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಶವಪರೀಕ್ಷೆಯ ನಂತರ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ನೀಡಲಾಗಿದೆ.

ಇದನ್ನೂ ಓದಿ ಮೈಸೂರು: ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ, ರೈತ ಸ್ಥಳದಲ್ಲೇ ಸಾವು

ಒಂದೇ ತಿಂಗಳಲ್ಲಿ ಕಾಡು ಪ್ರಾಣಿಗಳಿಗೆ ಹಲವು ಜೀವಗಳು ಬಲಿ

ಕೆಲ ತಿಂಗಳುಗಳಿಂದ ಕಾಡು ಪ್ರಾಣಿಗಳ ದಾಳಿಯಿಂದಾಗಿ ರಾಜ್ಯದಲ್ಲಿ ಹಲವು ಸಾವುಗಳು ಸಂಭವಿಸಿದ್ದು, ರಾಜ್ಯದ ಜನರ ನಿದ್ದೆಗೆಡಿಸಿದೆ. ಕಳೆದ ತಿಂಗಳು ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ರೈತ ಗಣೇಶ (55)ಮತ್ತು ನಿಂಗಯ್ಯ(65) ಪ್ರತ್ಯೇಕ ಘಟನೆಗಳಲ್ಲಿ ಮೃತಪಟ್ಟಿದ್ದರು. ಅಷ್ಟೇ ಅಲ್ಲದೆ ಆನೆ ತುಳಿತಕ್ಕೆ ಹಾಡಿ‌ ನಿವಾಸಿ ವಸಂತ್(36) ಎನ್ನುವವರೂ ಬಲಿಯಾಗಿದ್ದರು. ಚಿಕ್ಕಮಗಳೂರು ಜಿಲ್ಲೆಯ ಕೆರೆಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು. ಇದರಿಂದಾಗಿ ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:28 pm, Tue, 11 November 25

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು