AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿ: ಗ್ರಾ.ಪಂ. ಮಾಜಿ ಸದಸ್ಯೆ ದಾರುಣ ಸಾವು

ಕೊಡಗಿನ ವಾಲ್ನೂರಿನಲ್ಲಿ ಗ್ರಾ.ಪಂ. ಮಾಜಿ ಸದಸ್ಯೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಆ ಮೂಲಕ ಕೇವಲ 10 ದಿನಗಳ ಅವಧಿಯಲ್ಲಿ ಆನೆ ದಾಳಿಗೆ ಎರಡನೇ ಬಲಿ ಜಿಲ್ಲೆಯಲ್ಲಿ ಆದಂತಾಗಿದೆ. ಈ ಘಟನೆ ಮಾನವ-ಪ್ರಾಣಿ ಸಂಘರ್ಷದ ತೀವ್ರತೆಯನ್ನು ಎತ್ತಿ ತೋರಿಸುತ್ತಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಿದೆ. ಘಟನಾ ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

10 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿ:  ಗ್ರಾ.ಪಂ. ಮಾಜಿ ಸದಸ್ಯೆ ದಾರುಣ ಸಾವು
ಸಾಂದರ್ಭಿಕ ಚಿತ್ರImage Credit source: Google
ಗೋಪಾಲ್​ ಸೋಮಯ್ಯ
| Edited By: |

Updated on:Mar 09, 2026 | 1:09 PM

Share

ಮಡಿಕೇರಿ, ಮಾರ್ಚ್​​ 09: ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಕಾಡಾನೆಗಳ ಗ್ಯಾಂಗ್​​ ಜನವಸತಿ ಪ್ರದೇಶಗಲಿಗೆ ನುಗ್ಗಿ ಭಯಬೀಳಿಸುತ್ತಿದ್ದರೆ ಇತ್ತ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆ ಜಲಜಾಕ್ಷಿ(53) ಮೃತ ದುರ್ದೈವಿ. ನಡೆದುಕೊಂಡು ಹೋಗುತ್ತಿದ್ದ ಜಲಜಾಕ್ಷಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಮಡಿಕೇರಿ ತಾಲೂಕಿನ ಗುಡ್ಡಗಾಡು ಗ್ರಾಮ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಪೂಜ್ಯ ಎಂಬಾಕೆ ದಾರುಣವಾಗಿ ಬಲಿಯಾಗಿದ್ದಳು. ಸಂಜೆ ತನ್ನ ತಂದೆ-ತಾಯಿ ಜೊತೆ ಬೈಕ್​ನಲ್ಲಿ ಬಂದ ಪೂಜ್ಯ, ಬೈಕ್​ನಿಂದ ಇಳಿದ ಕೆಲವೇ ಸೆಕೆಂಡುಗಳಲ್ಲಿ ಕತ್ತಲಿನಲ್ಲಿ ಹಿಂಬದಿಯಿಂದ ಬಂದ ಆನೆ ಭೀಕರ ದಾಳಿ ನಡೆಸಿತ್ತು. ಈ ವೇಳೆ ಆಕೆಯ ಕಿರುಚಾಟ ಕೇಳಿ ತಾಯಿ ಬೊಬ್ಬೆಹೊಡೆದರೂ ಸಲಗದ ಕಾಲಡಿ ಸಿಲುಕಿದ್ದ ಪೂಜ್ಯ ಪ್ರಾಣ ಬಿಟ್ಟಿದ್ದರು. ಆ ಘಟನೆ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಸಾವು ನಡೆದಿರುವ ಕಾರಣ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ, ಭುಗಿಲೆದ್ದ ಆಕ್ರೋಶ

ಇತ್ತೀಚಿನ ದಿನಗಳಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ರಾಜ್ಯದ ಹಲವೆಡೆ ಪ್ರಾಣಿ ದಾಳಿಯಿಂದ ನೂರಾರು ಮಂದಿ ಸಾಯುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನಗಳ ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, 32 ಸಾವುಗಳೊಂದಿಗೆ ಕೊಡಗು ಜಿಲ್ಲೆ ಈ ಪಟ್ಟಿಯಲ್ಲಿ ಎರಡನೇಯ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಮೇಲಿಂದ ಮೇಲೆ ಕಾಡು ಪ್ರಾಣಿಗಳ ದಾಳಿಗೆ ಜನರು ಬಲಿಯಾಗ್ತಿದ್ದರೂ ಅರಣ್ಯ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:08 pm, Mon, 9 March 26

Follow Us
ಗೋಪಾಲ್​ ಸೋಮಯ್ಯ
ಗೋಪಾಲ್​ ಸೋಮಯ್ಯ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ