ಕೊಡಗು: 104 ಕಡೆಗಳಲ್ಲಿ ಭೂಕುಸಿತದ ಭೀತಿ, 2,995 ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್

ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ, ರಾಜ್ಯದ ಹಲವೆಡೆ ಸಂಭವಿಸಿದ ಗುಡ್ಡ ಕುಸಿತಗಳಿಂದ ಎಚ್ಚೆತ್ತುಕೊಂಡಿರುವ ಕೊಡಗು ಜಿಲ್ಲಾಡಳಿತ ಸಂಭಾವ್ಯ ಭೂಕುಸಿತದ ಪ್ರದೇಶಗಳನ್ನು ಪಟ್ಟಿ ಮಾಡಿದ್ದರ ಜತೆಗೆ, ಆ ಭಾಗದ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಂಡಿದೆ. ಸಾವಿರಾರು ಕುಟುಂಬಗಳಿಗೆ ಸ್ಥಳಾಂತರಕ್ಕೆ ನೋಟಿಸ್ ನೀಡಲಾಗಿದೆ. ಆ ಬಗ್ಗೆ ವಿವರ ಇಲ್ಲಿದೆ.

ಕೊಡಗು: 104 ಕಡೆಗಳಲ್ಲಿ ಭೂಕುಸಿತದ ಭೀತಿ, 2,995 ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್
ಸಂಗ್ರಹ ಚಿತ್ರ
Follow us
Ganapathi Sharma
|

Updated on: Aug 05, 2024 | 10:40 AM

ಮಡಿಕೇರಿ, ಆಗಸ್ಟ್ 5: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಸಂಭವಿಸಿದ ನಂತರ ಎಚ್ಚರಿಕೆ ವಹಿಸಿರುವ ಕೊಡಗು ಜಿಲ್ಲಾಡಳಿತವು ಭೂಕುಸಿತ ಸಾಧ್ಯತೆ ಇರುವ 104 ಪ್ರದೇಶಗಳನ್ನು ಗುರುತಿಸಿದೆ. ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಈ ಪ್ರದೇಶಗಳನ್ನು ಗುರುತಿಸಲಾಗಿದೆ. ಈ ತಿಂಗಳು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತವು ಸಂಭಾವ್ಯ ಭೂಕುಸಿತದ ಪ್ರದೇಶಗಳಲ್ಲಿ ನೆಲೆಗೊಂಡಿರುವ 2,995 ಕುಟುಂಬಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ನೋಟಿಸ್ ನೀಡಿದೆ.

ಈ ಹಿಂದಿನ ವಿಪತ್ತು ವರದಿಗಳು ಮತ್ತು ಸಮೀಕ್ಷೆಗಳ ಆಧಾರದ ಮೇಲೆ ಈ ಪ್ರದೇಶಗಳನ್ನು ಗುರುತಿಸಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸ್ಥಳಾಂತರಿಸಬೇಕಾದ ಕುಟುಂಬಗಳನ್ನು ಅಂತಿಮಗೊಳಿಸಲಾಯಿತು. ಶೀಘ್ರದಲ್ಲೇ ಸ್ಥಳಾಂತರ ಆಗಬಹುದು ಎಂದು ಮೂಲಗಳು ತಿಳಿಸಿವೆ.

ಜಿಲ್ಲಾಡಳಿತ ಸದ್ಯ 14 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದೆ. ಅಲ್ಲಿ 200 ಕ್ಕೂ ಹೆಚ್ಚು ನಿವಾಸಿಗಳು ಆಶ್ರಯ ಪಡೆದಿದ್ದಾರೆ. ಅಲ್ಲದೆ, ವಿಪತ್ತಿನ ಆತಂಕ ಎದುರಿಸುತ್ತಿರುವ ಪ್ರದೇಶಗಳಲ್ಲಿ 95 ಪರಿಹಾರ ಕೇಂದ್ರಗಳನ್ನು ತೆರೆಯಲು ಸ್ಥಳಗಳನ್ನು ಗುರುತಿಸಲಾಗಿದೆ.

ಮಳೆಯ ಮುನ್ಸೂಚನೆಯನ್ನು ಆಧರಿಸಿ ಭೂಕುಸಿತ ಸಾಧ್ಯತೆ ಇರುವ ಪ್ರದೇಶಗಳಿಂದ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಡಿಸಿ ವೆಂಕಟ್ ರಾಜಾ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಈ ವರ್ಷ ಶೇ 24ರಷ್ಟು ಅಧಿಕ ಮಳೆಯಾಗಿದ್ದು, ಈ ತಿಂಗಳು ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.

ಕರ್ನಾಟಕದ ಹಲವೆಡೆ ಭೂಕುಸಿತದ ಆತಂಕ

ಕರ್ನಾಟಕದ 1,351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂದು ಅಧ್ಯಯನ ವರದಿಯೊಂದು ಇತ್ತಿಚೆಗೆ ಮುನ್ಸೂಚನೆ ನೀಡಿತ್ತು. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್​​​ನಲ್ಲಿ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಕರ್ನಾಟಕದ ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಭೂಕುಸಿತದ ಆತಂಕ: ಭೂವೈಜ್ಞಾನಿಕ ಸಮೀಕ್ಷೆಯಿಂದ ಆತಂಕಕಾರಿ ವರದಿ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿಯ ಶಿರೂರು ಎಂಬಲ್ಲಿ ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಅದಾದ ನಂತರ ರಾಜ್ಯದ ಅನೇಕ ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ