ಕೊಡಗಿನಲ್ಲಿ ಮುಂದುವರಿದ ವ್ಯಘ್ರ ಪ್ರತಾಪ: 24 ಗಂಟೆಯಲ್ಲಿ ಹುಲಿ ದಾಳಿಗೆ ಒಂದೇ ಗ್ರಾಮದಲ್ಲಿ ಇಬ್ಬರ ಸಾವು, ಜನರಲ್ಲಿ ಭಾರೀ ಆತಂಕ
ಭಾನುವಾರ ಸಂಜೆ ಹುಲಿ ದಾಳಿಗೆ ಚೇತನ್ (18) ಎಂಬ ಯುವಕ ಮೃತಪಟ್ಟಿದ್ದ. ಇಂದು ಸೋಮವಾರ ಬೆಳಗ್ಗೆ ರಾಜು (75) ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದಾರೆ.
ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ಹುಲಿ ದಾಳಿಗೆ ಮತ್ತೊಂದು ಬಲಿಯಾಗಿದೆ. ಕಳೆದ 24 ಗಂಟೆಯಲ್ಲಿ ಹುಲಿ ದಾಳಿಗೆ ಒಂದೇ ಗ್ರಾಮಕ್ಕೆ ಸೇರಿದ ಇಬ್ಬರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಕೊಳವಿಗೆ ಹಾಡಿ ನಿವಾಸಿ ರಾಜು(75) ಹುಲಿ ದಾಳಿಗೆ ಮೃತಪಟ್ಟ ವೃದ್ಧ.
ಭಾನುವಾರ ಸಂಜೆ ಹುಲಿ ದಾಳಿಗೆ ಚೇತನ್ (18) ಎಂಬ ಯುವಕ ಮೃತಪಟ್ಟಿದ್ದ. ಇಂದು ಸೋಮವಾರ ಬೆಳಗ್ಗೆ ರಾಜು (75) ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದಾರೆ. ಇನ್ನು ರಾಜು ಮೇಲೆ ನಡೆದ ಹುಲಿ ದಾಳಿ ತಡೆಯಲು ಯತ್ನಿಸಿದ ರಾಜು ಪುತ್ರ ಹಾಗೂ ಮೃತ ಚೇತನ್ ತಂದೆ ಮಧು ಅವರಿಗೂ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಹಾಡಹಗಲೇ ಹುಲಿಯೊಂದು ರಸ್ತೆ ದಾಟುತ್ತಿರುವ ವಿಡಿಯೋ ವೈರಲ್
ಮೃತ ರಾಜು ಪೂಣಚ್ಚ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. 24 ಗಂಟೆಗಳಲ್ಲಿ ಹುಲಿ ದಾಳಿಗೆ ಇಬ್ಬರ ಬಲಿ ಹಿನ್ನೆಲೆ ತೋಟಗಳಿಗೆ ತೆರಳಲು ಜನ ಹೆದರುತ್ತಿದ್ದಾರೆ. ನರಭಕ್ಷಕ ಹುಲಿಯನ್ನು ಕೂಡಲೇ ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೀರಿನ ಟ್ಯಾಂಕ್ಗೆ ಬಿದ್ದಿದ್ದ ಜಿಂಕೆ ರಕ್ಷಣೆ
ಧಾರವಾಡ: ನಗರದ ಸುತ್ತೂರು ಬಡಾವಣೆಯಲ್ಲಿ ನೀರಿನ ಟ್ಯಾಂಕ್ಗೆ ಬಿದ್ದಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ. ಜಿಂಕೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:33 am, Mon, 13 February 23