Kodagu News: ಕೊಡಗು ವೈದ್ಯಕೀಯ ಸಂಸ್ಥೆಯ 46 ವಿದ್ಯಾರ್ಥಿಗಳಿಗೆ ಕೋವಿಡ್ ಧೃಡ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 31, 2022 | 1:43 PM

150 ವಿದ್ಯಾರ್ಥಿಗಳಿಗೆ ಆನ್​ಲೈನ್ ಮೂಲಕ ತರಗತಿ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 104 ಪ್ರಕರಣ ಸಕ್ರಿಯವಾಗಿವೆ. 

Kodagu News: ಕೊಡಗು ವೈದ್ಯಕೀಯ ಸಂಸ್ಥೆಯ 46 ವಿದ್ಯಾರ್ಥಿಗಳಿಗೆ ಕೋವಿಡ್ ಧೃಡ
ಪ್ರಾತಿನಿಧಿಕ ಚಿತ್ರ
Follow us on

ಮಡಿಕೇರಿ: ಇಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ತೆಯ 46 ವಿದ್ಯಾರ್ಥಿಗಳಿಗೆ ಕೋವಿಡ್ (Covid) ದೃಢಪಟ್ಟಿದೆ. ಮೊದಲು ಒಂದಿಬ್ಬರು ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲಿ ಪರೀಕ್ಷೆ ಮಾಡಲಾಗಿದೆ. ಈ ಸಂದರ್ಭ ಕೋವಿಡ್ ದೃಢಪಟ್ಟಿದೆ. ಹಾಗಾಗಿ ಈ ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದವರಿಗೆ ಕೋವಿಡ್ ಪರೀಕ್ಷೆ ಮಾಡಿದಾಗ 44 ವಿದ್ಯಾರ್ಥಿಗಳಿಗೆ ಸೋಕಿರುವುದು ಖಚಿತವಾಗಿದೆ. ಎಲ್ಲರನ್ನೂ ಹಾಸ್ಟೆಲ್‌ನಲ್ಲಿ ಐಸೋಲೇಷನ್ ಮಾಡಲಾಗಿದ್ದು, ಆನಲೈನ್ ತರಗತಿ ನಡೆಸಲಾಗುತ್ತಿದೆ ಎಂದು ಕಾಲೇಜಿನ ಡೀನ್ ಕಳ್ಳಿಚಂಡ ಕಾರ್ಯಪ್ಪ ತಿಳಿಸಿದ್ದಾರೆ. ಸೋಂಕಿತರಲ್ಕಿ 42 ವಿದ್ಯಾರ್ಥಿಗಳು ಪ್ರಥಮ ವರಗಷದವರಾಗಿದ್ದು, ಇಬ್ಬರು ದ್ವಿತೀಯ ವರಗಷದ ವಿದ್ಯಾರ್ಥಿಗಳಾಗಿದ್ದಾರೆ. ಸೋಕಿತ ಅ ವಿದ್ಯಾರ್ಥಿಗಳು ಆರೋಗ್ಯವಂತರಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ಡಿಹೆಚ್ಒ ಡಾ ವೇಂಕಟೇಶ್ ತಿಳಿಸಿದ್ದಾರೆ.

ಇದನ್ನೂ ಓದಿ; Monkeypox: ಭಾರತದ ಮೊದಲ ಮಂಕಿಪಾಕ್ಸ್ ಸೋಂಕಿತ ಗುಣಮುಖ

ಭಾರತದಲ್ಲಿ 19,673 ಮಂದಿ ಕೊರೊನಾ ಸೋಂಕಿತರು ಪತ್ತೆ, 45 ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 19,673 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 45ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳು 143676 ಇದೆ, ದೇಶದಲ್ಲಿ ಒಂದೇ ದಿನದಲ್ಲಿ 31,36,029ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,04,25,69,509 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪತ್ತೆ ಪ್ರಕರಣ; ವರದಿ ನೆಗೆಟಿವ್

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 526357ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 43349778 ಗುಣಮುಖರಾಗಿದ್ದಾರೆ. ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Published On - 11:44 am, Sun, 31 July 22