ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರುಪಾಲು: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

Kodagu News: ಬೆಂಗಳೂರು ಮೂಲದ ಪ್ರವಾಸಿಗ ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾಗಿರುವಂತಹ ಘಟನೆ ಕೊಡಗು ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ.

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರುಪಾಲು: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ
ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ
Follow us
Gopal AS
| Updated By: ಗಂಗಾಧರ​ ಬ. ಸಾಬೋಜಿ

Updated on:Aug 03, 2023 | 7:53 PM

ಕೊಡಗು, ಆಗಸ್ಟ್​ 03: ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ (tourist) ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್​ ನೀರುಪಾಲಾದ ಪ್ರವಾಸಿಗ. ಮೂವರು ಸ್ನೇಹಿತರ ಜೊತೆ ಸಂದೀಪ್ ಹಾರಂಗಿ ಜಲಾಶಯಕ್ಕೆ ಬಂದಿದ್ದ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹರಿಹರ ಬಳಿ ನದಿ ನೋಡಲು ಬಂದಿದ್ದ ತಾಯಿ-ಮಗಳು ನೀರುಪಾಲು

ದಾವಣಗೆರೆ: ನದಿ‌ ನೋಡಲು ಬಂದ ತಾಯಿ ಮಗಳು‌ ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಹರಿಹರ ನಗರದ ರಾಘವೇಂದ್ರ ಮಠದ ಬಳಿಯ ತುಂಗಭದ್ರ ನದಿಯಲ್ಲಿ ನಡೆದಿದೆ. ನದಿಗೆ ಇಳಿದು ಮುಖ ತೊಳೆದು ಕೊಳ್ಳುತ್ತಿದ್ದ 25 ವರ್ಷದ ತಾಯಿ ಕಾಲು ಜಾರಿ ನೀರಿಗೆ ಬಿದಿದ್ದಾರೆ. ಈ ವೇಳೆ ಜೊತೆಗಿದ್ದ ಎಳರಿಂದ ಎಂಟು ವರ್ಷದ ಮಗಳು ತಾಯಿ ಕೈ ಹಿಡಿಯಲು ಹೋಗಿ ಆಕೆಯೂ ಸಹ ನೀರು‌ಪಾಲಾಗಿದ್ದಾಳೆ. ಘಟನೆ ಬಗ್ಗೆ ಪ್ರತ್ಯಕ್ಷ ದರ್ಶಿಗಳಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಪೋಷಕರ ಮೇಲಿನ ಸೇಡಿಗೆ ಮಕ್ಕಳ ಮೇಲೆ ರಿವೇಂಜ್​​: ಕಿಡಿಗೇಡಿಗಳಿಂದ ಮಕ್ಕಳಿಗೆ ವಿಷಪ್ರಾಶನ

ಇತ್ತೀಚಿಗೆ ಉತ್ತಮ‌ ಮಳೆಯಾದ ಹಿನ್ನೆಲೆ ನದಿಯ‌ನೀರಿನ ಮಟ್ಟ ಹೆಚ್ಚಳವಾಗಿದ್ದು ನದಿ ನೋಡಲು ಸುತ್ತಮುತ್ತಲ ಪ್ರದೇಶದ ಜನ ಹರಿಹರಕ್ಕೆ ಆಗಮಿಸುತ್ತಿದ್ದಾರೆ. ಅದೇ ರೀತಿಯಾಗಿ ನದಿ ನೋಡಲು ಬಂದಾಗ ತಾಯಿ ಮಗಳು ನೀರು ಪಾಲಾಗಿದ್ದಾರೆ.

ಇದನ್ನೂ ಓದಿ: Crime News: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ

ಬ್ಯಾಗ ಪರಿಶೀಲನೆ ವೇಳೆ ದಾವಣಗೆರೆಯಿಂದ ಹರಿಹರಕ್ಕೆ ಬಂದಿರುವ ಬಸ್ ಟಿಕೆಟ್ ಹಾಗೂ ಐದರಿಂದ ಆರು ನೂರು ರೂಪಾಯಿ ಹಣ ಪತ್ತೆಯಾಗಿದೆ. ಹರಿಹರ‌ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯ ಆರಂಭಿಸಿದ್ದು, ಈಜು‌ ಪರಿಣಿತರು ಹಾಗೂ ಅಗ್ನಿ ಶಾಮಕ‌ದಳದ ಸಿಬ್ಬಂದಿಯಿಂದ ಕಾರ್ಯಚರಣೆ ಮಾಡಲಾಗುತ್ತಿದೆ. ತಾಯಿ-ಮಗಳ ಗುರುತು ಪತ್ತೆ ಹಚ್ಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:45 pm, Thu, 3 August 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ