AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಮಾಲೀಕರಿಗೆ ಪರಿಹಾರ ನೀಡುವಲ್ಲಿ ವಿಳಂಬ: ನ್ಯಾಯಾಲಯದಿಂದ ಕೆಎಸ್​ಆರ್​ಟಿಸಿ ಬಸ್​ ಜಪ್ತಿ

Kodagu: ಅಪಘಾತ ವಿಮೆ ಪರಿಹಾರ ನೀಡುವಲ್ಲಿ ಕೆಎಸ್​ಆರ್​ಟಿಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್​ ಅನ್ನು ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಇಲ್ಲಿನ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಈ ಆದೇಶ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಬಸ್​ ಅನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಕಾರು ಮಾಲೀಕರಿಗೆ ಪರಿಹಾರ ನೀಡುವಲ್ಲಿ ವಿಳಂಬ: ನ್ಯಾಯಾಲಯದಿಂದ ಕೆಎಸ್​ಆರ್​ಟಿಸಿ ಬಸ್​ ಜಪ್ತಿ
ಜಪ್ತಿ ಮಾಡಿರುವ KSRTC ಬಸ್
Gopal AS
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 01, 2023 | 11:18 AM

Share

ಕೊಡಗು, ಸೆಪ್ಟೆಂಬರ್ 1: ಅಪಘಾತ ವಿಮೆ ಪರಿಹಾರ ನೀಡುವಲ್ಲಿ ಕೆಎಸ್​ಆರ್​ಟಿಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ (KSRTC bus)​ ಅನ್ನು ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಇಲ್ಲಿನ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಈ ಆದೇಶ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಬಸ್​ ಅನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. 2010ರಲ್ಲಿ ವಿರಾಜಪೇಟೆ ನಗರದ ನಿವಾಸಿ ಮುನಾವರ್ ತಮ್ಮ ಕುಟುಂಬದವರೊಂದಿಗೆ ಸ್ಯಾಂಟ್ರೋ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದರು. ಈ ಸಂದರ್ಭ ಹುಣಸೂರು ತಾಲ್ಲೂಕಿನ ಕಲ್ಲಬೆಟ್ಟ ಬಳಿ ಎದುರಿನಿಂದ ವೇಗವಾಗಿ ಬಂದ ಕೆಎಸ್​ಆರ್​ಟಿಸಿ ಬಸ್​ ಕಾರಿಗೆ ಬಲವಾಗಿ ಅಪ್ಪಳಿಸಿತ್ತು. ಪರಿಣಾಮ ಮುನಾವರ್​ ಅಸು ನೀಗಿದ್ದರು.

ಅಪಘಾತದ ಬಳಿಕ ನ್ಯಾಯಾಲಯದಲ್ಲಿ ವಿಚಾರಣೆಯಾಗಿ ಮುನಾವರ್​ ಕುಟುಂಬಕ್ಕೆ ಕೆಎಸ್​ಆರ್​ಟಿಸಿ ಪರಿಹಾರವನ್ನೂ ನೀಡಿತ್ತು. ಆದರೆ ಸಂಪೂರ್ಣ ಜಖಂಗೊಡಿದ್ದ ಕಾರಿಗೂ ವಿಮಾ ಪರಿಹಾರ ಹಣ ನೀಡುವಂತೆ ಮುನಾವರ್ ಪತ್ನಿ ಫಾತಿಮಾ ಅಫ್ಸರ್​ ವಿರಾಜಪೇಟೆ ಹೆಚ್ಚುವರಿ ಸೆಷನ್ಸ್​ ನ್ಯಾಲಾಯಕ್ಕೆ ಅರ್ಜಿ ಸಲ್ಲಿಸಿದ್ದರು.  ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿದಾರರಿಗೆ ವಿಮಾ ಪರಿಹಾರ ಹಣ ರೂ 1,48,130 ಪಾವತಿಸುವಂತೆ ಆದೇಶ ಮಾಡಿತ್ತು.

ಇದನ್ನೂ ಓದಿ: ಬೆಂಗಳೂರು: ಟ್ರಾಫಿಕ್​ ಪೊಲೀಸ್​​​ ಕಾನ್ಸ್‌ಟೇಬಲ್ ಕಾರ್ಯಕ್ಕೆ ಕಮಿಷನರ್ ಬಿ ದಯಾನಂದ್ ಶ್ಲಾಘನೆ

ಇದನ್ನು ಪ್ರಶ್ನಿಸಿ ಕೆಎಸ್​ಆರ್​ಟಿಸಿ ಹೈಕೋರ್ಟ್​ ಮೊರೆ ಹೋಗಿತ್ತು. ಆದರೆ ಹೈಕೋರ್ಟ್​ ಕೆಎಸ್​ಆರ್​ಟಿಸಿ ಅರ್ಜಿಯನ್ನು ತಳ್ಳಿಹಾಕಿ ನ್ಯಾಯಾಲಯದ ಆದೇಶ ಪಾಲಿಸುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿರಾಜಪೇಟೆ ನ್ಯಾಯಾಲಯ 2021ರ ಮಾರ್ಚ್​ನಲ್ಲಿ ಅಪಘಾತ ಪರಿವಹಾರ ವಿಮಾ ಹಣ ಪಾವತಿಸುವಂತೆ ಸಾರಿಗೆ ನಿಗಮಕ್ಕೆ ಬಹಳಷ್ಟು ಬಾರಿ ಸೂಚಿಸಿತ್ತು. ಆದರೂ ನಿಗಮ ನ್ಯಾಯಾಲಯದ ಆದೇಶವನ್ನು ನಿರ್ಲಕ್ಷ್ಯ ಮಾಡುತ್ತಲೇ ಬಂದಿತ್ತು.

ಇದನ್ನೂ ಓದಿ: ಮಡಿಕೇರಿಯಲ್ಲಿ KSRTC ಬಸ್ ಚಾಲಕನ ಮತ್ತೊಂದು ಎಡವಟ್ಟು: ಯೋಧನ ಪ್ರತಿಮೆಗೆ ಸಾರಿಗೆ ಬಸ್ ಡಿಕ್ಕಿ

ಈ ಹಿನ್ನೆಲೆಯಲ್ಲಿ ವಿರಾಜಪೇಟೆ ಹೆಚ್ಚುವರಿ ನ್ಯಾಯಾಲಯ ಇದೀಗ ಸಾರಿಗೆ ಬಸ್​ ಅನ್ನೇ ಜಪ್ತಿ ಮಾಡುವಂತೆ ಆದೇಶ ಮಾಡಿತು. ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ವಿರಾಜಪೇಟೆ ಬಸ್​ ನಿಲ್ದಾಣಕ್ಕೆ ತೆರಳಿ ಪ್ರಕರಣಕ್ಕೆ ಸಂಬಂಧಪಟ್ಟ ಕೊಳ್ಳೇಗಾಲ ಡಿಪೋಕ್ಕೆ ಸೇರಿದ ಬಸ್​ ಅನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಪರವಾಗಿ ವಿರಾಜಪೇಟೆ ವಕೀಲ ಟಿಪಿ ಕೃಷ್ಣ. ರಾಕೇಶ್ ಹಾಗೂ ಸಿ. ದರ್ಶನ್​ ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್