ಭ್ರೂಣ ಹತ್ಯೆ ಕಿಂಗ್ ಪಿನ್ ಆರೋಪಿ ವೈದ್ಯ ಕೊಡಗಿನಲ್ಲಿ ಸಾವು: ಸೂಸೈಡ್ ಮಾಡಿಕೊಂಡ್ರಾ ಡಾಕ್ಟರ್?

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಗ್ರಾಮದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಿಂತಿದ್ದ ಕಾರಿನಲ್ಲಿ ವೈದ್ಯ ಹೆಣವಾಗಿ ಪತ್ತೆಯಾಗಿರುವಂತಹ ಘಟನೆ ನಡೆದಿದೆ. ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕೇಸ್​ನಲ್ಲಿ ಹೆಸರು ಕೇಳಿಬಂದಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಕರೆದಿದ್ದರು. ಹೀಗಾಗಿ ಕಾರಿನಲ್ಲಿಯೇ ಇಂಜೆಕ್ಷನ್​ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಭ್ರೂಣ ಹತ್ಯೆ ಕಿಂಗ್ ಪಿನ್ ಆರೋಪಿ ವೈದ್ಯ ಕೊಡಗಿನಲ್ಲಿ ಸಾವು: ಸೂಸೈಡ್ ಮಾಡಿಕೊಂಡ್ರಾ ಡಾಕ್ಟರ್?
ಮೃತ ವೈದ್ಯ ಸತೀಶ್
Follow us
Gopal AS
| Updated By: ಗಂಗಾಧರ​ ಬ. ಸಾಬೋಜಿ

Updated on:Dec 01, 2023 | 10:06 PM

ಕೊಡಗು, ಡಿಸೆಂಬರ್​​ 01: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಿಂತಿದ್ದ ಕಾರಿನಲ್ಲಿ ವೈದ್ಯ ಹೆಣ (body found) ವಾಗಿ ಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಗ್ರಾಮದಲ್ಲಿ ನಡೆದಿದೆ. ಮಂಡ್ಯ ತಾಲೂಕಿನ ಶಿವಳ್ಳಿ ನಿವಾಸಿಯಾಗಿರುವ ಡಾ.ಸತೀಶ್ ಮೃತ ವೈದ್ಯ. ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕೇಸ್​ನಲ್ಲಿ ಸತೀಶ್ ಹೆಸರು ಕೇಳಿಬಂದಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಾ.ಸತೀಶ್​ನನ್ನು ವಿಚಾರಣೆಗೆ ಕರೆದಿದ್ದರು. ಹೀಗಾಗಿ ಕಾರಿನಲ್ಲಿಯೇ ಇಂಜೆಕ್ಷನ್​ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಡಾ ಸತೀಸ್ ಮೂಲತಃ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಶಿವಳ್ಳಿ ಗ್ರಾಮದಲ್ಲಿ ಕ್ಲಿನಿಕ್ ನಡೆಸುತ್ತಿದ್ದರು. ಜೊತೆಗೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಸನೂರು ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಲೆಮನೆಗೆ ಆರೋಗ್ಯ ಸಚಿವರು ಭೇಟಿ ನೀಡಿದ್ದಾಗ ಸ್ಥಳೀಯರು ಸತೀಶ್ ಬಗ್ಗೆ ಮಾಹಿತಿ ನೀಡಿದ್ದರು. ಡಾ.ಸತೀಶ್ ವಿಚಾರಣೆ ಮಾಡುವಂತೆ ಆರೋಗ್ಯ ಸಚಿವ ಹೇಳಿದ್ದರು. ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿದ್ದು, ಕಾರಿನಲ್ಲಿ ಸಿರೆಂಜ್ ಮತ್ತು ಔಷಧಿ ಡಬ್ಬಿ ಪತ್ತೆಯಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ: ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ

ಸದ್ಯ ವೈದ್ಯ ಅನುಮಾನಾಸ್ಪದ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಡಾ ಸತೀಶ್​ ಬಹಳ ಒಳ್ಳೆಯ ವೈದ್ಯ: ಆಶ್ವಥಿ 

ಕೊಸನೂರು ಆರೋಗ್ಯ ಕೇಂದ್ರದ ಸಿಬ್ಬಂದಿ ಆಶ್ವಥಿ ಮಾತನಾಡಿದ್ದು, ಡಾ ಸತೀಶ್​ ಇಂದು ಬೆಳಗ್ಗೆ ಎಂದಿನಂತೆ ತಮ್ಮ ಕಾರಿನಲ್ಲಿ ಆರೋಗ್ಯ ಕೇಂದ್ರಕ್ಕೆ ಬಂದಿದ್ದಾರೆ. ಬರುವಾಗ ಸ್ವಲ್ಪ ಸುಸ್ತು ಆಗುತ್ತಿದೆ ಎಂದಿದ್ದಾರೆ. ಅದಕ್ಕೆ ನಾನೇ ಅವರಿಗೆ ಟೀ ಮಾಡಿಕೊಟ್ಟೆ. ಟೀ ಕುಡಿದ ನಂತರ ಅವರು ಕಾರಿನಲ್ಲಿ ಸ್ವಲ್ಪ ರೆಸ್ಟ್ ಮಾಡುತ್ತೇನೆ ಅಂತ ಹೋದವರು ಮತ್ತೆ ಬರಲೇ ಇಲ್ಲ.

ಇದನ್ನೂ ಓದಿ: ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ರಾತ್ರೋ ರಾತ್ರಿ ಮಾತಾ ಆಸ್ಪತ್ರೆ ಗೋಡೆ ಮೇಲೆ 5 ತಿಂಗಳ ಹಳೆ ನೋಟಿಸ್; ಅನುಮಾನಕ್ಕೆ ಕಾರಣವಾದ ಅಧಿಕಾರಿಗಳ ನಡೆ

ಬಹಳ ಒಳ್ಳೆಯ ವೈದ್ಯರಾಗಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿ ಬರುತ್ತಿದ್ದ ರೋಗಿಗಳನ್ನು ಬಹಳ ಪ್ರೀತಿಯಿಂದ ನೋಡುತ್ತಿದ್ದರು. ಆದರೆ ಇದೀಗ ಅವರು ಈ ರೀತಿ ಮಾಡಿ ಕೊಳ್ಳುತ್ತಾರೆ ಎಂಬುದನ್ನು ನಂಬಲಾಗುತ್ತಿಲ್ಲ ಎಂದಿದ್ದಾರೆ.

ಡಾ.ಸತೀಶ್ ಸ್ನೇಹಿತ ಸಂದೀಪ್ ಹೇಳಿದ್ದಿಷ್ಟು

ವೈದ್ಯ ಡಾ.ಸತೀಶ್ ಸ್ನೇಹಿತ ಸಂದೀಪ್ ಹೇಳಿಕೆ ನೀಡಿದ್ದು, 18 ವರ್ಷದಿಂದ ಡಾ.ಸತೀಶ್ ಗುತ್ತಿಗೆ ವೈದ್ಯರಾಗಿ ಕೆಲಸ ಮಾಡ್ತಿದ್ದರು. ಡಾ.ಸತೀಶ್​ಗೆ ವೈದ್ಯ ವೃತ್ತಿ ಖಾಯಂ ಆಗಿರಲಿಲ್ಲ. ನನ್ನ ಬಳಿಯೂ ವೈದ್ಯ ಡಾ.ಸತೀಶ್ ನೋವು ತೋಡಿಕೊಂಡಿದ್ದರು. ಮಗನ ಆರೋಗ್ಯ ಸರಿ ಇರಲಿಲ್ಲ, ಸತೀಶ್​ಗೂ ಆರೋಗ್ಯ ಸಮಸ್ಯೆ ಇತ್ತು. ವೈದ್ಯ ಡಾ.ಸತೀಶ್​ ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು. ಮಾನಸಿಕವಾಗಿ ನೊಂದು ಡಾ.ಸತೀಶ್​ ಈ ನಿರ್ಧಾರ ಮಾಡಿರಬಹುದು ಎಂದು ಹೇಳಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:51 pm, Fri, 1 December 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್