AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nursing Officer: ಕೊಡಗು ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ; ನರ್ಸಿಂಗ್​ ಆಫೀಸರ್​ ಹುದ್ದೆಗೆ ನೇರ ಸಂದರ್ಶನ

ಕೊಡಗು ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಆಗಸ್ಟ್ 28 ರಂದು ಮಡಿಕೇರಿಯಲ್ಲಿ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆ ಇಲ್ಲ. ಆಸಕ್ತರು ಮೂಲ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಬಹುದು. ಇದು ಕೊಡಗು ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ.

Nursing Officer: ಕೊಡಗು ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ; ನರ್ಸಿಂಗ್​ ಆಫೀಸರ್​ ಹುದ್ದೆಗೆ ನೇರ ಸಂದರ್ಶನ
ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನೆರ ಸಂದರ್ಶನ
ಅಕ್ಷತಾ ವರ್ಕಾಡಿ
|

Updated on:Aug 20, 2026 | 3:51 PM

Share

ಕೊಡಗು ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಸಿಕ್ಕಿದೆ. ಜಿಲ್ಲೆಯ ತಾಲೂಕು ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಶುಶ್ರೂಷಾಧಿಕಾರಿ (Nursing Officer) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಮಡಿಕೇರಿ ಪ್ರಕಟಣೆ ಹೊರಡಿಸಿದೆ.

ಆಯ್ಕೆ ವಿಧಾನ ಮತ್ತು ಮಾನದಂಡ:

ಈ ನೇಮಕಾತಿಯನ್ನು ‘ರೋಸ್ಟರ್ ಕಂ ಮೆರಿಟ್’ ಆಧಾರದ ಮೇಲೆ ನಡೆಸಲಾಗುತ್ತದೆ. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ, ಬದಲಾಗಿ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಪಟ್ಟಿ ಹಾಗೂ ಸಂಬಂಧಿತ ದಾಖಲೆಗಳೊಂದಿಗೆ ನಿಯಮಿತ ದಿನಾಂಕದಂದು ನೇರವಾಗಿ ಕಚೇರಿಗೆ ಹಾಜರಾಗಬೇಕಿರುತ್ತದೆ.

  • ದಿನಾಂಕ: 28.08.2026
  • ಸಮಯ: ಪೂರ್ವಾಹ್ನ 11:00 ಗಂಟೆಯ ಒಳಗೆ
  • ಸ್ಥಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ
  • ವಿಶೇಷ ಸೂಚನೆ: ಅರ್ಜಿ ಸಲ್ಲಿಕೆಗೆ ನೀಡಲಾದ ದಿನಾಂಕದಂದೇ (28.08.2026) ನೇರ ಸಂದರ್ಶನ ನಡೆಯಲಿದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಹಾಜರುಪಡಿಸಬೇಕಾದ ದಾಖಲೆಗಳು:

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲೆಗಳು (Original Documents), ಅಂಕಪಟ್ಟಿಗಳು ಹಾಗೂ ಅಗತ್ಯ ಪ್ರಮಾಣಪತ್ರಗಳನ್ನು ತಪ್ಪದೇ ತರಬೇಕಾಗಿ ವಿನಂತಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಮಡಿಕೇರಿಯ ಜಿಲ್ಲಾ ಆರೋಗ್ಯ ಕಚೇರಿಯನ್ನು ನೇರವಾಗಿ ಅಥವಾ ಕೆಳಗಿನ ಮಾಧ್ಯಮಗಳ ಮೂಲಕ ಸಂಪರ್ಕಿಸಬಹುದು.

  • ಫೋನ್ ಸಂಖ್ಯೆ: 08272-225443
  • ಇಮೇಲ್: dhokodagu@gmail.com

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:50 pm, Thu, 20 August 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್