ಜಮ್ಮು- ಕಾಶ್ಮೀರದಲ್ಲಿ ಕೊಡಗು ಮೂಲದ ಯೋಧ ಅಲ್ತಾಫ್ ಅಹ್ಮದ್ ಹುತಾತ್ಮ; ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವ ಮಾಹಿತಿ

ದ್ವಿತೀಯ ಪಿಯುಸಿವರೆಗೂ ವಿರಾಜಪೇಟೆಯಲ್ಲಿ ವಿದ್ಯಾಭ್ಯಾಸ ನಡೆಸಿದ್ದ ಅಲ್ತಾಫ್, ಪಿಯುಸಿ ಬಳಿಕ ಆರ್ಮಿ ಸೇರಿದ್ದರು. ಅಪಾರ ದೇಶಭಕ್ತನಾಗಿದ್ದ ಅಲ್ತಾಫ್, 19 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದ ಯೋಧ ಅಲ್ತಾಫ್ ಹುತಾತ್ಮರಾಗಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿ ಕೊಡಗು ಮೂಲದ ಯೋಧ ಅಲ್ತಾಫ್ ಅಹ್ಮದ್ ಹುತಾತ್ಮ; ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವ ಮಾಹಿತಿ
ಕೊಡಗು ಮೂಲದ ಯೋಧ ಅಲ್ತಾಫ್ ಅಹ್ಮದ್ ಹುತಾತ್ಮ
Edited By:

Updated on: Feb 23, 2022 | 4:48 PM

ಮಡಿಕೇರಿ: ಜಮ್ಮು- ಕಾಶ್ಮೀರದಲ್ಲಿ ಕೊಡಗು ಮೂಲದ ಯೋಧ ಹುತಾತ್ಮರಾದ ದುರ್ಘಟನೆ ನಡೆದಿದೆ. ಹವಾಲ್ದಾರ್ ಅಲ್ತಾಫ್ ಅಹ್ಮದ್ (37) ಎಂಬ ಯೋಧ ಹುತಾತ್ಮರಾಗಿದ್ದಾರೆ. ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ಎಒಸಿ ರೆಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಲ್ತಾಫ್ ಸಾವನ್ನಪ್ಪಿದ್ದಾರೆ. ಸದ್ಯ ಯೋಧನ ಕುಟುಂಬ ಕೇರಳದ‌ ಮಟ್ಟನೂರು ಜಿಲ್ಲೆಯಲ್ಲಿ ನೆಲೆಸಿದೆ.

ವಿರಾಜಪೇಟೆಯ ಮೀನುಪೇಟೆಯಲ್ಲಿ ಹುಟ್ಟಿ ಬೆಳೆದಿದ್ದ ಅಲ್ತಾಫ್ ಕುಟುಂಬ ಕಳೆದ 10 ವರ್ಷಗಳಿಂದ ಕೇರಳಕ್ಕೆ ಶಿಫ್ಟ್ ಆಗಿತ್ತು ಎಂದು ತಿಳಿದುಬಂದಿದೆ. ದ್ವಿತೀಯ ಪಿಯುಸಿವರೆಗೂ ವಿರಾಜಪೇಟೆಯಲ್ಲಿ ವಿದ್ಯಾಭ್ಯಾಸ ನಡೆಸಿದ್ದ ಅಲ್ತಾಫ್, ಪಿಯುಸಿ ಬಳಿಕ ಆರ್ಮಿ ಸೇರಿದ್ದರು. ಅಪಾರ ದೇಶಭಕ್ತನಾಗಿದ್ದ ಅಲ್ತಾಫ್, 19 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದ ಯೋಧ ಅಲ್ತಾಫ್ ಹುತಾತ್ಮರಾಗಿದ್ದಾರೆ.

ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಕೋಟ್ಯಂತರ ಮೌಲ್ಯದ ಹರಳು ಕಲ್ಲುಗಳ ಲೂಟಿ; ಅರಣ್ಯ ಇಲಾಖೆ ಸಿಬ್ಬಂದಿಯಿಂದಲೇ ದೋಖಾ, ನಾಗರಿಕರ ಆಕ್ರೋಶ

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಭಾರಿ ಹಿಮಪಾತ; ಹಿಮದಡಿ ಸಿಲುಕಿ ನಾಪತ್ತೆಯಾಗಿರುವ ಭಾರತೀಯ ಸೇನೆಯ ಏಳು ಯೋಧರು

TV9 Web

TV9 Kannada

Read More
Loading...
Unable to load recommendations.
Follow Us