ಕೊಡಗು ಪೊಲೀಸರ ಭರ್ಜರಿ ಕಾರ್ಯಾಚರಣೆ: 25 ಜನ ಡ್ರಗ್ಸ್ ಪೆಡ್ಲರ್​ಗಳ ಬಂಧನ

ಕೊಡಗು ಜಿಲ್ಲೆಯ ವಿವಿಧಡೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್​ ಸೇವಿಸುತ್ತಿದ್ದ ಮತ್ತು ಮಾರುತ್ತಿದ್ದ 25 ಜನರನ್ನು ಬಂಧಿಸಿದ್ದಾರೆ.

ಕೊಡಗು ಪೊಲೀಸರ ಭರ್ಜರಿ ಕಾರ್ಯಾಚರಣೆ: 25 ಜನ ಡ್ರಗ್ಸ್ ಪೆಡ್ಲರ್​ಗಳ ಬಂಧನ
ಸಾಂದರ್ಭಿಕ ಚಿತ್ರ
Follow us
Gopal AS
| Updated By: ವಿವೇಕ ಬಿರಾದಾರ

Updated on: Jul 17, 2023 | 2:38 PM

ಕೊಡಗು: ಕೊಡಗು ಜಿಲ್ಲೆ ವಿವಿಧಡೆ ಪೊಲೀಸರು (Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್​ (Drugs) ಸೇವಿಸುತ್ತಿದ್ದ ಮತ್ತು ಮಾರುತ್ತಿದ್ದ 25 ಜನರನ್ನು ಬಂಧಿಸಿದ್ದಾರೆ. ಈ ವೇಳೆ ಆರೋಪಿಗಳ ಬಳಿ ಇದ್ದ ಗಾಂಜಾ (Ganja), ಎಲ್​ಎಸ್​ಡಿ ಡ್ರಗ್ಸ್​ ಜಪ್ತಿ ಮಾಡಿದ್ದಾರೆ. ಬಂಧಿತರಲ್ಲಿ 14 ಜನ ಪ್ರವಾಸಿಗರಿದ್ದು, ಇವರು ಹೋಂಸ್ಟೇಯೊಂದರಲ್ಲಿ ಮಾದಕವಸ್ತು ಸೇವಿಸುತ್ತಿದ್ದರು. ಅಲೀಂ ಅಹ್ಮದ್, ಮೋಸಿನ್, ಸಾಗರ್, ರೆಹಮಾನ್, ಚೇತನ್, ಶಮೀರ್, ನಿಸಾರ್, ಜಬ್ಬಾರ್, ಇಮ್ರಾನ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 1.700 ಕೆಜಿ ಗಾಂಜಾ, ಎಲ್​ಎಸ್​ಡಿ ಮಾತ್ರೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

 ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ವ್ಯಕ್ತಿಯ ಬಂಧನ

ಬೆಂಗಳೂರು: ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ಬಿಸ್ಟಿನ್ ರಾಯ್ ಬಂಧಿತ ಆರೋಪಿ. ಆರೋಪಿಯಿಂದ ಪೊಲೀಸರು 20 ಲಕ್ಷ ಬೆಲೆಯ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಆರೋಪಿ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದನು.

ಇದನ್ನೂ ಓದಿ: ಗಾಂಜಾ ಪೆಡ್ಲರ್​​ಗಳ ಬೆನ್ನತ್ತಿ ನೆರೆ ರಾಜ್ಯಕ್ಕೆ ತೆರಳಿದ ಬೆಂಗಳೂರು ಪೊಲೀಸರು: ಮಹಾರಾಷ್ಟ್ರದಲ್ಲಿ ನಡೆಯಿತು ಸಿನಿಮಿಯ ಘಟನೆ

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕೇನ್ ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ

ಬೆಂಗಳೂರು:  ನಗರದಲ್ಲಿ ಕೊಕೇನ್ ಮಾರುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಮರ್ಕ್ ಜಸ್ಟಿಸ್​ ಬಂಧಿತ ಆರೋಪಿ. ಆರೋಪಿ ಬಳಿ ಇದ್ದ 10 ಲಕ್ಷ ಮೌಲ್ಯದ ಕೊಕೇನ್​ ಅನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಆರೋಪಿ ಪುಸ್ತಕ, ಡಿಕ್ಷನರಿಯ ಮಧ್ಯೆ ಸೀಕ್ರೆಟ್ ಲಾಕರ್​ ಮಾಡಿ ಅದರಲ್ಲಿ ಕೊಕೇನ್ ಇಟ್ಟು ಸಾಗಿಸುತ್ತಿದ್ದನು. ಇದು ಹೊರಗಿನಿಂದ ನೋಡಿದವರಿಗೆ ಪುಸ್ತಕ, ಡಿಕ್ಷನರಿಯಷ್ಟೇ ಕಾಣುತ್ತಿತ್ತು. ಇದರಿಂದ ಯಾರಿಗೂ ಅನುಮಾನ ಬಾರದ ರೀತಿ ಡ್ರಗ್ಸ್ ಪೂರೈಸುತ್ತಿದ್ದನು. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ