ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ: ಹನಿಟ್ರ್ಯಾಪ್, ಪೊಲೀಸ್​ನಿಂದ ಮಾನಸಿಕ‌ ಕಿರುಕುಳ ಆರೋಪ

ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ ಆಗಿದ್ದು, ಜೊತೆಗೆ ತನ್ನನ್ನು ಮಹಿಳೆಯೊಬ್ಬಳು ಹನಿಟ್ರ್ಯಾಪ್ ಮಾಡಿರುವುದಾಗಿ ಆರೋಪ ಮಾಡಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ಘಟನೆ ನಡೆದಿದೆ. ಸತೀಶ್ ಎಂಬ ಪೊಲೀಸ್​ ಹೆಸರನ್ನೂ ಯೋಧ ಸಂದೇಶ್ ಬರೆದಿದ್ದಾರೆ. ಪೊಲೀಸ್ ಮಾನಸಿಕ‌ ಕಿರುಕುಳ ಆರೋಪ ಮಾಡಿದ್ದಾರೆ ಎಂದಿದ್ದಾರೆ.

ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ: ಹನಿಟ್ರ್ಯಾಪ್, ಪೊಲೀಸ್​ನಿಂದ ಮಾನಸಿಕ‌ ಕಿರುಕುಳ ಆರೋಪ
ಜೀವಿತಾ, ನಿವೃತ್ತ ಯೋಧ ಸಂದೇಶ್
Follow us
Gopal AS
| Updated By: ಗಂಗಾಧರ​ ಬ. ಸಾಬೋಜಿ

Updated on:Nov 07, 2023 | 9:25 PM

ಕೊಡಗು, ನವೆಂಬರ್​​ 07: ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ (soldier) ನಾಪತ್ತೆ ಆಗಿದ್ದು, ಜೊತೆಗೆ ತನ್ನನ್ನು ಮಹಿಳೆಯೊಬ್ಬಳು ಹನಿಟ್ರ್ಯಾಪ್ ಮಾಡಿರುವುದಾಗಿ ಆರೋಪ ಮಾಡಿದ್ದಾರೆ. ಜಿಲ್ಲೆಯ ಮಡಿಕೇರಿ ನಗರದ ಉಕ್ಕುಡ ನಿವಾಸಿ ಸಂದೇಶ್ (38) ನಾಪತ್ತೆಯಾದ ನಿವೃತ್ತ ಯೋಧ. ಜೀವಿತಾ ಎಂಬ ಮಹಿಳೆ ವಿರುದ್ಧ ಸಂದೇಶ್​ ಆರೋಪ ಮಾಡಿದ್ದಾರೆ. ಸತೀಶ್ ಎಂಬ ಪೊಲೀಸ್​ ಹೆಸರನ್ನೂ ಯೋಧ ಸಂದೇಶ್ ಬರೆದಿದ್ದಾರೆ. ಪೊಲೀಸ್ ಮಾನಸಿಕ‌ ಕಿರುಕುಳ ಆರೋಪ ಮಾಡಿದ್ದಾರೆ.

ಮಡಿಕೇರಿ ನಗರದ ಪಂಪಿನ ಕೆರೆ ಬಳಿ ಸಂದೇಶ್​ಗೆ ಸೇರಿದ ವಸ್ತು ಪತ್ತೆಯಾಗಿವೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರಿಂದ ಶೋಧ ಕಾರ್ಯ ಆರಂಭಿಸಲಾಗಿದೆ.

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆ ಶವ ಪತ್ತೆ

ದಾವಣಗೆರೆ: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆ ಶವ ಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದಿದೆ. ಪತ್ನಿ ತೇಜಸ್ವಿನಿ(30)ಯನ್ನು ಪತಿಯೇ ಕೊಲೆಗೈದಿರುವ ಆರೋಪ ಕೇಳಿಬಂದಿದೆ. ಘಟನೆ ಬಳಿಕ ಪತಿ ಗುಡದಯ್ಯ, ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ: ಹುಲಿವೇಷ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗನನ್ನು 58 ಬಾರಿ ಕೊಚ್ಚಿ ಕೊಲೆ: ಕಾಂಗ್ರೆಸ್​ ಮುಖಂಡ ಸೇರಿ ನಾಲ್ವರು ಪೊಲೀಸ್ ವಶಕ್ಕೆ

ನಾಲ್ಕು ವರ್ಷಗಳ ಹಿಂದೆ ಮದುವೆ ಆಗಿತ್ತು, 2 ಹೆಣ್ಣು ಮಕ್ಕಳಿದ್ದವು. ಪತಿ ಹಾಗೂ ಕುಟುಂಬಸ್ಥರ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ. ಹರಿಹರ ಗ್ರಾಮಾಂತರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹೆದ್ದಾರಿ ದರೋಡೆ ಗ್ಯಾಂಗ್​ನ ಐವರ ಬಂಧನ

ದಾವಣಗೆರೆ: ಡಿಸಿಆರ್​ಬಿ‌ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಹೆದ್ದಾರಿ ದರೋಡೆ ಗ್ಯಾಂಗ್​ನ ಐವರನ್ನು ಬಂಧಿಸಿದ್ದಾರೆ. ದಾವಣಗೆರೆ ತಾಲೂಕಿನ ಆನಗೋಡ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ‌ಕಳೆದ ಅಕ್ಟೋಬರ್ 31 ರಂದು‌ ಘಟನೆ ನಡೆದೆ. ಅಂದು ರಾತ್ರಿ ತುಮಕೂರು ಜಿಲ್ಲೆಯ ಮೂಲದ ಮಾದಿಹಳ್ಳಿ ಸುರೇಶ್ ಹಾಗೂ ಆತನ ಇಬ್ಬರು ಸ್ನೇಹಿತರಿಗೆ ಚಾಕು ತೊರಿಸಿ ಹಲ್ಲೆ ಮಾಡಿ 15 ಸಾವಿರ ರೂ. ಹಾಗೂ ಎರಡು ಮೊಬೈಲ್​ಗಳನ್ನು ಆರೋಪಿಗಳು ಕಸಿದು ಕೊಂಡಿದ್ದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಮಗುವನ್ನು ಕಿಡ್ನಾಪ್ ಮಾಡಿ ಹುಬ್ಬಳ್ಳಿಯಲ್ಲಿ ಬಿಟ್ಟು ಹೋದ ಕಿಡ್ನಾಪರ್

ಕುಮಾರ ಬಿ (26), ಮಂಜುನಾಥ ಯು ಎಸ್ (24), ಪ್ರವೀಣಕುಮಾರ ಎಬಿ (22), ಪರಶುರಾಮ್ (20) ಹಾಗೂ ಶಿವಕುಮಾರ ಡಿ (21) ಬಂಧಿತರು. ಇವರೆಲ್ಲ ದಾವಣಗೆರೆ ಸುತ್ತಮುತ್ತಲಿನ ಗ್ರಾಮಗಳ‌ನಿವಾಸಿಗಳು. ತಂಡ ಕಟ್ಟಿಕೊಂಡು ರಾತ್ರಿಯಾಗುತ್ತಿದ್ದಂತೆ ಹೆದ್ದಾರಿ ದರೋಡೆಗೆ ಮಾಡುತ್ತಿದ್ದರು. ಆರೋಪಿಗಳಿಂದ ಒಂದು ಆಟೋ, ಎರಡು ಮೊಬೈಲ್ ಹಾಗೂ ಐದು ಸಾವಿರ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:14 pm, Tue, 7 November 23

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು