AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ ಕದನದ ಬಳಿಕ ಕೊಡಗಿನ ತಾಣಗಳಿಗೆ ಪ್ರವಾಸಿಗರ ಭೇಟಿ ಹೆಚ್ಚಳ!

ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ, ಅದರ ನಂತರ ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಘರ್ಷ ದೇಶದ ಜನತೆಯಲ್ಲಿ ಆತಂಕ ಸೃಷ್ಟಿಸಿದ್ದರ ಜತೆಗೆ, ಜೀವಹಾನಿಗೂ ಕಾರಣವಾಗಿದ್ದು ನಿಜ. ಆದರೆ, ಕಾಶ್ಮೀರದ ಬೆಳವಣಿಗೆಯಿಂದ ಕೊಡಗು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮಾತ್ರ ಲಾಭವಾಗಿದೆ ಎನ್ನುತ್ತಿವೆ ಅಂಕಿಅಂಶಗಳು! ಅದು ಹೇಗೆ ಎನ್ನುತ್ತೀರಾ? ತಿಳಿಯಲು ಮುಂದೆ ಓದಿ.

ಕಾಶ್ಮೀರ ಕದನದ ಬಳಿಕ ಕೊಡಗಿನ ತಾಣಗಳಿಗೆ ಪ್ರವಾಸಿಗರ ಭೇಟಿ ಹೆಚ್ಚಳ!
ಕಾಶ್ಮೀರ ಕದನದ ಬಳಿಕ ಕೊಡಗು ಪ್ರವಾಸಿಗರ ಸಂಖ್ಯೆ ಹೆಚ್ಚಳ!
Gopal AS
| Edited By: |

Updated on: May 13, 2025 | 12:58 PM

Share

ಕೊಡಗು, ಮೇ 13: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮುಗ್ದ ಪ್ರವಾಸಿಗರನ್ನು ಭಯೋತ್ಪಾದಕರು ಹತ್ಯೆ ಮಾಡಿದ ನಂತರ ಅಲ್ಲಿನ ಪ್ರವಾಸೋದ್ಯಮದ (Jammu Kashmir Tourism) ಮೇಲೆ ಹೊಡೆತ ಬಿದ್ದಿತ್ತು. ಕೊನೆಗೆ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿ ಅನೇಕ ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಿತ್ತು. ಈ ಬೆಳವಣಿಗೆಗಳ ಸಂದರ್ಭ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಅಲ್ಲಿನ ಪ್ರವಾಸೋದ್ಯಮ ಚಟುವಟಿಕೆಗೆ ಬ್ರೇಕ್ ಹಾಕಿತ್ತು. ಅದಾದ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿ, ಸದ್ಯ ಕದನ ವಿರಾಮಕ್ಕೆ ಉಭಯ ರಾಷ್ಟ್ರಗಳು ಸಮ್ಮತಿಸಿವೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕೊಡಗು (Kodagu) ಜಿಲ್ಲೆಗೆ ಪ್ರವಾಸ ಬರುವವರ (Kodagu Tourists) ಸಂಖ್ಯೆಯಲ್ಲಿ ಏರಿಕೆಯಾಗಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ.

ದಕ್ಷಿಣ ಕಾಶ್ಮೀರದತ್ತ ಮುಖ ಮಾಡಿದ ಪ್ರವಾಸಿಗರು

ಕಾಶ್ಮೀರ ಪ್ರವಾಸಕ್ಕೆ ಪ್ಲಾನ್ ಮಾಡಿಕೊಂಡಿದ್ದ ಬೇರೆ ಬೇರೆ ರಾಜ್ಯಗಳ ಸಾವಿರಾರು ಪ್ರವಾಸಿಗರು ಇದೀಗ ಕೊಡಗಿನತ್ತ ಮುಖ ಮಾಡಿದ್ದಾರೆ. ಕಳೆದ 15 ದಿನಗಳಲ್ಲಿ ಜಿಲ್ಲೆಗೆ ಸುಮಾರು 30 ಸಾವಿರಕ್ಕೂ ಅಧಿಕ ಪ್ರವಾಸಿಗರು ಹೆಚ್ಚುವರಿಯಾಗಿ ಆಗಮಿಸಿದ್ದಾರೆ.

ಲಾಭವಷ್ಟೇ ಅಲ್ಲ!

ಒಂದೆಡೆ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಜನರು ಕೊಡಗಿಗೆ ಬರುವುದು ಹೆಚ್ಚಾಗಿದ್ದರೆ, ಮತ್ತೊಂದಡೆ ಉತ್ತರ ಭಾರತದ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯೂ ಆಗಿದೆ. ಭಾರತ ಹಾಗೂ ಪಾಕಿಸ್ತಾನ ಕದನಕ್ಕೂ ಮೊದಲು ಉತ್ತರ ಭಾರತದ ಸಹಸ್ರಾರು ಪ್ರವಾಸಿಗರು ಕೊಡಗು ಜಿಲ್ಲೆಗೆ ಪ್ರವಾಸಕ್ಕೆ ಬುಕಿಂಗ್ ಮಾಡಿಕೊಡಿದ್ದರು. ಆದರೆ, ಉತ್ತರ ಭಾರತದ ಬಹುತೇಕ ವಿಮಾನ ನಿಲ್ದಾಣಗಳು ಬಂದ್ ಆಗಿದ್ದರಿಂದ ಬುಕಿಂಗ್​ಗಳು ಕ್ಯಾನ್ಸಲ್ ಆಗಿವೆ. ಹಾಗಾಗಿ ಉತ್ತರ ಭಾರತದ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ.

ಇದನ್ನೂ ಓದಿ
Image
ಪ್ರಧಾನಿ ಮೋದಿ ಈ ವಿಚಾರಗಳನ್ನು ಗೆಲ್ಲಲೇಬೇಕು, ಎಚ್ಚರ ತಪ್ಪಿದ್ರೆ ಸಂಕಷ್ಟ!
Image
ಪಂಜಾಬ್​ನ ಅದಂಪುರ ವಾಯುನೆಲೆಯಲ್ಲಿ ಸೈನಿಕರ ಜೊತೆ ಪ್ರಧಾನಿ ಮೋದಿ ಮಾತುಕತೆ
Image
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
Image
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಇದನ್ನೂ ಓದಿ: ಬೆಂಗಳೂರಿನ ಮಾಲ್​ಗಳಲ್ಲಿ ಕಟ್ಟೆಚ್ಚರ: ಸೆಕ್ಯೂರಿಟಿ ಚೆಕಿಂಗ್, ಭದ್ರತೆ ಹೆಚ್ಚಳ

ಸದ್ಯ ಎಲ್ಲಾ ವಿಮಾನ ನಿಲ್ದಾಣಗಳನ್ನು ಮತ್ತೆ ತೆರೆಯಲಾಗುತ್ತಿದ್ದು, ಕಾಶ್ಮಿರದಲ್ಲಿ ಪ್ರವಾಸೋದ್ಯಮ ಇನ್ನೂ ಶುರುವಾಗದೇ ಇರುವುದಿರಿಂದ ಈ ವಾರದಿಂದ ಜಿಲ್ಲೆಗೆ ಪ್ರವಾಸಿಗರ ಸಂಖ್ಯೆ ದ್ವಿಗುಣವಾಗುವ ನಿರೀಕ್ಷೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ