Tala kaveri: ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ತೀರ್ಥೋದ್ಭವ; ಭಕ್ತರ ಪ್ರವೇಶಕ್ಕಿದ್ದ ನಿರ್ಬಂಧ ತೆರವು

Theerthodbhava: ಭಕ್ತರು ಕೊವಿಡ್ ನೆಗೆಟಿವ್ ರಿಪೋರ್ಟ್ ತರಬೇಕಾಗಿಲ್ಲ. ಆದರೆ ಭಕ್ತರು ಮಾಸ್ಕ್‌ ಧರಿಸುವುದು, ಸಾಮಾಜಿಕ‌ ಅಂತರ ಪಾಲಿಸುವುದು ಕಡ್ಡಾಯವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.

Tala kaveri: ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ತೀರ್ಥೋದ್ಭವ; ಭಕ್ತರ ಪ್ರವೇಶಕ್ಕಿದ್ದ ನಿರ್ಬಂಧ ತೆರವು
ತಲಕಾವೇರಿ
Follow us
TV9 Web
| Updated By: Digi Tech Desk

Updated on:Oct 06, 2021 | 5:57 PM

Tala kaveri Theerthodbhava | ಕೊಡಗು: ತಲಕಾವೇರಿಗೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಿರುವ ಕುರಿತು ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಕಾರಣ ತೀರ್ಥೋದ್ಭವಕ್ಕೆ ಭಕ್ತರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ‌ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.ಆದರೆ ತೀರ್ಥೋದ್ಭವದ ವೇಳೆ ಪುಣ್ಯ ಸ್ನಾನಕ್ಕೆ ಅವಕಾಶವಿಲ್ಲ. ಭಕ್ತರು ಬಂದು ತೀರ್ಥ ತೆಗೆದುಕೊಂಡು ಹೋಗಬಹುದು. ಭಾಗಮಂಡಲದ ತ್ರಿವೇಣಿ‌ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು. ಅಕ್ಟೋಬರ್ 17 ರಂದು ಮಧ್ಯಾಹ್ನ 1.11 ಕ್ಕೆ ತೀರ್ಥೋದ್ಭವವಾಗಲಿದೆ. ಕೊಡಗು ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇಕಡಾ 0.36 ರಷ್ಟಿದೆ. ಹೀಗಾಗಿ ತಲಕಾವೇರಿಗೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಿ ಕೊವಿಡ್ ಮಾರ್ಗಸೂಚಿಗಳನ್ನು ಸಡಿಲಗೊಳಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.

ಭಕ್ತರಿಗೆ ಪ್ರವೇಶ ಕಲ್ಪಿಸಿ ಭಕ್ತರ ಭಾವನೆಗಳನ್ನು ಗೌರವಿಸಿದ್ದೇವೆ. ತಲಕಾವೇರಿಗೆ ಕಾಲ್ನಡಿಗೆಯಲ್ಲಿ ಭಕ್ತರು ತೆರಳಬೇಕಾಗಿಲ್ಲ. ತಲಕಾವೇರಿಗೆ ವಾಹನಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರು ಕೊವಿಡ್ ನೆಗೆಟಿವ್ ರಿಪೋರ್ಟ್ ತರಬೇಕಾಗಿಲ್ಲ. ಆದರೆ ಭಕ್ತರು ಮಾಸ್ಕ್‌ ಧರಿಸುವುದು, ಸಾಮಾಜಿಕ‌ ಅಂತರ ಪಾಲಿಸುವುದು ಕಡ್ಡಾಯವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.

ಕಾವೇರಿ ತೀರ್ಥೋದ್ಭವ ಕಣ್ತುಂಬಿಸಿಕೊಳ್ಳಲು ಅವಕಾಶ ನೀಡಿ ಅಂತ ಕೊಡಗಿನ ಎಲ್ಲಾ ಮೂಲ ನಿವಾಸಿಗಳು ಆಗ್ರಹಪಡಿಸಿದ್ದರು. ಹೊರ ಜಿಲ್ಲೆ ಹೊರ ರಾಜ್ಯದಿಂದ ಜನರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸಿದರೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ ಭಕ್ತರಿಗೆ ಮಾತ್ರ ಅವಕಾಶ ನೀಡಿ ಅಂತ ಜಿಲ್ಲಾಡಳಿತವನ್ನು ಆಗ್ರಹಿಸಿ ಮನವಿ ಮಾಡಿದ್ದರು. ಈಗಾಗಲೇ ಭೂ ಕುಸಿತ ಮತ್ತು ಕೊರೊನಾ ದಿಂದಾಗಿ ಕಾವೇರಿ ಜಾತ್ರೆ ಕಳೆಗುಂದಿ ಹೋಗಿದೆ. ಆದರೆ, ಈ ಬಾರಿಯಾದ್ರೂ ಜಿಲ್ಲೆಗೆ ಸೀಮಿತವಾಗಿ ಜಾತ್ರೆ ನಡೆಸಲು ಅವಕಾಶ ನೀಡಿ ಎಂದು ವಿನಂತಿಸಿದ್ದರು.

ಇದನ್ನೂ ಓದಿ:  

Karnataka Rain: ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದಿನ 2 ದಿನ ಮಳೆ ಸಾಧ್ಯತೆ; ಹಿರಿಯ ವಿಜ್ಞಾನಿ ಗವಾಸ್ಕರ್ ಮಾಹಿತಿ

ನೂರಕ್ಕೆ ನೂರು ಅಂಕಗಳಿಸಬೇಕೆಂಬ ಹುಚ್ಚು ಒತ್ತಡ, ಇದು ಈ ತಲೆಮಾರಿನ ಮೇಲೆ ನಡೆಯುತ್ತಿರುವ ದಾಳಿ

Published On - 4:35 pm, Wed, 6 October 21

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ