ಅಂದು ಕಿಡಿಗೇಡಿಗಳು ಮೊಟ್ಟೆ ಎಸೆದಿದ್ರು, ಈಗ ಕೊಡಗಿನ ಜನಸಮೂಹ ಹೂಮಳೆ ಸುರಿಸಿದ್ದಾರೆ: ಸಿದ್ದರಾಮಯ್ಯ
ಕಳೆದ ಎರಡು ದಿನಗಳಿಂದ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ನಿನ್ನೆ ಮೈಸೂರು ಜಿಲ್ಲಾ ಪ್ರವಾಸ ಮುಗಿಸಿ ಇಂದು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಹೂಮಳೆ ಸುರಿಸುವ ಮೂಲಕ ಸ್ವಾಗತಿಸಿದ್ದಾರೆ. ಈ ಬಗ್ಗೆ ಫೇಸ್ಬುಕ್ ಪೋಸ್ಟ್ ಹಾಕಿರುವ ಸಿಎಂ, ವಿರೋಧ ಪಕ್ಷದ ನಾಯಕನಾಗಿ ಕೊಡಗಿಗೆ ಬಂದಿದ್ದಾಗ ಕೆಲವು ಕಿಡಿಗೇಡಿಗಳು ನನ್ನ ಮೇಲೆ ಮೊಟ್ಟೆ ಎಸೆದಿದ್ದರು. ಮುಖ್ಯಮಂತ್ರಿಯಾಗಿ ಬಂದಾಗ ಹೂಮಳೆಯಲ್ಲಿ ನನ್ನನ್ನು ಮುಳುಗಿಸಿದೆ ಎಂದಿದ್ದಾರೆ.
ಕೊಡಗು, ಜನವರಿ 25: ವಿರೋಧ ಪಕ್ಷದ ನಾಯಕನಾಗಿ ಕೊಡಗಿಗೆ ಬಂದಿದ್ದಾಗ ಕೆಲವು ಕಿಡಿಗೇಡಿಗಳು ನನ್ನ ಮೇಲೆ ಮೊಟ್ಟೆ ಎಸೆದಿದ್ದರು. ಇದೀಗ ಮುಖ್ಯಮಂತ್ರಿಯಾಗಿ ಬಂದಾಗ ಹೂಮಳೆಯಲ್ಲಿ ನನ್ನನ್ನು ಮುಳುಗಿಸಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಈ ಕುರಿತಾಗಿ ಫೇಸ್ಬುಕ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ವಿರೋಧ ಪಕ್ಷದ ನಾಯಕನಾಗಿ ಕೊಡಗಿಗೆ ಬಂದಿದ್ದಾಗ ಕೆಲವು ಕಿಡಿಗೇಡಿಗಳು ನನ್ನ ಮೇಲೆ ಮೊಟ್ಟೆ ಎಸೆದಿದ್ದರು. ಮುಖ್ಯಮಂತ್ರಿಯಾಗಿ ಇಂದು ಬಂದಾಗ ಕೊಡಗಿನ ಸಮಸ್ತ ಸಜ್ಜನ ಜನಸಮೂಹ ಪ್ರೀತಿಯ ಹೂಮಳೆಯಲ್ಲಿ ನನ್ನನ್ನು ಮುಳುಗಿಸಿದೆ. ಇದು ಕೊಡಗಿನ ಸಜ್ಜನರ ಗೆಲುವು, ಇದೇ ಪ್ರಜಾಪ್ರಭುತ್ವದ ಸೌಂದರ್ಯ ಎಂದು ಬರೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳಿಂದ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ನಿನ್ನೆ ಮೈಸೂರು ಜಿಲ್ಲಾ ಪ್ರವಾಸ ಮುಗಿಸಿ ಇಂದು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಬಳಿಕ ಸಂಜೆ ಬೆಂಗಳೂರಿಗೆ ವಾಪಸ್ಸು ಆಗಲಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಕಾರು ಮೇಲೆ ಮೊಟ್ಟೆ ಎಸೆತ: ಮಡಿಕೇರಿ ಚಲೋ ಬೃಹತ್ ಪಾದಯಾತ್ರೆಗೆ ಮುಂದಾದ ಅಭಿಮಾನಿಗಳು
ಮಡಿಕೇರಿಯಲ್ಲಿ ಮಳೆಯ ಅವಾಂತರಗಳಿಂದಾಗಿ ಅನೇಕ ನಷ್ಟ ಸಂಭವಿಸಿದ್ದ ಹಿನ್ನೆಲೆ ಇದನ್ನು ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಭೇಟಿ ನೀಡಿದಾಗ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಬಳಿಕ ಜಾಮೀನು ಪಡೆದು ಹೊರಬಂದಿದ್ದರು.
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಕೇಸ್ ದಿನೇ ದಿನೆ ಕಿಡಿ ಹೊತ್ತಿಸಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಗ್ಯುದ್ಧಕ್ಕೆ ಮೊಟ್ಟೆ ಎಸೆತ ಕಾರಣವಾಗಿತ್ತು. ಮೊಟ್ಟೆ ಎಸೆದ ಸಂಪತ್ ಯಾವ ಪಕ್ಷದವನು ಎಂಬ ಚರ್ಚೆ ಶುರುವಾಗಿತ್ತು.
ಇದನ್ನೂ ಓದಿ: ಸಿದ್ದರಾಮಯ್ಯಗೆ ಮೊಟ್ಟೆ ಎಸೆತ ಪ್ರಕರಣ: ಆರೋಪಿಗಳ ಗಡಿಪಾರು ಖಂಡಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ
ಮೊಟ್ಟೆ ಎಸೆದ ಸಂಪತ್ ಖುದ್ದ ನಾನು ಕಾಂಗ್ರೆಸ್ ಕಾರ್ಯಕರ್ತ ಎಂದರೂ ಕಾಂಗ್ರೆಸ್ ನಾಯಕರು ಮಾತ್ರ ಸುತಾರಂ ಒಪ್ಪಿರಲಿಲ್ಲ. ಇಷ್ಟೇ ಅಲ್ಲ ಸಂಪತ್ ಸಂಘಪರಿವಾರದಲ್ಲಿದ್ದಾಗಿನ ಫೋಟೋ ರಿಲೀಸ್ ಮಾಡಿ ಬಿಜೆಪಿಗೆ ಕಾಂಗ್ರೆಸ್ ಟಾಂಗ್ ಕೊಟ್ಟಿತ್ತು.
ಸಂಪತ್ಗೆ ಯತ್ನಾಳ್ ಶಹಬ್ಬಾಸ್!
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದವನಿಗೆ ನಾನು ಅಂಭಿನಂದಿಸುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರು. ವಿಜಯಪುರದಲ್ಲಿ ಮಾತನಾಡಿದ್ದ ಅವರು, ಮೊಟ್ಟೆ ಎಸೆದ ಸಂಪತ್ ಕಾಂಗ್ರಸ್ನವನಾಗಿದ್ರೂ ಆತ ಹಿಂದೂ. ಹಿಂದೂ ಧರ್ಮದ ಬಗ್ಗೆ ಸಿದ್ದು ಟೀಕೆ ಮಾಡಿದ್ದಕ್ಕೆ ಆತನಿಗೆ ನೋವಾಗಿದೆ. ಇದರಿಂದ ಕೋಪಗೊಂಡ ಆತ ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾನೆ. ಹೀಗಾಗಿ ನಾನು ಸಂಪತ್ನನ್ನು ಅಭಿನಂದಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:50 pm, Thu, 25 January 24