AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಹುಲಿ ದಾಳಿಗೆ ರೈತನ 13ನೇ ಹಸು ಬಲಿ! ಡಿಸಿಎಫ್ ಜೊತೆ ರೈತರ ಜಟಾಪಟಿ

ಕೊಡಗು: ಹುಲಿ ದಾಳಿಗೆ ರೈತನ 13ನೇ ಹಸು ಬಲಿ! ಡಿಸಿಎಫ್ ಜೊತೆ ರೈತರ ಜಟಾಪಟಿ

ಗೋಪಾಲ್​ ಸೋಮಯ್ಯ
| Edited By: |

Updated on:Oct 27, 2026 | 12:36 PM

Share

ಕೊಡಗು ಜಿಲ್ಲೆ ಪೊನ್ನಂಪೇಟೆಯ ಬೆಳ್ಳೂರು ಗ್ರಾಮದಲ್ಲಿ ಹುಲಿ ದಾಳಿಗೆ ರೈತನ 13ನೇ ಹಸು ಬಲಿಯಾಗಿದ್ದು, ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಡವಾಗಿ ಸ್ಥಳಕ್ಕೆ ಬಂದ ಡಿಸಿಎಫ್ ವಿನೀತ್ ಚೌಹಾಣ್ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದು, ದರ್ಪ ತೋರಿದ್ದಕ್ಕಾಗಿ ಅಧಿಕಾರಿಗಳ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಲಿಯನ್ನು ಸೆರೆಹಿಡಿಯುವಂತೆ ರೈತರು ಆಗ್ರಹಿಸಿದ್ದಾರೆ.

ಕೊಡಗು, ಅಕ್ಟೋಬರ್​ 27: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಹುಲಿ ದಾಳಿಗೆ ಒಬ್ಬನೇ ರೈತನ 13ನೇ ಹಸು ಬಲಿಯಾದ ಘಟನೆ ನಡೆದಿದ್ದು, ಸ್ಥಳೀಯ ರೈತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಖಂಡಿಸಿ ರೈತ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಘಟನೆ ನಡೆದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಾರದಿರುವುದು ರೈತರ ಆಕ್ರೋಶಕ್ಕೆ ಮತ್ತಷ್ಟು ಕಾರಣವಾಗಿತ್ತು. ತಡವಾಗಿ ಸ್ಥಳಕ್ಕಾಗಮಿಸಿದ ಡಿಸಿಎಫ್ ವಿನೀತ್ ಚೌಹಾಣ್ ಅವರೊಂದಿಗೆ ರೈತರು ತೀವ್ರ ವಾಗ್ವಾದ ನಡೆಸಿದ್ದಾರೆ. ಡಿಸಿಎಫ್ ರೈತರನ್ನು ಸಮಾಧಾನಪಡಿಸುವ ಬದಲು ದರ್ಪ ತೋರಿದ್ದಾರೆ ಎಂದು ರೈತರು ಆರೋಪಿಸಿದ್ದು, “ನಮ್ಮನ್ನು ಪ್ರಶ್ನಿಸುವ ಅಧಿಕಾರ ನಿಮಗಿಲ್ಲ” ಎಂದು ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ.

ಬೆಳ್ಳೂರು ಗ್ರಾಮದಲ್ಲಿ ಇದು 50ನೇ ಜಾನುವಾರು ಬಲಿಯಾಗಿದೆ ಎಂದು ರೈತರು ತಿಳಿಸಿದ್ದು, ಹುಲಿ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ. ಮಾನವ-ವನ್ಯಜೀವಿ ಸಂಘರ್ಷದಿಂದ ರೈತರು ಪದೇ ಪದೇ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯ ಮತ್ತು ಪರಿಹಾರ ವಿತರಣೆಯಲ್ಲಿನ ವಿಳಂಬಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 27, 2026 12:34 PM

Follow Us
ಗೋಪಾಲ್​ ಸೋಮಯ್ಯ
ಗೋಪಾಲ್​ ಸೋಮಯ್ಯ