AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಇಬ್ಬರನ್ನು ಬಲಿ ಪಡೆದ ನರಭಕ್ಷಕ ಹುಲಿಯನ್ನು ಕೊಲ್ಲುವಂತೆ ಆಗ್ರಹಿಸಿ ಕೆ.ಬಾಡಗ ಗ್ರಾಮಸ್ಥರ ಪ್ರತಿಭಟನೆ

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ಕೇವಲ 24 ಗಂಟೆಗಳಲ್ಲಿ ಹುಲಿ ದಾಳಿಗೆ ಇಬ್ಬರು ಬಲಿಯಾಗಿದ್ದರು. ಇದರಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು, ನರಭಕ್ಷಕ ಹುಲಿಯನ್ನು ಕೊಲ್ಲುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊಡಗು: ಇಬ್ಬರನ್ನು ಬಲಿ ಪಡೆದ ನರಭಕ್ಷಕ ಹುಲಿಯನ್ನು ಕೊಲ್ಲುವಂತೆ ಆಗ್ರಹಿಸಿ ಕೆ.ಬಾಡಗ ಗ್ರಾಮಸ್ಥರ ಪ್ರತಿಭಟನೆ
ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on: Feb 13, 2023 | 4:08 PM

Share

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ (Nagarahole Tiger Reserve) ಗಡಿಯಲ್ಲಿರುವ ಕೆ.ಬಾಡಗ ಗ್ರಾಮದಲ್ಲಿ ಹುಲಿ ದಾಳಿಗೆ (Tiger Attack) ಇಬ್ಬರು ಬಲಿಯಾದ ಪ್ರಕರಣ ಸಂಬಂಧ ನರಭಕ್ಷಕ ಹುಲಿ ಕೊಲ್ಲುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಹಾಗೂ ರೈತಸಂಘದಿಂದ ಮುತ್ತಿಗೆ ಹಾಕಿ ಹುಲಿ ಕೊಲ್ಲಲು ಆದೇಶ ತರುವಂತೆ ಆಗ್ರಹಿಸಿದರು. ಮೃತನ ದೇಹ ತೆಗೆಯಲು ಬಿಡದೆ ತೀವ್ರ ಪ್ರತಿಭಟನೆ ನಡೆಸಲಾಯಿತು.

ಫೆಬ್ರವರಿ 12ರಂದು ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ 12 ವರ್ಷದ ಬಾಲಕ ಚೇತನ್ ಮೇಲೆ ದಾಳಿ ನಡೆಸಿದ್ದ ವ್ಯಾಘ್ರ ಆತನನ್ನು ಕೊಂದು ಹಾಕಿತ್ತು. ದಾಳಿ ಮಾಡಿದ ಹುಲಿ ಬಾಲಕನನ್ನು ಕೊಂದು ತೊಡೆ ಭಾಗವನ್ನು ತಿಂದಿದೆ ಎನ್ನಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಈ ಘಟನೆ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಇದನ್ನೂ ಓದಿ: Tiger Attack: ಕೊಡಗಿನಲ್ಲಿ ಹುಲಿ ದಾಳಿಗೆ 12 ವರ್ಷದ ಬಾಲಕ ಸಾವು

ಈ ಘಟನೆ ಜನರ ಮನಸ್ಸಿನಲ್ಲೇ ಇದ್ದಾಗಲೇ ಅಂದರೆ ಘಟನೆಯಾಗಿ ಕೆಲವೇ ಗಂಟೆಗಳಲ್ಲಿ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ನಡೆದ ಹುಲಿ ದಾಳಿಯಲ್ಲಿ ಮೈಸೂರು ಜಿಲ್ಲೆಯ ಕೊಳವಿಗೆ ಹಾಡಿ ನಿವಾಸಿ ರಾಜು (75) ಸಾವನ್ನಪ್ಪಿದ್ದರು. ದಾಳಿ ವೇಳೆ ತಡೆಯಲು ಯತ್ನಿಸಿದ ರಾಜು ಪುತ್ರ ಹಾಗೂ ಮೃತ ಚೇತನ್ ತಂದೆ ಮಧು ಅವರಿಗೂ ಗಾಯಗಳಾಗಿವೆ. ಅವರನ್ನು‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತ ರಾಜು ಪೂಣಚ್ಚ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. 24 ಗಂಟೆಗಳಲ್ಲಿ ಹುಲಿ ದಾಳಿಗೆ ಇಬ್ಬರ ಬಲಿ ಹಿನ್ನೆಲೆ ತೋಟಗಳಿಗೆ ತೆರಳಲು ಜನ ಹೆದರುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!