AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಅಪಘಾತ: ಬೈಕ್​​ ಸವಾರ ಸಾವು, ಪತ್ನಿ ಗಂಭೀರ

ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನದ ವೇಳೆ ಗೂಡ್ಸ್​​ ವಾಹನ ಡಿಕ್ಕಿಯಾಗಿ ಬೈಕ್​​ ಸವಾರ ಮೃತಪಟ್ಟು, ಆತನ ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮತ್ತೊಂದೆಡೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಸುಂಕಸಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಬಸ್​​ಗಳು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಸುಮಾರು ಐದು ಮಂದಿ ಗಾಯಗೊಂಡಿದ್ದಾರೆ.

ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಅಪಘಾತ: ಬೈಕ್​​ ಸವಾರ ಸಾವು, ಪತ್ನಿ ಗಂಭೀರ
ಸಾಂದರ್ಭಿಕ ಚಿತ್ರImage Credit source: tv9 Kannada
Gopal AS
| Edited By: |

Updated on:Feb 19, 2026 | 9:47 AM

Share

ಮಡಿಕೇರಿ/ ಉತ್ತರ ಕನ್ನಡ, ಫೆಬ್ರವರಿ 19: ವಾಹನದ ಕಾಗದಪತ್ರಗಳು ಇಲ್ಲದ ಹಿನ್ನೆಲೆ ಪೊಲೀಸರನ್ನು ನೋಡಿ ಗಾಬರಿಯಾದ ಬೈಕ್​​ ಸವಾರ ಏಕಾಏಕಿ ವಾಹನ ತಿರುಗಿಸುವ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಮರೂರು ಗ್ರಾಮದ‌ ನಟೇಶ್ (31) ಮೃತ ವ್ಯಕ್ತಿಯಾಗಿದ್ದು, ಅವರ ಪತ್ನಿ ದಿವ್ಯಾ (30) ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ದಿವ್ಯಾರ ಎರಡೂ ಕಾಲುಗಳು ಮುರಿದಿವೆ ಎನ್ನಲಾಗಿದ್ದು, ಈ ಬಗ್ಗೆ ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ

Serial Accident

ಅಪಘಾತದ ತೀವ್ರತೆಗೆ ನಜ್ಜುಗುಜ್ಜಾಗಿರುವ ವಾಹನಗಳು

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಸುಂಕಸಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಐದಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನ ಅಂಕೋಲಾ ಹಾಗೂ ಕಾರವಾರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಹಂಪಿಯಿಂದ ಗೋವಾ ಕಡೆ ತೆರಳುತಿದ್ದ ಸೀಬರ್ಡ ಬಸ್ ಹುಬ್ಬಳ್ಳಿಯಿಂದ ಮಂಗಳೂರಿಗೆ ತೆರಳುತಿದ್ದ ಗಣೇಶ ಬಸ್​​ ಮತ್ತು ಯಲ್ಲಾಪುರ ಕಡೆಗೆ ಸಾಗುತಿದ್ದ ಲಾರಿಗೆ ಡಿಕ್ಕಿಯಾಗಿದೆ. ಸರಣಿ ಅಪಘಾತದಿಂದ ಅಂಕೋಲಾ-ಹುಬ್ಬಳ್ಳಿ ಹೆದ್ದಾರಿ ಸಂಚಾರ ಕೆಲ ಕಾಲ ಬಂದ್ ಆಗಿದ್ದು, ಸ್ಥಳಕ್ಕೆ ಅಂಕೋಲಾ ಹಾಗೂ ಯಲ್ಲಾಪುರ ಪೊಲೀಸರು ಭೇಟಿ ನೀಡಿ, ಅಪಘಾತವಾದ ವಾಹನಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ; ಇಡೀ ಕುಟುಂಬವೇ ದುರಂತ ಅಂತ್ಯ

ಶಾರ್ಟ್ ಸರ್ಕ್ಯೂಟ್​​ನಿಂದ ನಿಂತಿದ್ದ ಕಾರಿಗೆ ಬೆಂಕಿ

ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಪಾರ್ಕಿಂಗ್​​ ಪ್ರದೇಶದಲ್ಲಿ ನಿಂತಿದ್ದ ಕಾರೊಣದು ಬೆಂಕಿಗೆ ಆಗುತಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.  ಬೆಂಕಿಯ ತೀವ್ರತೆಗೆ ಕಾರಿನ ಪಕ್ಕದಲ್ಲೇ ನಿಂತಿದ್ದ ಆಟೋಗೆ ಕೂಡ ಬೆಂಕಿ ತಗುಲಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಆರಿಸಿದ್ದಾರೆ. ಕಾರು ಬಹಳ ದಿನಗಳಿಂದ ಪಾರ್ಕಿಂಗ್​​ ಪ್ರದೇಶದಲ್ಲಿಯೇ ನಿಂತಿತ್ತು ಎನ್ನಲಾಗಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:46 am, Thu, 19 February 26

Follow Us
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ