AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನನ್ನು ಪತಿಯೇ ಕಿಡ್ನಾಪ್ ಮಾಡಿದ್ದಾನೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ತಾಯಿ!

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ, ಪತಿಯೇ ತನ್ನ 5 ವರ್ಷದ ಮಗನನ್ನು ಅಪಹರಿಸಿರುವ ಘಟನೆ ಬೆಳಕಿಗೆ ಬಂದಿದೆ. ಗಾಂಜಾ ವ್ಯಸನಿ ಪತಿ ತಿಮ್ಮಯ್ಯನ ಕಿರುಕುಳ ತಾಳಲಾರದೆ ತಾಯಿ ಭವ್ಯ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಸದ್ಯ ಮಗುವಿನ ಜೀವಕ್ಕೆ ಹಾನಿಯಾಗಬಹುದೆಂದು ಹೆದರಿ ತಾಯಿ ಕೊಡಗು ಎಸ್‌ಪಿ ಬಿಂದು ಮಣಿ ಅವರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಗನನ್ನು ಪತಿಯೇ ಕಿಡ್ನಾಪ್ ಮಾಡಿದ್ದಾನೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ತಾಯಿ!
ಸಾಂದರ್ಭಿಕ ಚಿತ್ರImage Credit source: gettyimages.com
Gopal AS
| Edited By: |

Updated on: Jun 14, 2026 | 10:44 AM

Share

ಕೊಡಗು, ಜೂನ್ 14: ಕೌಟುಂಬಿಕ ಕಲಹದ ಹಿನ್ನೆಲೆ ನನ್ನ ಪತಿಯೇ ಮಗನನ್ನು ಕಿಡ್ನಾಪ್ ಮಾಡಿದ್ದಾನೆ, ದಯವಿಟ್ಟು ನನ್ನ ಮಗನನ್ನು ಹುಡುಕಿಕೊಡಿ ಎಂದು ತಾಯಿಯೊಬ್ಬಳು ಕಣ್ಣೀರಿಡುತ್ತಾ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ಕೊಡಗು (Kodagu) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಆರು ತಿಂಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಮಹಿಳೆ ತನ್ನ ಮಗುವಿನೊಂದಿಗೆ ತಾಯಿಯ ಮನೆಯಲ್ಲಿ ವಾಸ ಮಾಡುತ್ತಿದ್ದಳು. ಈ ವೇಳೆ ಆಕೆಯ ಮನೆಗೆ ಬಂದ ಪತಿ, ಮಗುವನ್ನು ಕರೆದುಕೊಂಡು ಪರಾರಿಯಾಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಮುಖ್ಯಾಂಶಗಳು

  • ಪತಿಯೇ ತನ್ನ ಐದು ವರ್ಷದ ಮಗನನ್ನು ಅಪಹರಿಸಿದ್ದಾನೆಂದು ತಾಯಿ ಆರೋಪಿಸಿದ್ದಾಳೆ.
  • ಕೊಡಗಿನ ಭವ್ಯ ಕೌಟುಂಬಿಕ ಕಲಹದಿಂದಾಗಿ ಆರು ತಿಂಗಳ ಹಿಂದೆ ವಿಚ್ಛೇದನ ಕೋರಿದ್ದರು.
  • ಮಗುವಿನ ಪತ್ತೆಗಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ.

ಕೌಟುಂಬಿಕ ಕಲಹ ಮತ್ತು ವಿಚ್ಛೇದನ ಅರ್ಜಿ

ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಗ್ರಾಮದ ನಿವಾಸಿ ಭವ್ಯ ಎಂಬಾಕೆಗೆ ಆರು ವರ್ಷಗಳ ಹಿಂದೆ ತಿಮ್ಮಯ್ಯ ಎಂಬುವರ ಜೊತೆ ವಿವಾಹವಾಗಿತ್ತು. ದಂಪತಿಗೆ 5 ವರ್ಷದ ಗಂಡು ಮಗನಿದ್ದಾನೆ. ಆದರೆ, ಕಳೆದ ಒಂದೆರಡು ವರ್ಷಗಳಿಂದ ಇವರಿಬ್ಬರ ಮಧ್ಯೆ ತೀವ್ರ ಜಗಳ ನಡೆಯುತ್ತಿತ್ತು. ಪತಿ ತಿಮ್ಮಯ್ಯ ಗಾಂಜಾ ಮತ್ತು ಮದ್ಯದ ವ್ಯಸನಿಯಾಗಿದ್ದು, ಕೆಲಸಕ್ಕೂ ಹೋಗದೆ, ನಿತ್ಯ ಹೆಂಡತಿಯ ಮೇಲೆ ಅನುಮಾನ ಪಡುತ್ತಾ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಪತಿಯ ಕಾಟ ತಡೆಯಲಾರದೆ ಭವ್ಯ ಆರು ತಿಂಗಳ ಹಿಂದೆ ವಿಚ್ಛೇದನ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಸದ್ಯ ಮಗನೊಂದಿಗೆ ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು.

ಮಗನನ್ನು ಅಪಹರಿಸಿದ ಗಾಂಜಾ ವ್ಯಸನಿ ಪತಿ?

ಜೂನ್ 10 ರಂದು ಭವ್ಯ ಅವರ ತಾಯಿ ಮನೆ ಸಮೀಪ ಬಂದ ಪತಿ ತಿಮ್ಮಯ್ಯ, ಬಲವಂತವಾಗಿ 5 ವರ್ಷದ ಮಗನನ್ನು ಕರೆದುಕೊಂಡು ಹೋಗಿದ್ದಾನೆ. ಭವ್ಯ ಗಂಡನ ಮನೆಗೆ ಹೋಗಿ ನೋಡಿದಾಗ ಅಲ್ಲಿ ಪತಿಯಾಗಲಿ, ಮಗನಾಗಲಿ ಇರಲಿಲ್ಲ. ಪತಿ ಗಾಂಜಾ ವ್ಯಸನಿಯಾಗಿದ್ದರಿಂದ ಮಗುವಿಗೆ ಏನಾದರೂ ಹೆಚ್ಚು ಕಡಿಮೆ ಮಾಡಬಹುದು ಎಂಬ ಭೀತಿಯಲ್ಲಿ ತಾಯಿ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿಂದೆ ತಿಮ್ಮಯ್ಯ ಮಚ್ಚು, ಲಾಂಗು ಹಿಡಿದು ಹಲ್ಲೆಗೆ ಮುಂದಾಗಿದ್ದರಿಂದ ಮಗುವಿಗೆ ಏನಾಗಿದೆಯೋ ಎಂಬ ಭಯದಿಂದಲೇ ಆಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಮಗುವಿನ ಪತ್ತೆಗಾಗಿ ಭವ್ಯ ಸದ್ಯ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಎಸ್‌ಪಿ ಅವರು ತನಿಖೆಗೆ ಆದೇಶಿಸಿದ್ದು, ಪೊಲೀಸರು ಮಗುವಿನ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್