ಕೊಡಗು: ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲು; ಓರ್ವನ ಮೃತದೇಹ ಪತ್ತೆ
ನೀರಿನಲ್ಲಿ ಇಳಿಯುವ ಮುಂಚೆ ಎಚ್ಚರವಹಿಸುವುದು ಬಹಳ ಮುಖ್ಯ, ಅದರಲ್ಲೂ ಗೊತ್ತಿಲ್ಲದ ಜಾಗಗಳಿಗೆ ಹೋದಾಗ ನೀರಿನಲ್ಲಿ ಇಳಿಯದಿದ್ದರೆ ಉಳಿತು. ಸ್ವಲ್ಪ ಯಾಮಾರಿದರೂ ಪ್ರಾಣವನ್ನೇ ಕಳೆದುಕೊಳ್ಳುವ ಸ್ಥಿತಿ ಎದುರಾಗಬಹುದು. ಅದರಂತೆ ಇಂದು(ಮಾ.07) ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮದಲ್ಲಿ ನಡೆದಿದೆ.
ಕೊಡಗು, ಮಾ.07: ನೀರಿನಲ್ಲಿ ಇಳಿಯುವ ಮುಂಚೆ ಎಚ್ಚರವಹಿಸುವುದು ಬಹಳ ಮುಖ್ಯ, ಅದರಲ್ಲೂ ಗೊತ್ತಿಲ್ಲದ ಜಾಗಗಳಿಗೆ ಹೋದಾಗ ನೀರಿನಲ್ಲಿ ಇಳಿಯದಿದ್ದರೆ ಉಳಿತು. ಸ್ವಲ್ಪ ಯಾಮಾರಿದರೂ ಪ್ರಾಣವನ್ನೇ ಕಳೆದುಕೊಳ್ಳುವ ಸ್ಥಿತಿ ಎದುರಾಗಬಹುದು. ಅದರಂತೆ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾದ ಘಟನೆ ಕೊಡಗು(Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮದಲ್ಲಿ ನಡೆದಿದೆ. ಚಿಕ್ಕತ್ತೂರು ಗ್ರಾಮದ ಶ್ರೀನಿವಾಸ್(24) ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.
ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಶಿಕ್ಷಕ ಸಾವು
ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಬಳಿ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಶಿಕ್ಷಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಕ್ಕರಬ್ಬಿ ಸರ್ಕಾರಿ ಶಾಲೆ ಶಿಕ್ಷಕ ಮಹಾಂತೇಶ್‌ಗೌಡ (37) ಮೃತ ರ್ದುದೈವಿ. ಬೈಕ್‌ನಲ್ಲಿ ಶಾಲೆಗೆ ಹೊರಟಿದ್ದ ಮಾಹಾಂತೇಶ್ ಗೌಡ ಅವರ ಬೈಕ್, ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿ ಶಿಕ್ಷಕ ಮಹಾಂತೇಶ್ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಕಾರವಾರ: ಹೊಳೆಯಲ್ಲಿ ಮುಳುಗುತ್ತಿರುವವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು
ಮೈಸೂರಿನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮೈಸೂರು: ಮೈಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಬೆಮಲ್ ಬಡಾವಣೆ ಉದ್ಯಾನವನದಲ್ಲಿ ನಡೆದಿದೆ. ಖಿನ್ನತೆಗೊಳಗಾಗಿದ್ದ ಯುವಕ ಋಷಭೇಂದ್ರ(21) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ನಾಲ್ಕು ವರ್ಷದಿಂದ ಮೈಮೇಲೆ ದೆವ್ವ ಬರುತ್ತದೆ ಎಂದು ಮನೋವೈದ್ಯರ ಬಳಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ, ಇಂದು ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ