ಕೊಡಗು: ಕಾಡಾನೆ ದಾಳಿಗೊಳಗಾಗಿದ್ದ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಸಾವು

|

Updated on: May 18, 2023 | 11:57 AM

ಕಾಡಾನೆ ದಾಳಿಗೆ ಗಾಯಗೊಂಡಿದ್ದ ಕಾರ್ಮಿಕನನ್ನು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕೊಡಗು: ಕಾಡಾನೆ ದಾಳಿಗೊಳಗಾಗಿದ್ದ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಸಾವು
ಕಾಡಾನೆ (ಸಂಗ್ರಹ ಚಿತ್ರ)
Follow us on

ಕೊಡಗು: ಕಾಡಾನೆ ದಾಳಿಯಿಂದ(Elephant Attack) ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಬಾಬಿ(50) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ ಕಾಡಾನೆ ದಾಳಿಗೆ ಗಾಯಗೊಂಡಿದ್ದ ಕಾರ್ಮಿಕನನ್ನು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

2 ದಿನಗಳ ಹಿಂದೆಯಷ್ಟೇ ಬಾಬಿ ಮೇಲೆ ಕಾಡಾನೆ ದಾಳಿ ನಡೆದಿತ್ತು. ಶಾಸಕ ಪೊನ್ನಣ್ಣ ಮೃತ ಕಾರ್ಮಿಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು ತಕ್ಷಣ‌ ಪರಿಹಾರ ಕ್ರಮಕ್ಕೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Kodagu: ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಆಸ್ಪತ್ರೆಗೆ ದಾಖಲು

ರೇಡಿಯೋ ಕಾಲರ್​ ಅಳವಡಿಕೆ

ಕಾಡಾನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಹನಿ ಟ್ಯ್ರಾಪ್​​ ಮೊರೆ ಹೋಗಿದೆ. ಮೂರು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್​ ಅಳವಡಿಸಲು ಅರಣ್ಯ ಇಲಾಖೆ ಮುಂದಾಗಿದೆ. ಹೆಣ್ಣಾನೆ ಮೋಹಕ್ಕೆ ಬಿದ್ದು, ಕಾಡಾನೆಗಳು ಸೆರೆ ಸಿಗುವ ಸಾಧ್ಯತೆ ಇದೆ. ಹೀಗಾಗಿ ಇಂದಿನಿಂದ ಮೇ.25 ರವರೆಗೆ ಸಕಲೇಶಪುರ, ಬೇಲೂರು ವಲಯಗಳಲ್ಲಿ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಯಲಿದೆ.

ರೇಡಿಯೋ ಕಾಲರ್ ಅಳವಡಿಕೆಗೆ ಸಾಕಾನೆಗಳನ್ನು ಬಳಸಿಕೊಳ್ಳಲಾಗಿದ್ದು, ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು ಮತ್ತು ಮಹೇಂದ್ರ ಹಾಗೂ ದುಬಾರೆ ಆನೆ ಶಿಬಿರದಿಂದ ಅಜ್ಜಯ್ಯ, ಪ್ರಶಾಂತ ಮತ್ತು ವಿಕ್ರಮ ಆನೆಗಳನ್ನು ಕರೆಸಿಕೊಳ್ಳಲಾಗಿದೆ. ಈ ಆನೆಗಳನ್ನು ತಾತ್ಕಾಲಿಕವಾಗಿ ಸ್ಥಾಪಿಸಿರುವ ಬೇಲೂರು ವಲಯದ, ಬಿಕ್ಕೋಡು ಸಸ್ಯಕ್ಷೇತ್ರದ ಕ್ಯಾಂಪ್‌ನಲ್ಲಿ ಇರಿಸಲಾಗಿದೆ. ಈ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸೂಚನೆಗಳನ್ನು ಪಾಲಿಸಿ ಸಾರ್ವಜನಿಕರು ಸಹಕರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ