ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ! ವಾಹನ ಸವಾರರ ಪರದಾಟ
ಧಾರಾಕಾರ ಮಳೆ ಜೊತೆ ದಟ್ಟ ಮಂಜು ಆವರಿಸಿದೆ. ಹೀಗಾಗಿ ರಸ್ತೆ ಕಾಣುತ್ತಿಲ್ಲ. ಇದರಿಂದ ದಾರಿಯಲ್ಲಿ ಚಲಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ.
ಕೊಡಗು: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Natonal Highway) ಭೂಕುಸಿತವಾಗಿದ್ದು (Landslide), ವಾಹನ ಸವಾರರು ಪರದಾಡುವಂತಾಗಿದೆ. ಭಾರಿ ಮಳೆಗೆ ಮಡಿಕೇರಿ ತಾಲೂಕಿನ ಮದೆನಾಡು-ಜೋಡುಪಾಲ ನಡುವೆ ರಸ್ತೆಗೆ ಮಣ್ಣು ಮತ್ತು ಮರ ಕುಸಿದಿದೆ. ಚರಂಡಿಗೆ ಮಣ್ಣು ಬಿದ್ದಿದ್ದರಿಂದ ಅಪಾರ ಪ್ರಮಾಣ ನೀರು ರಸ್ತೆ ಮೇಲೆ ಹರಿಯುತ್ತಿದೆ. ಇನ್ನು ಧಾರಾಕಾರ ಮಳೆ ಜೊತೆ ದಟ್ಟ ಮಂಜು ಆವರಿಸಿದೆ. ಹೀಗಾಗಿ ರಸ್ತೆ ಕಾಣುತ್ತಿಲ್ಲ. ಇದರಿಂದ ದಾರಿಯಲ್ಲಿ ಚಲಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ.
ಮನೆ ಜಲಾವೃತ: ಧಾರಕಾರ ಮಳೆಯಿಂದ ಸುಳ್ಯ ತಾಲೂಕಿನ ಸಂಪಾಜೆ ಬಳಿಯ ಗೂನಡ್ಕ ಗ್ರಾಮದಲ್ಲಿ ಮನೆ ಜಲಾವೃತ ಆಗಿದೆ. ಗ್ರಾಮದ ಧರಣಿ ದಯಾನಂದ ಎಂಬುವರ ಮನೆ ಜಲಾವೃತವಾಗಿದೆ. ಇನ್ನು ಸರಣಿ ಭೂಕಂಪನವಾದ ಬೆಂಬು ಗ್ರಾಮದಲ್ಲಿ ಮಣ್ಣು ಕುಸಿದಿದೆ. ಮಣ್ಣು ಕುಸಿದು ಗ್ರಾಮದ ಗಿರಿಧರ ಎಂಬವರ ಮನೆಗೆ ಹಾನಿಯಾಗಿದೆ. ರಾತ್ರಿ 3 ಗಂಟೆ ಸುಮಾರಿಗೆ ಶಬ್ದದೊಂದಿಗೆ ಮಣ್ಣು ಕುಸಿದಿದೆ.
ಇದನ್ನೂ ಓದಿ: Automobile: ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಕಾರು ಅನಾವರಣ, ಇಲ್ಲಿದೆ ನೋಡಿ ಫೀಚರ್ಸ್
ಪ್ರವಾಹ ಭೀತಿ: ಸದ್ಯ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿರುವೆ. ಕಾವೇರಿ ನದಿ, ಲಕ್ಷ್ಮಣತೀರ್ಥ, ಪಯಸ್ವಿನಿ ಹಾಗೂ ಅಟ್ಟಿಹೊಳೆ, ಕೀರೆಹೊಳೆ, ತ್ರಿವೇಣಿ ಸಂಗಮ, ಹಾರಂಗಿ ಡ್ಯಾಂ ಭರ್ತಿಯಾದ ಹಿನ್ನೆಲೆ ನದಿ ಪಾತ್ರದ ಜನರು ಎದುರಾಗುವ ಭೀತಿಯಲ್ಲಿದ್ದಾರೆ.
ಇಂದಿನಿಂದ ನಾಲ್ಕು ದಿನ ಭಾರೀ ಮಳೆ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ 2 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮಂಗಳೂರಿನ ರಸ್ತೆಗಳೆಲ್ಲ ಜಲಾವೃತವಾಗಿ ಮನೆಯೊಳಗೂ ನೀರು ನುಗ್ಗಿದೆ. ಇತ್ತ ಮಲೆನಾಡಿನಲ್ಲೂ ಮಳೆ ಹೆಚ್ಚಾಗಿರುವುದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೆ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯಲಿದೆ. ಉತ್ತರ ಕರ್ನಾಟಕದಲ್ಲಿ ಇಂದಿನಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಜುಲೈ 5ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: BJP National Executive Meeting: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಹೈದರಾಬಾದ್ಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ
Published On - 10:46 am, Sat, 2 July 22