Karnataka Rain: ಕೊಡಗು ಜಿಲ್ಲೆಯಲ್ಲಿ 12 ಕ್ಕೂ ಅಧಿಕ ಕಡೆಗಳಲ್ಲಿ ಭೂ ಕುಸಿತ; 50 ಮನೆಗಳಿಗೆ ಹಾನಿ

ಕೊಡಗು ಜಿಲ್ಲೆಯಲ್ಲಿ 12 ಕ್ಕೂ ಅಧಿಕ ಕಡೆಗಳಲ್ಲಿ ಭೂ ಕುಸಿತವಾಗಿದ್ದು, 50 ಮನೆಗಳಿಗೆ ಹಾನಿಯಾಗಿದೆ. ಯಾವುದೇ ಬೆಳೆ ಹಾನಿಯಾಗಿಲ್ಲ. 

Karnataka Rain: ಕೊಡಗು ಜಿಲ್ಲೆಯಲ್ಲಿ 12 ಕ್ಕೂ ಅಧಿಕ ಕಡೆಗಳಲ್ಲಿ ಭೂ ಕುಸಿತ; 50 ಮನೆಗಳಿಗೆ ಹಾನಿ
ಕೊಡಗಿನಲ್ಲಿ 12 ಕಡೆಗಳಲ್ಲಿ ಭೂಕುಸಿತ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 10, 2022 | 8:32 PM

ಕೊಡಗು: ಕೊಡಗು (Kodagu) ಜಿಲ್ಲೆಯಲ್ಲಿ 12 ಕ್ಕೂ ಅಧಿಕ ಕಡೆಗಳಲ್ಲಿ ಭೂ ಕುಸಿತವಾಗಿದ್ದು (Land Slide) , 50 ಮನೆಗಳಿಗೆ (House) ಹಾನಿಯಾಗಿದೆ. ಯಾವುದೇ ಬೆಳೆ ಹಾನಿಯಾಗಿಲ್ಲ. ಜುಲೈ 8 ರಂದು ಮೊಣ್ಣಂಗೇರಿ ಗ್ರಾಮದಲ್ಲಿ ಒಂದು ಕಡೆ ಭೂಕುಸಿತವಾಗಿದೆ. ಇದೇ ದಿನ ಮಡಿಕೇರಿ-ಮಂಗಳೂರು (Mangalore) ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಕೂಡ 10 ಕಡೆಗಳಲ್ಲಿ ಭೂ ಕುಸಿತ ಸಂಭವಿಸಿದೆ. ಜುಲೈ 9 ರಂದು ಚೆಂಬು ಗ್ರಾಮದಲ್ಲಿ ಒಂದು ಕಡೆ ಭೂಕುಸಿತ ಸಂಭವಿಸಿ ಮನೆ ಮೇಲೆ ಮಣ್ಣು ಬಿದ್ದಿದೆ. ಇಂದು ಕೊಯನಾಡಿನಲ್ಲಿ ಭೂ ಕುಸಿತ ಸಂಭವಿಸಿ ಶಾಲೆ ಮೇಲೆ ಮಣ್ಣು ಬಿದ್ದಿದೆ.

ಜಿಲ್ಲೆಯಲ್ಲಿನ ಮಳೆರಾಯನ ಆರ್ಭಟಕ್ಕೆ ನಾಳೆಯೂ ಕೂಡ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್​ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ

ಉಡುಪಿ: ಹವಾಮಾನ ಇಲಾಖೆಯಿಂದ ಉಡುಪಿ ಜಿಲ್ಲೆಯಲ್ಲಿ ರೆಡ್​ ಅಲರ್ಟ್​ ಘೋಷಣೆಯಾದ ಹಿನ್ನೆಲೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಪಿಯುಸಿ, ಪದವಿ, ಇತರೆ ಕಾಲೇಜುಗಳು ಎಂದಿನಂತೆಯೇ ನಡೆಯಲಿವೆ ಎಂದು ಟಿವಿ9ಗೆ ಉಡುಪಿ ಜಿಲ್ಲಾಡಳಿತದಿಂದ ಮಾಹಿತಿ ದೊರೆತಿದೆ.

ಬೀದರ್ ಜಿಲ್ಲೆಯ ‌ಎಲ್ಲಾ ಅಂಗನವಾಡಿ ಶಾಲಾ-ಕಾಲೇಜಿಗೆ ರಜೆ

ಬೀದರ್: ಬೀದರ್  ಜಿಲ್ಲೆಯಲ್ಲಿ ನಾಳೆ (ಜುಲೈ 11) ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಬೀದರ್ ಜಿಲ್ಲೆಯ ‌ಎಲ್ಲಾ ಅಂಗನವಾಡಿ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ಮಾತ್ರ ರಜೆ ಘೋಷಣೆ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, 1ನೇ ತರಗತಿಯಿಂದ 10ನೇ ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಪಿಯುಸಿ, ಪಧವಿ, ಸ್ನಾತಕೋತ್ತರ ಇತರೆ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಶನಿವಾರ ಪೂರ್ತಿ ತರಗತಿಗಳನ್ನು ನಡೆಸಿ ತರಗತಿಗಳನ್ನು ಸರಿದೂಗಿಸಲು ಸೂಚಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಾಳೆ (ಜುಲೈ 11) ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಯಶವಂತ್ ಗುರುಕಾರ್​ ಆದೇಶ ಹೊರಡಿಸಿದ್ದಾರೆ.

Published On - 8:20 pm, Sun, 10 July 22