AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಸಮಾರಂಭಗಳಿಗೆ ಮದ್ಯ ಪೂರೈಕೆಗೆ ಅನುಮತಿ ಕಡ್ಡಾಯಗೊಳಿಸಿದ ಅಬಕಾರಿ ಇಲಾಖೆ

ಕೊಡಗು ಜಿಲ್ಲೆಯಲ್ಲಿ ವಿವಿಧ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅಬಕಾರಿ ಇಲಾಖೆ CL-5 ಪರವಾನಗಿ ಕಡ್ಡಾಯಗೊಳಿಸಿದೆ. ದಿನಕ್ಕೆ ₹11,500 ಪಾವತಿಸಿ ಪರವಾನಗಿ ಪಡೆಯಬೇಕು. ಇದು ಹಳೆಯ ನಿಯಮವಾಗಿದ್ದು, ಇದೀಗ ಕಡ್ಡಾಯಗೊಳಿಸಲಾಗಿದೆ. ಈ ನಿರ್ಧಾರ ಜಿಲ್ಲೆಯ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಮದ್ಯ ಪೂರೈಕೆಗೆ ಈಗ ಅನುಮತಿ ಅಗತ್ಯವಾಗಿರುವುದು ವಿರೋಧಕ್ಕೆ ಕಾರಣವಾಗಿದೆ.

ಕೊಡಗು: ಸಮಾರಂಭಗಳಿಗೆ ಮದ್ಯ ಪೂರೈಕೆಗೆ ಅನುಮತಿ ಕಡ್ಡಾಯಗೊಳಿಸಿದ ಅಬಕಾರಿ ಇಲಾಖೆ
ಸಾಂದರ್ಭಿಕ ಚಿತ್ರ
Gopal AS
| Updated By: ವಿವೇಕ ಬಿರಾದಾರ|

Updated on: Feb 17, 2025 | 1:31 PM

Share

ಮಡಿಕೇರಿ, ಫೆಬ್ರವರಿ 18: ಕೊಡಗು (Kodagu) ಜಿಲ್ಲೆಯಲ್ಲಿ ವಿವಿಧ ಸಭೆ-ಸಮಾರಂಭಗಳು, ವಿವಾಹಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ಕಡ್ಡಾಯಗೊಳಿಸಿ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ. ಕಲ್ಯಾಣಮಂಟಪ, ಹೋಂಸ್ಟೇ, ರೆಸಾರ್ಟ್​ ಸೇರಿದಂತೆ ವಿವಿಧೆಡೆ ನಡೆಯುವ ಸಭೆ ಸಮಾರಂಭ, ಮದುವೆ, ನಾಮಕರಣ ಸೇರಿದಂತೆ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಮದ್ಯ ಪೂರೈಕೆ ಮಾಡುವಂತಿಲ್ಲ. ಸಮಾರಂಭ ಆಯೋಜಿಸುವವರು ಸಂಬಂಧಪಟ್ಟ ಇಲಾಖೆಯಿಂದ ಸಿಎಲ್-5 ಸನ್ನದು ಪಡೆದು ಮದ್ಯ ಪೂರೈಸಬಹುದು ಎಂದು ಅಬಕಾರಿ ಇಲಾಖೆ ಸ್ಪಷ್ಟಪಡಿಸಿದೆ. ದಿನವೊಂದಕ್ಕೆ 11.500 ರೂ ಪಾವತಿಸಿ ಅನುಮತಿ ಪಡೆಯಬಹುದು ಎಂದು ಇಲಾಖೆ ತಿಳಿಸಿದೆ.

ಹೊಸ ನಿಯಮವಲ್ಲ, ಹಳೇ ನಿಯಮವನ್ನೇ ಕಡ್ಡಾಯಗೊಳಿಸಲಾಗಿದೆ: ಇಲಾಖೆ ಸ್ಪಷ್ಟನೆ

ಯಾವುದೇ ಸಭೆ ಸಮಾರಂಭಗಳಲ್ಲಿ ಮದ್ಯ ಪೂರೈಕೆ ಮಾಡಲು ಸಿಎಲ್ 5 ತಾತ್ಕಾಲಿಕ ಅನುಮತಿ ಪಡೆಯುವುದು ಹೊಸ ನಿಯಮವೇನಲ್ಲ. ಹಲವು ದಶಕಗಳಿಂದಲೇ ಈ ನಿಯಮ ಎಲ್ಲ ಕಡೆ ಜಾರಿಯಲ್ಲಿದೆ. ಆದರೆ ಕೊಡಗು ಚಿಕ್ಕಮಗಳೂರು ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮದುವೆ ಸೇರಿದಂತೆ ವಿವಿಧ ಸಮಾರಂಭಗಳಲ್ಲಿ ಮದ್ಯ ಪೂರೈಸುವುದು ಒಂದು ಸಂಪ್ರದಾಯವಾಗಿ ಬೆಳೆದು ಬಂದಿದೆ. ಹೀಗಾಗಿ ಈ ನಿಯಮಗಳನ್ನು ಕಡ್ಡಾಯಗೊಳಿಸಿರಲಿಲ್ಲ. ಆದರೆ, ಇದೀಗ ಈ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಮಡಿಕೇರಿ ಅಬಕಾರಿ ಆಯುಕ್ತ ನಾಗೇಶ್ ಕುಮಾರ್ ತಿಳಿಸಿದ್ದಾರೆ.

ಆದೇಶಕ್ಕೆ ವಿರೋಧ ಸಾಧ್ಯತೆ

ಕೊಡಗು ಜಿಲ್ಲೆಯಲ್ಲಿ ಯಾವುದೇ ಸಮಾರಂಭಗಳಿಗೆ ಕೊಡಗಿನ ಮೂಲಕ ನಿವಾಸಿಗಳು ಸಾಮಾನ್ಯವಾಗಿ ಯಥೇಚ್ಛವಾಗಿ ಮದ್ಯ ಪೂರೈಕೆ ಮಾಡುತ್ತಾರೆ. ಬಡವರೇ ಆಗಲಿ, ಶ್ರೀಮಂತರೇ ಆಗಲಿ ಮದ್ಯ ಪೂರೈಕೆ ಮಾಡುವುದು ಇತ್ತೀಚೆಗಿನ ಕೆಲ ದಶಕಗಳಿಂದ ಸಂಪ್ರದಾಯವಾಗಿ ಬೆಳೆದುಬಂದಿದೆ. ಹೀಗಾಗಿ ಯಾರೂ ಕೂಡ ಮದ್ಯ ಪೂರೈಕೆಗೆ ಅನುಮತಿ ಪಡೆಯುತ್ತಿರಲಿಲ್ಲ. ಎಲ್ಲವೂ ಸಹಜವಾಗಿಯೇ ನಡೆದುಹೋಗುತ್ತಿತ್ತು. ಚುನಾವಣಾ ಸಮಯದಲ್ಲಿ ಮಾತ್ರ ಸಮಾರಂಭಗಳಲ್ಲಿ ಮದ್ಯ ​ಹಂಚಲು ಅನುಮತಿ ಕಡ್ಡಾಯಗೊಳಿಸಲಾಗುತ್ತಿತ್ತು. ಆದರೆ ಇದೀಗ ಅಬಕಾರಿ ಇಲಾಖೆ ಸಿಎಲ್-5 ಸನ್ನದು ಕಡ್ಡಾಯಗೊಳಿಸಿರುವುದು ಬಹಳಷ್ಟು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಪ್ರವಾಸಿಗರ ಗಮನಕ್ಕೆ: ಮಡಿಕೇರಿಯಲ್ಲಿ ಇನ್ಮುಂದೆ ವಾಟರ್​ ಬಾಟಲ್​ ಸಿಗಲ್ಲ

50 ಜನರನ್ನು ಸೇರಿಸಿ ಮಾಡುವ ಪುಟ್ಟ ನಾಮಕರಣ ಸಮಾರಂಭಕ್ಕೆ 11.500 ರೂ. ತೆತ್ತು ಅನುಮತಿ ಪಡೆಯುವುದು ಎಷ್ಟು ಸರಿ ಅಂತ ಜಿಲ್ಲೆಯ ನಾಗರಿಕರು ಪ್ರಶ್ನೆ ಮಾಡಿದ್ದಾರೆ. ಈ ಹಿಂದೆಯೂ ಒಮ್ಮೆ ಇದೇ ರೀತಿ ಸನ್ನದು ಕಡ್ಡಾಯಗೊಳಿಸಿ ಆದೇಶ ಮಾಡಿದ್ದಾಗ ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆ ಸಂದರ್ಭ ಆದೇಶವನ್ನು ಹಿಂದಕ್ಕೆ ಪಡೆಯಲಾಗಿತ್ತು. ಈಗಲೂ ಈ ನಿಯಮಕ್ಕೆ ಪಕ್ಷಾತೀತ ವಿರೋಧ ವ್ಯಕ್ತವಾಗುತ್ತಿದೆ. ಅಬಕಾರಿ ಇಲಾಖೆಯ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಮಾತನಾಡುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಎಸ್ ಪೊನ್ನಣ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!