AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದನಗಳಿಗೆ ನೀರು ಕುಡಿಸಲು ಹೋಗಿ ತಾಯಿ, ಮಗ ಮೃತ್ಯು; ಹೊಳೆಗೆ ಜಾರಿಬಿದ್ದು ದುರ್ಘಟನೆ

ವರ್ಷದ ಹಿಂದೆ ಅನಾರೋಗ್ಯದಿಂದ ಪತಿ ಮೃತಪಟ್ಟಿದ್ದರು. ಇದೀಗ ದನಗಳಿಗೆ ನೀರು ಕುಡಿಸುವ ಸಂದರ್ಭ ತಾಯಿ ಹಾಗೂ ಮಗ ಕೂಡ ಮರಣಿಸಿದ್ದಾರೆ. ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

ದನಗಳಿಗೆ ನೀರು ಕುಡಿಸಲು ಹೋಗಿ ತಾಯಿ, ಮಗ ಮೃತ್ಯು; ಹೊಳೆಗೆ ಜಾರಿಬಿದ್ದು ದುರ್ಘಟನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 31, 2021 | 3:27 PM

Share

ಮಡಿಕೇರಿ: ದನಗಳಿಗೆ ನೀರು ಕುಡಿಸಲು ಹೋಗಿ ತಾಯಿ, ಮಗ ಸಾವನ್ನಪ್ಪಿದ ದುರ್ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಬಳಿ ನಡೆದಿದೆ. ಶ್ರೀಮಂಗಲ ಬಳಿ ಹೊಳೆಗೆ ಕಾಲು ಜಾರಿಬಿದ್ದು ದುರ್ಘಟನೆ ಸಂಭವಿಸಿದೆ. ತಾಯಿ ರೇವತಿ (32) ಹಾಗೂ ಮಗ ಕಾರ್ಯಪ್ಪ (12) ಮೃತಪಟ್ಟಿದ್ದಾರೆ. ವರ್ಷದ ಹಿಂದೆ ಅನಾರೋಗ್ಯದಿಂದ ಪತಿ ಮೃತಪಟ್ಟಿದ್ದರು. ಇದೀಗ ದನಗಳಿಗೆ ನೀರು ಕುಡಿಸುವ ಸಂದರ್ಭ ತಾಯಿ ಹಾಗೂ ಮಗ ಕೂಡ ಮರಣಿಸಿದ್ದಾರೆ. ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

ಚಿಕ್ಕಬಳ್ಳಾಪುರ: ಅಪರಿಚಿತನನ್ನು ಕೊಂದು ಶವಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು ದುಷ್ಕರ್ಮಿಗಳು ಅಪರಿಚಿತನನ್ನು ಕೊಂದು ಶವಕ್ಕೆ ಬೆಂಕಿಯಿಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕು ವ್ಯಾಪ್ತಿಯ ದೇಗುಲದ ಬಳಿ ನಡೆದಿದೆ. ಸುಂಕಲಮ್ಮ ದೇವಸ್ಥಾನದ ಬಳಿ ಖಾಲಿ ಲೇಔಟ್​ನಲ್ಲಿ ದುಷ್ಕೃತ್ಯ ಸಂಭವಿಸಿದೆ. ಸ್ಥಳಕ್ಕೆ ಎಸ್​ಪಿ ಜಿ.ಕೆ.ಮಿಥುನ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೆರೆಗೆ ಬಿದ್ದ ಬಾಲಕನ ರಕ್ಷಣೆಗೆ ಹೋದ ಯುವಕ ನೀರುಪಾಲು ಕೆರೆಗೆ ಬಿದ್ದ ಬಾಲಕನ ರಕ್ಷಣೆಗೆ ಹೋದ ಯುವಕ ನೀರುಪಾಲು ಆದ ದುರ್ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಎಂ.ಕೆ. ಹುಬ್ಬಳ್ಳಿ ಗ್ರಾಮದಲ್ಲಿ ಬಾಲಕ, ಯುವಕ ಕೆರೆಪಾಲು ಆಗಿದ್ದಾರೆ. ಕಾರ್ತಿಕ್ ಬಡಿಗೇರ (8), ಕಾಂತೇಶ್ ಬಡಿಗೇರ (25) ಮೃತ ದುರ್ದೈವಿಗಳು. ಕಾಂತೇಶ್, ಗೋಕಾಕ್​ ತಾಲೂಕಿನ ಕೊಣ್ಣೂರಿನ ನಿವಾಸಿ ಆಗಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime: ಬೀರೂರಿನಲ್ಲಿ ತಂದೆಯಿಂದ ಮಗಳ ಕೊಲೆ, ಶ್ರೀನಿವಾಸಪುರದಲ್ಲಿ ಅಪಘಾತ, ಚಡಚಣದಲ್ಲಿ ಕಬ್ಬಿನಗದ್ದೆಗೆ ಬೆಂಕಿ

ಇದನ್ನೂ ಓದಿ: Crime News ಉದ್ಯಮಿ ಶ್ರೀನಿವಾಸನಾಯ್ಡು‌ ಕಾರು ಸುಟ್ಟ ಪ್ರಕರಣ: ಸದಾಶಿವನಗರ ಪೊಲೀಸರಿಂದ ಐವರು ಆರೋಪಿಗಳ ಬಂಧನ

Published On - 3:23 pm, Sun, 31 October 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ