AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಗೋಡೆಯಲ್ಲಿ ಭಾರೀ ಬಿರುಕು: ಯಾವುದೇ ಕ್ಷಣ ಭೂಕುಸಿತ ಸಂಭವಿಸುವ ಭೀತಿ

ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವವರು ಎಚ್ಚರ ವಹಿಸಲೇಬೇಕು. ಹೆದ್ದಾರಿ ಬದಿಗೆ ಕಟ್ಟಲಾಗಿರುವ ಬೃಹತ್ ತಡೆಗೋಡೆ ಬಾಯ್ದೆರೆದು ನಿಂತಿದೆ. ಹಾಗಾಗಿ ಯಾವುದೇ ಕ್ಷಣದಲ್ಲಿ ಈ ತಡೆಗೋಡೆ ಕುಸಿದು ಭೂ ಕುಸಿತವಾಗುವ ಭೀತಿ ತಲೆದೋರಿದೆ. ಇದರಿಂದಾಗಿ ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುವವರು ಜೀವ ಕೈಯಲ್ಲಿ ಹಿಡಿದುಕೊಂಡೇ ಓಡಾಡುವಂತಾಗಿದೆ.

ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಗೋಡೆಯಲ್ಲಿ ಭಾರೀ ಬಿರುಕು: ಯಾವುದೇ ಕ್ಷಣ ಭೂಕುಸಿತ ಸಂಭವಿಸುವ ಭೀತಿ
ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಗೋಡೆಯಲ್ಲಿ ಭಾರೀ ಬಿರುಕು
Gopal AS
| Edited By: |

Updated on:Aug 01, 2025 | 10:21 AM

Share

ಮಡಿಕೇರಿ, ಆಗಸ್ಟ್ 1: ಮಡಿಕೇರಿ ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ (Madikeri Mangaluru National Highway) 2018ರ ವೇಳೆ ಭಾರೀ ಭೂಕುಸಿತ ಸಂಭವಿಸಿ ಸಂಚಾರವೇ ಬಂದ್ ಆಗಿತ್ತು. ಅದಾದ ಬಳಿಕ ನಾಲ್ಕೈದು ವರ್ಷ ಕಾಮಗಾರಿ ಮಾಡಿ ಮೂರು ಕೋಟಿ ರೂ. ವೆಚ್ಚದಲ್ಲಿ ಬೃಹತ್ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ಆದರೆ, ಈ ತಡೆಗೋಡೆ ನಿರ್ಮಾಣವಾಗಿ ಒಂದು ಮಳೆಗಾಲ ಕಳೆಯುವುದರ ಒಳಗೆಯೇ ಬಿರುಕು ಬಿಟ್ಟು ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿ ಎದುರಾಗಿದೆ. ಮಡಿಕೇರಿ (Madikeri) ನಗರದಿಂದ ಕೇವಲ ಅರ್ಧ ಕಿಲೋಮೀಟರ್ ದೂರದಲ್ಲಿ ಈ ಹೆದ್ದಾರಿ ತಡೆಗೋಡೆ ಬಾಯ್ಬಿಟ್ಟು ಕುಳಿತಿದೆ. ಸುಮಾರು ನಾಲ್ಕು ಹಂತಗಳಲ್ಲಿ 80 ಮೀಟರ್ ಎತ್ತರದಲ್ಲಿ ಈ ತಡೆಗೋಡೆಯನ್ನು ಬಲಿಷ್ಠವಾಗಿ ಕಟ್ಟಲಾಗಿದೆ. ಆದರೆ, ನೀರು ಮತ್ತು ಮಣ್ಣಿನ ವಿಪರೀತ ಒತ್ತಡದಿಂದ ಈ ತಡೆಗೋಡೆ ಬಿರುಕು ಬಿಟ್ಟಿದೆ. ಸದ್ಯಕ್ಕೆ ಹೆದ್ದಾರಿಗೆ ಯಾವುದೇ ಅಪಾಯ ಇಲ್ಲ ಅಂತ ಜಿಲ್ಲಾಧಿಕಾರಿ ಹೇಳಿದ್ದಾರೆ.

ನಿವಾಸಿಗಳ ಸ್ಥಳಾಂತರಕ್ಕೆ ಸೂಚನೆ

ತಡೆಗೋಡೆಯ ಕೆಳಗೆ ಹಲವು ಮನೆಗಳಿದ್ದು ಎಲ್ಲಾ ಮನೆಗಳೂ ಅಪಾಯಕ್ಕೆ ಸಿಲುಕಿವೆ. ತಡೆಗೋಡೆ ಕುಸಿದು ಹೋದರೆ ಮನೆಗಳು ಮತ್ತು ಅವುಗಳಲ್ಲಿರುವ ನಿವಾಸಿಗಳೂ ಅಪಾಯಕ್ಕೆ ಸಿಲುಕಲಿದ್ದಾರೆ. ಹಾಗಾಗಿ ಈ ನಿವಾಸಿಗಳ ಸ್ಥಳಾಂತರ ಮಾಡುವಂತೆ ಸೂಚನೆ ನೀಡಲಾಗಿದೆ. ತಡೆಗೋಡೆ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್​​ಗಳು ಸ್ಥಳ ಪರಿಶೀಲನೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ಸದ್ಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ನಿಯಂತ್ರಣ ಮಾಡಿದ್ದಾರೆ. ಇದರಿಂದ ಸಂಚಾರಕ್ಕೆ ಅಡಚಣೆ ಯಾಗಿದೆ.

ಇದನ್ನೂ ಓದಿ: ಕಾರ್ಮಿಕರಿಗೆ ಒತ್ತಡ ಹೇರಿ 10 ಗಂಟೆ ಕೆಲಸ ಮಾಡಿಸ್ಬೇಡಿ: ಕಂಪನಿಗಳಿಗೆ ಸರ್ಕಾರ ಖಡಕ್ ಎಚ್ಚರಿಕೆ

ಇದನ್ನೂ ಓದಿ
Image
ಫೋನ್​ನಲ್ಲಿ ಹರಟೆ ಹೊಡೆಯುತ್ತಾ ಜನರ ಸತಾಯಿಸಿದ ಕ್ಲರ್ಕ್: ವಿಡಿಯೋ ವೈರಲ್
Image
ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ
Image
ಕಾರ್ಮಿಕರಿಗೆ ಒತ್ತಡ ಹೇರಿ 10 ಗಂಟೆ ಕೆಲಸ ಮಾಡಿಸ್ಬೇಡಿ: ಸರ್ಕಾರ ಎಚ್ಚರಿಕೆ
Image
ಚಾಲಕರಿಗೆ ಕಡ್ಡಾಯ ಹೆಲ್ತ್ ಕಾರ್ಡ್: ಹೊಸ ನಿಯಮ ಕಡ್ಡಾಯಕ್ಕೆ ಚಿಂತನೆ

ಒಟ್ಟಿನಲ್ಲಿ ಈ ಹೆದ್ದಾರಿ ಸದ್ಯದ ಮಟ್ಟಿಗೆ ಟೈಂ ಬಾಂಬ್​​ನಂತಾಗಿದ್ದು,​ ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸಬಹುದು. 3 ಕೋಟಿ ರೂ. ವೆಚ್ಚ ಮಾಡಿ ನಿರ್ಮಾಣ ಮಾಡಲಾಗಿರುವ ಈ ತಡೆಗೋಡೆ ಒಂದು ಮಳೆಗಾಲ ಕಳೆಯುವದರೊಳಗೆಯೇ ಹೀಗೆ ಬಾಯ್ಬಿಟ್ಟು ನಿಂತಿರುವುದು ಕಾಮಗಾರಿ ಬಗ್ಗೆಯೂ ಅನುಮಾನ ಮೂಡವಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 am, Fri, 1 August 25

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​