AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು; ಅರೆಕಾಡು ಗ್ರಾಮದಲ್ಲಿ ಟ್ರ್ಯಾಕ್ಟರ್ ಚಾಲಕನ ಕೊಂದ ಆನೆ ಕೊನೆಗೂ ಸೆರೆ, ದುಬಾರೆ ಶಿಬಿರಕ್ಕೆ ಸ್ಥಳಾಂತರ

Elephant Captured in Kodagu; 18 ರಿಂದ 20 ವರ್ಷದ ಗಂಡು ಆನೆಯನ್ನು ಸೆರೆ ಹಿಡಿಯಲಾಗಿದೆ. ನಾಲ್ಕು ಪಳಗಿದ ಆನೆಗಳೊಂದಿಗೆ ಮಡಿಕೇರಿ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಎಂದು ಮಡಿಕೇರಿ ವಿಭಾಗದ ಡಿಸಿಎಫ್ ಎಟಿ ಪೂವಯ್ಯ ಖಚಿತಪಡಿಸಿದ್ದಾರೆ. ಸೆರೆ ಹಿಡಿದ ಆನೆಯನ್ನು ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಕೊಡಗು; ಅರೆಕಾಡು ಗ್ರಾಮದಲ್ಲಿ ಟ್ರ್ಯಾಕ್ಟರ್ ಚಾಲಕನ ಕೊಂದ ಆನೆ ಕೊನೆಗೂ ಸೆರೆ, ದುಬಾರೆ ಶಿಬಿರಕ್ಕೆ ಸ್ಥಳಾಂತರ
ಮಡಿಕೇರಿ ತಾಲೂಕಿನ ಅರೆಕಾಡು ಸಮೀಪದ ಮದರ ಕುಪ್ಪೆಯಲ್ಲಿ ಸೆರೆಯಾದ ಕಾಡಾನೆ
TV9 Web
| Edited By: |

Updated on: Aug 15, 2023 | 10:03 PM

Share

ಮಡಿಕೇರಿ, ಆಗಸ್ಟ್ 15: ಕೊಡಗಿನಲ್ಲಿ (Kodagu) ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಅವರನ್ನು ಬಲಿತೆಗೆದುಕೊಂಡಿದ್ದ ಆನೆಯನ್ನು (Wild Elephant) ಹಲವು ಸಾಕಾನೆಗಳ ಸಹಾಯದಿಂದ ಅರಣ್ಯ ಇಲಾಖೆಯ ಸಿಬ್ಬಂದಿ (Forest Department) ಮಂಗಳವಾರ ಸೆರೆಹಿಡಿದಿದ್ದಾರೆ. ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸುಮಾರು 150 ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ. ದಕ್ಷಿಣ ಕೊಡಗಿನ ಅರೆಕಾಡು ಪ್ರದೇಶದಲ್ಲಿ ಆನೆಯನ್ನು ಸೆರೆ ಹಿಡಿಯಲಾಗಿದೆ. ಭಾನುವಾರ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಆನೆ ದಾಳಿಗೆ ಕಟ್ಟೆಮಾಡು ದೇವಪ್ಪ(58) ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಮಡಿಕೇರಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಅರೆಕಾಡು ಅಭ್ಯತ್​ ಮಂಗಲ ವ್ಯಾಪ್ತಿಯಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದರು.

ದುಬಾರೆ ಮತ್ತು ಮತ್ತಿಗೋಡು ಆನೆ ಶಿಬಿರಗಳಿಂದ ಪಳಗಿದ ಆನೆಗಳ ನೆರವಿನೊಂದಿಗೆ ಸೋಮವಾರ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಯಿತು. ಅರಣ್ಯ ಇಲಾಖೆಯ ಸುಮಾರು 150 ಸಿಬ್ಬಂದಿ ಸೋಮವಾರದಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಆದರೆ, ಆನೆ ಪತ್ತೆಯಾಗಿರಲಿಲ್ಲ. ಮಂಗಳವಾರ ಮಧ್ಯಾಹ್ನದ ವೇಳೆಗೆ ಆನೆಯನ್ನು ಪತ್ತೆ ಹಚ್ಚಲಾಗಿದ್ದು, ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

18 ರಿಂದ 20 ವರ್ಷದ ಗಂಡು ಆನೆಯನ್ನು ಸೆರೆ ಹಿಡಿಯಲಾಗಿದೆ. ನಾಲ್ಕು ಪಳಗಿದ ಆನೆಗಳೊಂದಿಗೆ ಮಡಿಕೇರಿ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಎಂದು ಮಡಿಕೇರಿ ವಿಭಾಗದ ಡಿಸಿಎಫ್ ಎಟಿ ಪೂವಯ್ಯ ಖಚಿತಪಡಿಸಿದ್ದಾರೆ.

ನಂತರ ಸೆರೆ ಹಿಡಿದ ಆನೆಯನ್ನು ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಯಿತು.

ಈ ಮಧ್ಯೆ, ಸೆರೆ ಸಿಕ್ಕ ಆನೆ ಕಟ್ಟೆಮಾಡು ದೇವಪ್ಪ ಅವರನ್ನು ಕೊಂದ ಆನೆ ಅಲ್ಲ ಎಂದು ಅರೆಕಾಡು ನಿವಾಸಿಗಳು ಪ್ರತಿಪಾದಿಸಿದ್ದಾರೆ. ಆದರೆ, ದೇವಪ್ಪನನ್ನು ಕೊಂದಿದ್ದು ಇದೇ ಆನೆ ಎಂದು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದು, ಪ್ರತ್ಯಕ್ಷದರ್ಶಿಗಳಿಂದ ದೃಢಪಟ್ಟಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವು, ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ

ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್ಎಸ್ ಬೋಸರಾಜು ಭೇಟಿ ನೀಡಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಬಗ್ಗೆ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ. ಹೆಚ್ಚುತ್ತಿರುವ ವನ್ಯಜೀವಿ ಸಂಘರ್ಷದ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಶಾಶ್ವತ ಪರಿಹಾರವನ್ನು ವಿಸ್ತರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಕಟ್ಟೆಮಾಡು ದೇವಪ್ಪ ಆನೆ ದಾಳಿಯಿಂದ ನಿಧನರಾದ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ, ಅಭ್ಯತ್​ ಮಂಗಲ, ಮಡಿಕೇರಿ ತಾಲೂಕಿನ ಹೊಸ್ಕೇರಿ, ಮುರಗೋಡ, ಕಟ್ಟೆಮಾಡು, ಅರೆಕಾಡು, ಗುಯ್ಯ, ಸಿದ್ದಾಪುರದ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು.

ಕೊಡಗು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ