AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಸೇವನೆಗೆ ಶಿಕ್ಷೆಯಾಗಿ ಪೊಲೀಸರ ಜೊತೆ ಟ್ರಾಫಿಕ್ ನಿಯಂತ್ರಿಸಿದ ವ್ಯಕ್ತಿ: ಅಪರೂಪದ ಘಟನೆಗೆ ಸಾಕ್ಷಿಯಾದ ಕೊಡಗಿನ ಸಿದ್ದಾಪುರ

ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯದ ಸಮುದಾಯ ಸೇವೆ ಶಿಕ್ಷೆಯ ಆದೇಶದಂತೆ ಕೊಡಗಿನ ಸಿದ್ದಾಪುರದಲ್ಲಿ ವ್ಯಕ್ತಿಯೋರ್ವ ದಿನವಿಡೀ ಸಂಚಾರಿ ಪೊಲೀಸರ ಜೊತೆಗೂಡಿ ವಾಹನ ಸಂಚಾರ ನಿಯಂತ್ರಿಸಿದ ಅಪರೂಪದ ಘಟನೆ ನಡೆದಿದೆ. ನ್ಯಾಯಾಲಯದ ಆದೇಶದಂತೆ ವ್ಯಕ್ತಿ ನವೆಂಬರ್ 15ರಂದು ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕರ್ತವ್ಯಕ್ಕೆ ಹಾಜರಾಗಿದ್ದರು.

ಗಾಂಜಾ ಸೇವನೆಗೆ ಶಿಕ್ಷೆಯಾಗಿ ಪೊಲೀಸರ ಜೊತೆ ಟ್ರಾಫಿಕ್ ನಿಯಂತ್ರಿಸಿದ ವ್ಯಕ್ತಿ: ಅಪರೂಪದ ಘಟನೆಗೆ ಸಾಕ್ಷಿಯಾದ ಕೊಡಗಿನ ಸಿದ್ದಾಪುರ
ಗಾಂಜಾ ಸೇವನೆಗೆ ಶಿಕ್ಷೆಯಾಗಿ ಪೊಲೀಸರ ಜೊತೆ ಟ್ರಾಫಿಕ್ ನಿಯಂತ್ರಿಸಿದ ವ್ಯಕ್ತಿ
ಪ್ರಸನ್ನ ಹೆಗಡೆ
|

Updated on: Nov 16, 2026 | 7:49 PM

Share

ಮಡಿಕೇರಿ, ನವೆಂಬರ್​ 16: ಗಾಂಜಾ ಸೇವನೆ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶದಂತೆ ವ್ಯಕ್ತಿಯೋರ್ವ ಸಂಚಾರಿ ಪೊಲೀಸರ ಜೊತೆಗೆ ಕರ್ತವ್ಯ ನಿರ್ವಹಿಸಿರುವ ಅಪರೂಪದ ಘಟನೆಗೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿದ್ದಾಪುರ ಪಟ್ಟಣ ಸಾಕ್ಷಿಯಾಗಿದೆ. ಗಾಂಜಾ ಸೇವನೆ ಮಾಡಿದ ಪ್ರಕರಣದಲ್ಲಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ 5,000 ರೂಪಾಯಿ ದಂಡ ವಿಧಿಸಿದ್ದ ನ್ಯಾಯಾಲಯ, ಇದರ ಜೊತೆಗೆ ಸಮುದಾಯ ಸೇವೆ ಮಾಡುವಂತೆ ಶಿಕ್ಷೆಯನ್ನೂ ನೀಡಿತ್ತು.

ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ

ನ್ಯಾಯಾಲಯದ ಆದೇಶದಂತೆ ಆಸೀಮ್ ನವೆಂಬರ್ 15ರಂದು ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದು ಅವರ ಸಮುದಾಯ ಸೇವೆಯ ಭಾಗವಾಗಿತ್ತು. ಪಟ್ಟಣದ ಸಂಚಾರಕ್ಕೆ ಅಡ್ಡಿಯಾಗದಂತೆ ವಾಹನಗಳ ಓಡಾಟವನ್ನು ಸುಗಮಗೊಳಿಸುವುದು ಅವರ ಕೆಲಸವಾಗಿತ್ತು. ದಿನವಿಡೀ ವಾಹನಗಳ ಸಂಚಾರ ನಿಯಂತ್ರಿಸುವುದರ ಜೊತೆಗೆ ಪಾದಚಾರಿಗಳ ಓಡಾಟವನ್ನೂ ಅವರು ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಹಾರಂಗಿ ಜಲಕ್ರೀಡಾ ಕೇಂದ್ರದಲ್ಲಿ ದುರಂತ: ಬೋಟ್ ಪಲ್ಟಿಯಾಗಿ ದಂಪತಿ ಸಾವು; ಇಬ್ಬರು ಮಕ್ಕಳ ರಕ್ಷಣೆ

ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು ಸಮುದಾಯ ಸೇವೆಗೆ ಆದೇಶಿಸಿದ ನ್ಯಾಯಾಲಯ, ಸಾರ್ವಜನಿಕ ಸೇವೆಯ ಮೂಲಕ ಅಪರಾಧಿಗೆ ತನ್ನ ಸಾಮಾಜಿಕ ಜವಾಬ್ದಾರಿಗಳ ಅರಿವು ಮೂಡುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಇದೇ ವರ್ಷ ಮಾರ್ಚ್‌ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಫಲಕ ಹಿಡಿದುಕೊಳ್ಳುವಂತೆ ನ್ಯಾಯಾಲಯ ಸೂಚಿಸಿದ್ದ ಪ್ರಕರಣ ಕೂಡ ಗಮನ ಸೆಳೆದಿತ್ತು. ಬೈಕ್ ಸವಾರ ತನ್ನ ತಪ್ಪನ್ನು ಒಪ್ಪಿಕೊಂಡಿದ್ದ ಹಿನ್ನೆಲೆ ಶಿಕ್ಷೆಯ ಅವಧಿಯಲ್ಲಿ ಫಲಕವನ್ನು ಹಿಡಿದಿರುವುದನ್ನು ಖಚಿತಪಡಿಸಿಕೊಳ್ಳಲು ಸಮೀಪದಲ್ಲೇ ಪೊಲೀಸ್ ಸಿಬ್ಬಂದಿಯೊಬ್ಬರನ್ನು ನಿಯೋಜಿಸಲಾಗಿತ್ತು ಎಂದು ಎನ್​​ಡಿ ಟಿವಿ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌