Earthquake: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಮತ್ತೆ ಲಘು ಭೂಕಂಪದ ಅನುಭವ

| Updated By: ನಯನಾ ರಾಜೀವ್

Updated on: Jul 11, 2022 | 5:04 PM

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಮತ್ತೆ ಭೂಕಂಪದ ಅನುಭವವಾಗಿದೆ. ಚೆಂಬು, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ಲಘು ಭೂಕಂಪ ಸಂಭವಿದೆ.

Earthquake: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಮತ್ತೆ ಲಘು ಭೂಕಂಪದ ಅನುಭವ
Earthquake
Follow us on

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಮತ್ತೆ ಭೂಕಂಪದ ಅನುಭವವಾಗಿದೆ. ಚೆಂಬು, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ಲಘು ಭೂಕಂಪ ಸಂಭವಿದೆ.
ಸಂಜೆ 4.01 ನಿಮಿಷಕ್ಕೆ ಭೂಮಿ ಕಂಪಿಸಿದ ಅನುಭವವವಾಗಿದ್ದು, ನಿನ್ನೆಯೂ ಇದೇ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು.

ಇದು ಈ ಭಾಗದಲ್ಲಿ ನಡೆಯುತ್ತಿರುವ 9ನೇ ಕಂಪನವಾಗಿದೆ. ದೊಡ್ಡ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು, ಮನೆಯಲ್ಲಿದ್ದವರು ಭಯದಿಂದ ಹೊರಗೋಡಿ ಬಂದರು ಎಂದು ತಿಳಿದುಬಂದಿದೆ.

ಕಳೆದ ಕೆಲವು ದಿನಗಳಿಂದ ಕೊಡಗು ಹಾಗೂ ದಕ್ಷಿಣ ಕನ್ನಡ ಭಾಗಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಜುಲೈ 10ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗು ಜಿಲ್ಲೆ ಮಡಿಕೇರಿ ಪ್ರದೇಶದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿತ್ತು.

ಬೆಳಗ್ಗೆ 6.22ಕ್ಕೆ ಸಂಭವಿಸಿದ ಲಘು ಭೂಕಂಪದ ಕೇಂದ್ರ ಸುಳ್ಯ ತಾಲೂಕಿನ ಅರಂತೋಡು ಎಂದು ಕರ್ನಾಟಕ ಸ್ಟೇಟ್‌ ಡಿಸಾಸ್ಟರ್‌ ಮಾನಿಟರಿಂಗ್‌ ಸೆಂಟರ್‌  ಮಾಹಿತಿ ನೀಡಿತ್ತು.

ಬೆಳಗ್ಗೆ 6 ಗಂಟೆ 22 ನಿಮಿಷ 30 ಸೆಕೆಂಡ್‌ಗೆ ಕಂಪನದ ಅನುಭವವಾಗಿತ್ತು, ಕಂಪನದ ಪರಿಮಾಣ 1.8 ಇತ್ತು. ಅರಂತೋಡು ಗ್ರಾಮದ 1.1 ಕಿ.ಮೀ. ಪರಿಸರದಲ್ಲಿ 10 ಕಿ.ಮೀ. ಆಳದಲ್ಲಿ ಕಂಪನ ಉಂಟಾಗಿದೆ ಎಂದು ರಿಕ್ಟರ್‌ ಮಾಪಕದ ಅಂಕಿ ಅಂಶಗಳ ಪ್ರಕಾರ ಕೆಎಸ್‌ಎನ್‌ಡಿಎಂಸಿ ಹೇಳಿದೆ.

Published On - 5:00 pm, Mon, 11 July 22