AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಟ್ರೆಕ್ಕಿಂಗ್​ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆ

ಕಳೆದ ಗುರುವಾರ ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಕೊನೆಗೂ ಪತ್ತೆ ಆಗಿದ್ದಾರೆ. ಪೊಲೀಸ್​, ಅರಣ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಶ್ವಾನ ದಳ ಹುಡುಕಾಟ ನಡೆಸಿದರೂ ಶರಣ್ಯಳ ಸುಳಿವೇ ಸಿಕ್ಕಿರಲಿಲ್ಲ. ಇದೀಗ ಪಾಳು ಬಿದ್ದ ಬಂಗಲೆಯೊಂದರಲ್ಲಿ ಯುವತಿ ಪತ್ತೆ ಆಗಿದ್ದಾರೆ.

ಕೊಡಗಿನಲ್ಲಿ ಟ್ರೆಕ್ಕಿಂಗ್​ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆ
ಶರಣ್ಯ Image Credit source: tv9 kannada
ಗೋಪಾಲ್​ ಸೋಮಯ್ಯ
| Edited By: |

Updated on:Apr 05, 2026 | 7:15 PM

Share

ಕೊಡಗು, ಏಪ್ರಿಲ್​ 05: ಜಿಲ್ಲೆಯ ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ (Sharanya) ಕೊ‌ನೆಗೂ ಪತ್ತೆ ಆಗಿದ್ದಾರೆ. ಆ ಮೂಲಕ ನಾಲ್ಕು ದಿನಗಳ‌ ಕಾರ್ಯಾಚರಣೆ ಯಶಸ್ವಿ ಆಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ರಸ್ತೆ ಅರಿವಾಗದೆ ಪಾಳು ಬಿದ್ದ ಬಂಗಲೆಯೊಂದರಲ್ಲೇ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಜನಾಂಗದವರ ಸಹಾಯ ಬೆನ್ನಲ್ಲೇ ಇದೀಗ ಯುವತಿ ಪತ್ತೆ ಆಗಿದ್ದಾರೆ.

ಕೇರಳದಿಂದ ಕೊಡಗು ಜಿಲ್ಲೆಗೆ ಚಾರಣಕ್ಕಾಗಿ ಬಂದು ಗುರುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಯುವತಿ ಶರಣ್ಯ ಇದೀಗ ಕೊನೆಗೂ ಪತ್ತೆಯಾಗಿದ್ದಾರೆ. ಸದ್ಯ ಯುವತಿಯನ್ನು ಸುರಕ್ಷಿತವಾಗಿ ಕರೆತರಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ದಾರಿ ತಪ್ಪಿ ಕಾಡಿನಲ್ಲಿ ಕಳೆದುಹೋಗಿದ್ದ ಶರಣ್ಯಗಾಗಿ ಬುಡಕಟ್ಟು ಜನಾಂಗದ ಜೊತೆ ಅರಣ್ಯ ಸಿಬ್ಬಂದಿ 4 ದಿನದಿಂದ ನಿರಂತರ ಹುಡುಕಾಟ ನಡೆಸಿದ್ದರು.

ಇದನ್ನೂ ಓದಿ: ಶರಣ್ಯ ನಾಪತ್ತೆ ಕೇಸ್​​: 24ಗಂಟೆ ಕಳೆದರೂ ಸಿಗದ ಸುಳಿವು; ಹರಕೆ ಹೊತ್ತ ಕುಡಿಯ ಜನಾಂಗ

ಯುವತಿ ಶರಣ್ಯ ಕಾಡಿನಲ್ಲಿ ನಡೆದು ನಡೆದು ಪಾಳುಬಿದ್ದ ಬಂಗಲೆ ಸೇರಿದ್ದರು. ರಸ್ತೆ ಅರಿವಾಗದೆ ಅಲ್ಲೇ ಉಳಿದಿದ್ದರು. ಏಪ್ರಿಲ್ 2ರಿಂದ ಕಾಡಿನಲ್ಲಿ ಅಲೆದು ನಿತ್ರಾಣಗೊಂಡಿದ್ದ ಶರಣ್ಯರನ್ನು ಸದ್ಯ ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ.

ಪ್ರಕರಣ ಹಿನ್ನೆಲೆ 

35 ವರ್ಷದ ಶರಣ್ಯ ಕೇರಳದ ಕೋಯಿಕ್ಕೋಡ್ ನಿವಾಸಿ. ಎರ್ನಾಕುಲಂನಲ್ಲಿ ಐಟಿ ಉದ್ಯೋಗಿ. ಗುರುವಾರ ಬೆಳಗ್ಗೆ ಕಕ್ಕಬ್ಬೆ ಗ್ರಾಮದ ಹೋಂಸ್ಟೇಯೊಂದಕ್ಕೆ ಆಗಮಿಸಿದ್ದ ಈಕೆ ಬೆಳಗ್ಗೆ 8.30ರ ಸುಮಾರಿಗೆ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗುವ ಅರಣ್ಯ ಇಲಾಖೆಯ ಚೆಕ್​ಪೋಸ್ಟ್​ಗೆ ಆಗಮಿಸಿದ್ದಾಳೆ. ಆದರೆ ಒಬ್ಬೊಬ್ಬರನ್ನೇ ಟ್ರೆಕ್ಕಿಂಗ್ ಬಿಡುವುದಿಲ್ಲವಾದ್ರಿಂದ ಬೇರೊಂದು ಗ್ರೂಪ್ ಬಂದ ಬಳಿಕ ಅವರ ಜೊತೆ ಈಕೆಯನ್ನ ಕಳುಹಿಸಲಾಗಿತ್ತು.

ಮಧ್ಯಾಹ್ನ 1.30ರ ಸುಮಾರಿಗೆ ಈಕೆ ಇದೇ ಚೆಕ್​ ಪೋಸ್ಟ್​ ಬಳಿಗೆ ಹಿಂದಿರುಗಬೇಕಿತ್ತು. ಈಕೆಯನ್ನ ಕರೆತರಲೆಂದು ಹೋಮಸ್ಟೇ ಮಾಲಿಕ ನಂದ ತಮ್ಮ ಸ್ಕೂಟಿಯಲ್ಲಿ ಇಲ್ಲಿಗೆ ಬಂದು ಕರೆ ಮಾಡಿದಾಗ ನಾಟ್ ರೀಚೇಬಲ್ ಬಂದಿದೆ. ಮತ್ತೆರಡು ಬಾರಿ ಪ್ರಯತ್ನಿಸಿದಾಗ ಕರೆ ಸ್ವೀಕರಿಸಿದ ಆಕೆ ತಾನು ದಾರಿ ತಪ್ಪಿದ್ದೇನೆ ಎಂದು ಹೇಳಿದ್ದಳು. ಸಿಬ್ಬಂದಿ ಕಾರ್ಯಾಚರಣೇ ನಡೆಸಿದರೂ ಸುಳಿವೇ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: 4 ತಂಡಗಳಿಂದ ಶೋಧ ಕಾರ್ಯ

ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ 40ಕ್ಕೂ ಅಧಿಕ ಸಿಬ್ಬಂದಿ, ಸ್ಥಳೀಯರು ಸೇರಿ ಮತ್ತೆ ಕಾರ್ಯಾಚರಣೆ ಮಾಡಿದ್ದರು. ಶ್ವಾನ ದಳವನ್ನೂ ಕರೆಸಿ ಬೆಟ್ಟದ ಮೇಲೆ ಆಕೆ ಎಲ್ಲಿ ಮಿಸ್ ಆಗಿದಳೋ ಅಲ್ಲೆಲ್ಲಾ ಹುಡುಕಾಟ ನಡೆಸಿದರೂ ಸುಳಿವೇ ಇರಲಿಲ್ಲ. ಶರಣ್ಯ ಸುರಕ್ಷಿತವಾಗಿ‌ ಮರಳಿ ಬರಲೆಂದು ಬೆಟ್ಟ ಪ್ರದೇಶದಲ್ಲಿ ವಾಸಿಸುವ ಕುಡಿಯ ಜನಾಂಗ ಮಲೆ‌ ತಮ್ಮಚ್ಚ ದೇವರಿಗೆ ಹರಕೆ ಕೂಡ ಹೊತ್ತಿದ್ದರು. ಇದೀಗ ನಿರಂತರ ಶೋಧ ಬೆನ್ನಲ್ಲೇ ಯುವತಿ ಪತ್ತೆ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:58 pm, Sun, 5 April 26

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ