AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯ ಖಾಸಗಿ ಶಾಲೆಯ 9 ಮಕ್ಕಳಿಗೆ ಕೊರೊನಾ ಪಾಸಿಟಿವ್, ದಾವಣಗೆರೆ ಜಿಲ್ಲೆಗೆ ವಿದೇಶದಿಂದ 11 ಜನರ ಆಗಮನ

ಮಡಿಕೇರಿಯ ಒಂದೇ ಶಾಲೆಯ 9 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೊದಲು ಶಾಲಾ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಬಳಿಕ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕಿತರಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಒಂಭತ್ತು ಮಕ್ಕಳಿಗೆ ಪಾಸಿಟಿವ್ ಬಂದಿದೆ.

ಮಡಿಕೇರಿಯ ಖಾಸಗಿ ಶಾಲೆಯ 9 ಮಕ್ಕಳಿಗೆ ಕೊರೊನಾ ಪಾಸಿಟಿವ್, ದಾವಣಗೆರೆ ಜಿಲ್ಲೆಗೆ ವಿದೇಶದಿಂದ 11 ಜನರ ಆಗಮನ
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Dec 03, 2021 | 10:45 AM

Share

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ನಗರದ ಖಾಸಗಿ ಶಾಲೆಯ 9 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿತ ಮಕ್ಕಳ ಪ್ರಾಥಮಿಕ ಸಂಪರ್ಕಿತರಿಗೆ ಕೊರೊನಾ ಟೆಸ್ಟ್ ಮಾಡಿ ಶಾಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಟಿವಿ9ಗೆ ಕೊಡಗು ಡಿಹೆಚ್ಒ ಡಾ.ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ಮಡಿಕೇರಿಯ ಒಂದೇ ಶಾಲೆಯ 9 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೊದಲು ಶಾಲಾ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಬಳಿಕ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕಿತರಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಒಂಭತ್ತು ಮಕ್ಕಳಿಗೆ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ‌ ಮಕ್ಕಳಲ್ಲಿ ಯಾವುದೇ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಸೋಂಕಿತರೆಲ್ಲರೂ ಎಂಟನೇ ತರಗತಿ ವಿದ್ಯಾರ್ಥಿಗಳು. ಮಕ್ಕಳಿಗೆ ಅವರ ಮನೆಯಲ್ಲೇ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸೋಂಕಿತ ಮಕ್ಕಳ ಪ್ರಾಥಮಿಕ ಸಂಪರ್ಕಿತರಿಗೂ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ ಎಂದು ಕೊಡಗು ಡಿಹೆಚ್ಒ ಡಾ.ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ತುಮಕೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಮತ್ತೆ ಐವರಿಗೆ ಕೊವಿಡ್ ಪಾಸಿಟಿವ್ ಬಂದಿದೆ. ಕೇರಳ ಮೂಲದ ಐವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಇದೇ ಕಾಲೇಜಿನಲ್ಲಿ ಈ‌ ಮೊದಲು 7 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಈಗ ಪ್ರಾಥಮಿಕ ಸಂಪರ್ಕದ ಐವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಿದ್ದಗಂಗಾ ನರ್ಸಿಂಗ್ ಕಾಲೇಜಿನಲ್ಲಿ 8 ಜನರಿಗೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 20 ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ತಗುಲಿದೆ ಎಂದು ತುಮಕೂರು ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.

ದಾವಣಗೆರೆ ಜಿಲ್ಲೆಗೆ ವಿದೇಶದಿಂದ 11 ಜನರ ಆಗಮನ ಇನ್ನು ಮತ್ತೊಂದೆಡೆ ಬೆಂಗಳೂರಿನಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು ಕರುನಾಡಿನಲ್ಲಿ ಆತಂಕ ಹೆಚ್ಚಾಗಿದೆ. ದಾವಣಗೆರೆ ಜಿಲ್ಲೆಗೆ ವಿದೇಶದಿಂದ 11 ಜನರು ಆಗಮಿಸಿದ್ದಾರೆ. ಅಮೆರಿಕ, ಐರ್ಲೆಂಡ್‌, ಇಂಗ್ಲೆಂಡ್, ದುಬೈ, ಜರ್ಮನಿ ಸೇರಿದಂತೆ ವಿದೇಶಗಳಿಂದ ಮೊನ್ನೆ 7 ಜನ, ನಿನ್ನೆ ನಾಲ್ವರು ಆಗಮಿಸಿದ್ದಾರೆ. ಎಲ್ಲ ಪ್ರಯಾಣಿಕರ ಕೊವಿಡ್ ಟೆಸ್ಟ್ ವರದಿ ನೆಗೆಟಿವ್ ಬಂದಿದೆ. 11 ಜನರನ್ನು 7 ದಿನ ಕ್ವಾರಂಟೈನ್ ಮಾಡಲಾಗಿದೆ ಎಂದು ಸರ್ವೇಕ್ಷಣ ಅಧಿಕಾರಿ ಡಾ.ರಾಘವನ್ ಮಾಹಿತಿ ನೀಡಿದ್ರು.

ಮೈಸೂರಿನ ನರ್ಸಿಂಗ್ ವಿದ್ಯಾರ್ಥಿಗಳ ಒಮಿಕ್ರಾನ್ ವರದಿ ನೆಗೆಟಿವ್ ವಾರದ ಹಿಂದೆ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊವಿಡ್ ಪಾಸಿಟಿವ್ ಬಂದಿತ್ತು. ಹೀಗಾಗಿ ಎಲ್ಲರ ಸ್ಯಾಂಪಲ್ಸ್ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಸದ್ಯ ಎಲ್ಲ ವಿದ್ಯಾರ್ಥಿಗಳ ಒಮಿಕ್ರಾನ್ ವರದಿ ನೆಗೆಟಿವ್ ಬಂದಿದೆ ಎಂದು ಮೈಸೂರು ಡಿಹೆಚ್‌ಒ ಡಾ.ಕೆ.ಹೆಚ್.ಪ್ರಸಾದ್ ತಿಳಿಸಿದ್ದಾರೆ.

ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆ ಮೈಸೂರಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ಇಲಾಖೆ ಜಿಲ್ಲೆಯ ಸರ್ವೇಕ್ಷಣ ಚುರುಕುಗೊಳಿಸಿದೆ. ಬಾವಲಿ ಗಡಿಯಲ್ಲೂ ತಪಾಸಣೆ ಚುರುಕುಗೊಂಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಒಮಿಕ್ರಾನ್ ಪತ್ತೆ ಬೆನ್ನಲ್ಲೇ ಕರುನಾಡಿಗೆ ಕಾಡುತ್ತಿದೆ ಕೊರೊನಾ ಮೂರನೆ ಅಲೆ ಆತಂಕ, ನಗರದಲ್ಲಿ ಕಟ್ಟೆಚ್ಚರ

Published On - 10:04 am, Fri, 3 December 21