ವಯನಾಡಿನಲ್ಲಿ ವ್ಯಕ್ತಿಯ ಹತ್ಯೆ ಮಾಡಿದ್ದ ಕಾಡಾನೆ ಸೆರೆಗೆ ಕೊಡಗಿನಲ್ಲಿ ಕಾರ್ಯಾಚರಣೆ!

ಕೇರಳದ ವಯನಾಡಿನಲ್ಲಿ ಫೆಬ್ರವರಿ ಹತ್ತರಂದು ವ್ಯಕ್ತಿ ಒಬ್ಬರನ್ನು ಹತ್ಯೆ ಮಾಡಿದ್ದ ಕಾಡಾನೆ ಇದೀಗ ಕೊಡಗು ಜಿಲ್ಲೆಯ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ದೊರೆತಿದೆ. ಹೀಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಅರಿವಳಿಕೆ ತಜ್ಞರ ನೆರವಿನೊಂದಿಗೆ ಆನೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ವಯನಾಡಿನಲ್ಲಿ ವ್ಯಕ್ತಿಯ ಹತ್ಯೆ ಮಾಡಿದ್ದ ಕಾಡಾನೆ ಸೆರೆಗೆ ಕೊಡಗಿನಲ್ಲಿ ಕಾರ್ಯಾಚರಣೆ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Mar 05, 2024 | 11:11 AM

ಮಡಿಕೇರಿ, ಮಾರ್ಚ್​ 5: ಕೇರಳದ ವಯನಾಡಿನಲ್ಲಿ (Wayanad) ವ್ಯಕ್ತಿ ಒಬ್ಬರನ್ನು ಇತ್ತೀಚೆಗೆ ಹತ್ಯೆ ಮಾಡಿದ್ದ ಕಾಡಾನೆಯ (Wild Elephant) ಸೆರಗೆ ಕೊಡಗು (Kodagu) ಜಿಲ್ಲೆಯ ನಾಗರಹೊಳೆ (Nagarahole) ಅಭಯಾರಣ್ಯದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಮಖಾನ್ ಹೆಸರಿನ ಕಾಡಾನೆ ಸದ್ಯ ನಾಗರಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಓಡಾಡುತ್ತಿದೆ ಎಂಬುದು ರೇಡಿಯೋ ಕಾಲರ ಮೂಲಕ ತಿಳಿದು ಬಂದಿದೆ. ಹೀಗಾಗಿ ನಾಗರಹೊಳೆಯ ನಾಣಚ್ಚಿ, ಹುಲಿಕಲ್ಲು, ಆಲಂದೋಡು ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸದ್ಯ ಕಾಡಾನೆಯು ಮದವೇರಿ ನಾಗರಹೊಳೆ ಪ್ರದೇಶದಲ್ಲಿ ಅಡ್ಡಾಡುತ್ತಿದೆ. ಕ್ಷಣಕ್ಷಣಕ್ಕೂ ಸ್ಥಳ ಬದಲಾಯಿಸುತ್ತಿರುವುದರಿಂದ ಅದಕ್ಕೆ ಅರಿವಳಿಕೆ ನೀಡಲು ಪಶು ವೈದ್ಯರು ಹರಸಾಹಸಪಡುತ್ತಿದ್ದಾರೆ.

ಈ ಆನೆಗೆ ಹಾಸನದ ಬೇಲೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ರೇಡಿಯೋ ಕಾಲರ್ ಅಳವಡಿಸಿದ್ದರು. ನಂತರ ಅದನ್ನು ಚಾಮರಾಜನಗರ ವ್ಯಾಪ್ತಿಯ ಕಾಡಿನಲ್ಲಿ ಬಿಡಲಾಗಿತ್ತು. ಅದು ಅಲ್ಲಿಂದ ಕೇರಳದ ವಯನಾಡಿಗೆ ತೆರಳಿತ್ತು ಎನ್ನಲಾಗಿದೆ. ಕೇರಳದ ವಯನಾಡಿನಲ್ಲಿ ಫೆಬ್ರವರಿ 10 ರಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು.

ಆನೆಯು ವಯನಾಡಿನ ಪ್ರಜೀಶ್ ಎಂಬವರನ್ನು ದಾಳಿ ಮಾಡಿ ಹತ್ಯೆ ಮಾಡಿತ್ತು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಲೋಕಸಭಾ ಕ್ಷೇತ್ರ ವಾಗಿರುವ ವಯನಾಡಿನಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಿದ್ದರಿಂದ ಮತ್ತು ಅದು ಕರ್ನಾಟಕದಲ್ಲಿ ರೇಡಿಯೋ ಕಾಲರ್ ಅಳವಡಿಸಿರುವ ಹಾನಿಯಾಗಿರುವ ಕಾರಣ ಇಲ್ಲಿನ ಸರ್ಕಾರ ಮೃತ ವ್ಯಕ್ತಿಯ ಕುಟುಂಬದವರಿಗೆ 15 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು. ಇದು ರಾಜ್ಯದಲ್ಲಿ ತೀವ್ರ ರಾಜಕೀಯ ಕೋಲಾರಕ್ಕೆ ಕಾರಣವಾಗಿತ್ತು. ರಾಜ್ಯದ ಜನರ ತೆರಿಗೆಯನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಸಂಸದರೊಬ್ಬರ ಲೋಕಸಭಾ ಕ್ಷೇತ್ರ ಎಂಬ ಒಂದೇ ಕಾರಣಕ್ಕೆ ರಾಜ್ಯದ ಜನರ ತೆರಿಗೆ ಹಣ ಬಳಸಿಕೊಂಡು ಪರಿಹಾರ ಘೋಷಣೆ ಮಾಡಲಾಗಿದೆ. ಬೇಕಿದ್ದರೆ ಕಾಂಗ್ರೆಸ್ ಪಕ್ಷದ ವತಿಯಿಂದ ಪರಮಾನವೀಯ ನೆಲೆಯಲ್ಲಿ ಪರಿಹಾರ ನೀಡಲಿ ಎಂದು ಬಿಜೆಪಿ ಆಗ್ರಹಿಸಿತ್ತು. ಈ ಎಲ್ಲ ಬೆಳವಣಿಗೆಗಳ ಬಳಿಕ ಮೃತ ವ್ಯಕ್ತಿಯ ಕುಟುಂಬದವರು, ಕರ್ನಾಟಕ ಸರ್ಕಾರದ ಪರಿಹಾರ ನಾವು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ವಯನಾಡು ಆನೆ ದಾಳಿ ಪ್ರಕರಣ: ಕರ್ನಾಟಕದ ಪರಿಹಾರ ನಮಗೆ ಬೇಡ, ಸಂತ್ರಸ್ತನ ಕುಟುಂಬದವರು ಹೀಗಂದಿದ್ದೇಕೆ?

ಈ ಎಲ್ಲ ವಿದ್ಯಮಾನಗಳ ಬಳಿಕ ಕಾಡಾನೆಯ ತೆರಿಗೆ ಅರಣ್ಯ ಇಲಾಖೆ ಮತ್ತೆ ಕ್ರಮ ಕೈಗೊಳ್ಳಲು ಮುಂದಾಗಿತ್ತು.. ಅದರಂತೆ ಇದೀಗ ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಆನೆ ಇರುವ ಸುಳಿವು ಸಿಕ್ಕ ಕಾರಣ ಕಾರ್ಯಾಚರಣೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ