ಕಾವೇರಿ ಮಾತೆ, ಕೊಡವ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್! ಆರೋಪಿ ಅರೆಸ್ಟ್

ಅವಹೇಳನಕಾರಿ ಪೋಸ್ಟ್ ವಿರುದ್ಧ ಹಲವು ಸಂಘಟನೆಗಳು ಇಂದು (ಜುಲೈ 18) ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದವು. ಆರೋಪಿ ಬಂಧನವಾಗಿರುವ ಹಿನ್ನೆಲೆ ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.

ಕಾವೇರಿ ಮಾತೆ, ಕೊಡವ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್! ಆರೋಪಿ ಅರೆಸ್ಟ್
ಆರೋಪಿ ದಿವಿನ್ ದೇವಯ್ಯ
Follow us
TV9 Web
| Updated By: sandhya thejappa

Updated on:Jul 18, 2022 | 9:34 AM

ಕೊಡಗು: ಕಾವೇರಿ ಮಾತೆ (Kaveri Mathe) ಹಾಗೂ ಕೊಡವ ಮಹಿಳೆಯರ (Kodava Women) ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸರ ಕಾರ್ಯಚರಣೆಯಲ್ಲಿ ಆರೋಪಿ ದಿವಿನ್ ದೇವಯ್ಯ ಎಂಬುವವನು ಅರೆಸ್ಟ್ ಆಗಿದ್ದಾನೆ. ದಿವಿನ್ ದೇವಯ್ಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ನಿವಾಸಿ. ಈತ ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಕೊಡವ ಜನತೆಯ ಕುಲ ದೇವರಾಗಿರುವ ಕಾವೇರಿ ಮಾತೆ ಹಾಗೂ ಕೊಡವ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ.

ಅವಹೇಳನಕಾರಿ ಪೋಸ್ಟ್ ವಿರುದ್ಧ ಹಲವು ಸಂಘಟನೆಗಳು ಇಂದು (ಜುಲೈ 18) ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದವು. ಆರೋಪಿ ಬಂಧನವಾಗಿರುವ ಹಿನ್ನೆಲೆ ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ. ಆರೋಪಿ ಪತ್ತೆಗೆ ಕೊಡಗು ಪೊಲೀಸರು ಮುಂಬೈ ಪೊಲೀಸರ ನೆರವು ಪಡೆದಿದ್ದರು. ಮುಂಬೈ ಪೊಲೀಸರು ಕ್ಯಾಲಿಫೋರ್ನಿಯಾದಿಂದ ಖಾತೆ ವಿವರ ಪಡೆದಿದ್ದರು.

ಇದನ್ನೂ ಓದಿ: Presidential Election: ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ; ಚುನಾವಣಾ ಕಣದಲ್ಲಿ ದ್ರೌಪದಿ ಮುರ್ಮು, ಯಶವಂತ ಸಿನ್ಹಾ

ಇದನ್ನೂ ಓದಿ
Image
Unwanted Thoughts: ಬೇಡದ ಯೋಚನೆಗಳಿಂದ ಹೊರಬರುವುದು ಹೇಗೆ?
Image
CBSE Result 2022: ಸಕಾಲದಲ್ಲಿಯೇ ಸಿಬಿಎಸ್​ಇ ಫಲಿತಾಂಶ; ಧರ್ಮೇಂದ್ರ ಪ್ರಧಾನ್
Image
Rishabh Pant: 42ನೇ ಓವರ್​ನಲ್ಲಿ ರಿಷಭ್ ಪಂತ್ ಆಡಿದ ಆಟಕ್ಕೆ ಬೆರಗಾದ ಕ್ರಿಕೆಟ್ ಜಗತ್ತು: ವಿಡಿಯೋ ನೋಡಿ
Image
ICSE Results 2022: ಐಸಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ; ಬೆಂಗಳೂರಿನ 5 ವಿದ್ಯಾರ್ಥಿಗಳಿಗೆ 2ನೇ ರ‍್ಯಾಂಕ್‌

ಇದೊಂದು ದುರದೃಷ್ಟಕರ ಸಂಗತಿ. ಈ ಘಟನೆ ನಡೆಯಬಾರದಿತ್ತು. ಇದರಿಂದ‌ ಬಹುಸಂಖ್ಯಾತ ಜನರ ಭಾವನೆಗಳಿಗೆ ಧಕ್ಕೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ್ದನ್ನ ಪ್ರಚಾರ ‌ಮಾಡುವವರು ಇದನ್ನು ಯೋಚಿಸಬೇಕು. ಈ ಘಟನೆ ಸಾಮಾಜಿಕ ‌ಜಾಲತಾಣ ಬಳಸುವವರಿಗೆಲ್ಲರಿಗೂ ಒಂದು ಪಾಠವಾಗಲಿ ಎಂದು ಅಖಿಲ ಕೊಡವ ಸಮಾಜಗಳ ಒಕ್ಕೂಟ ಅಧ್ಯಕ್ಷ ಮಾತಂಡ‌ಮೊಣ್ಣಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಕೊಡಗು ಎಸ್​ಪಿ ಮಾತನಾಡಿ, ಇತ್ತೀಚೆಗೆ ಸಾಮಾಜಿಕ ಜಾಲತಾಣವನ್ನು ತಮಾಷೆಗೆ, ದುರುದ್ದೇಶಕ್ಕೆ ಬಳಸುವುದು ಸಾಮಾನ್ಯವಾಗಿದೆ. ಈ ರೀತಿ ಮಾಡುವುದರಿಂದ ಸಮಾಜದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಅವರಿಗೆ ಅರಿವಿಲ್ಲ. ಸಾಮಾಜಿಕ ಜಾಲತಾಣವನ್ನು ಸದುದ್ದೇಶಕ್ಕೆ ಬಳಸಿ ಎಂದರು.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಕ್ರಮ! ಎಂಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು

Published On - 8:33 am, Mon, 18 July 22

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್