ವಿಕ್ರಂ ಸಿಂಹ ಬಂಧನ ವಿಚಾರದಲ್ಲಿ ರಾಜಕಾರಣ: ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು
ವಿಕ್ರಂ ಸಿಂಹ ಬಂಧನ ವಿಷಯದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆ ಸಂಸದ ಪ್ರತಾಪ್ ಸಿಂಹ ಕೊಡಗಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಇಲ್ಲಿ ರಾಜಕಾರಣ ಮಾಡುತ್ತಿರುವವರು ಯಾರು. ಆ ಎಫ್ಐಆರ್ನಲ್ಲಿ ನನ್ನ ತಮ್ಮನ ಹೆಸರಿಲ್ಲ. ರಾಜಕಾರಣ ಮಾಡಿದ್ದು ಕಾಂಗ್ರೆಸ್ ಎಂದು ಕಿಡಿಕಾರಿದ್ದಾರೆ.
ಕೊಡಗು, ಜನವರಿ 01: ಇಲ್ಲಿ ರಾಜಕಾರಣ ಮಾಡುತ್ತಿರುವವರು ಯಾರು. ಆ ಎಫ್ಐಆರ್ನಲ್ಲಿ ನನ್ನ ತಮ್ಮನ ಹೆಸರಿಲ್ಲ. ರಾಜಕಾರಣ ಮಾಡಿದ್ದು ಕಾಂಗ್ರೆಸ್ ಎಂದು ಸಂಸದ ಪ್ರತಾಪ್ ಸಿಂಹ (pratap simha) ಹೇಳಿದ್ದಾರೆ. ವಿಕ್ರಂ ಸಿಂಹ ಬಂಧನ ವಿಷಯದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆ ಅವರು ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಧು ಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣ ಮುಚ್ಚಲು, ಮಾಧ್ಯಮಗಳ ಗಮನ ಬೇರೆಡೆ ಸೆಳೆದು ವಿಷಯಾಂತರ ಮಾಡಲು ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಿದ್ದೀರಾ ಎಂದು ಕಿಡಿಕಾರಿದ್ದಾರೆ.
ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಲಾಗುತ್ತಿದೆ
ಸಿದ್ದರಾಮಯ್ಯನವರಿಗೆ 2024 ಲೋಕಸಭೆ ಚುನಾವಣೆಯಲ್ಲಿ ಕೊಡಗು ಮೈಸೂರು ಕ್ಷೇತ್ರದಲ್ಲಿ ಅವರ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲ್ಲ ಅಂತ ಗೊತ್ತಿದೆ. ಪ್ರತಾಪ್ ಸಿಂಹನನ್ನು ರಾಜಕೀಯವಾಗಿ ಮುಗಿಸಬೇಕು, ಟೆಕೆಟ್ ತಪ್ಪಿಸಬೇಕು. ಇಲ್ಲದಿದ್ದರೆ ಪ್ರತಾಪ್ ಸಿಂಹ ವಿರುದ್ಧ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲ್ಲ. ಹಾಗಾಗಿ ನನ್ನನ್ನು ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ: ವಿಕ್ರಂ ಸಿಂಹ ಬಂಧನ: ಸಂಸದ ಪ್ರತಾಪ್ ಸಿಂಹ ಆರೋಪದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು
ಡಿಸೆಂಬರ್ 20 ರಂದು ಅಕ್ರಮವಾಗಿ ಮರ ಕಡಿದಿದ್ದಾರೆ ಎಂದು ಎಫ್ಐಆರ್ ದಾಖಲಾಗುತ್ತದೆ. ಎ1 ರಾಕೇಶ್ ಶೆಟ್ಟಿ, ಎ2 ಜಯಮ್ಮ ಜೊತೆಗೆ ಇತರರು ಎಂದು ದಾಖಲಾಗುತ್ತದೆ.
ತಲೆಮರೆಸಿಕೊಂಡಿರುವವರು ರವಿ ಎಂದು ದಾಖಲಾಗುತ್ತದೆ. 24 ನೇ ತಾರೀಖು ನಾನು ಕೆಲವು ವಿಚಾರಗಳ ಬಗ್ಗೆ ಹೇಳಿಕೆ ಕೊಟ್ಟೆ. ನಾನು ಹೇಳಿಕೆ ಕೊಟ್ಟ ಎರಡು ಗಂಟೆಯಲ್ಲಿ ಕಾಂಗ್ರೆಸ್ನ ಟ್ವಿಟರ್ ಮತ್ತು ಫೇಸ್ ಬುಕ್ ಖಾತೆಯಲ್ಲಿ ಟ್ವೀಟ್ ಮಾಡಲಾಗುತ್ತದೆ.
ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ ಕೇಸ್: ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಿಷ್ಟು
ಎ1 ಮತ್ತು ಎ2 ಇಬ್ಬರಿಗೂ ಸ್ಟೇಷಸ್ನಲ್ಲಿ ಬೇಲ್ ಆಗುತ್ತದೆ. ನನ್ನ ತಮ್ಮ ಬಳಿಯೂ 22 ನೇ ತಾರೀಖು ಹೇಳಿಕೆ ತಗೊಂಡಿದ್ದಾರೆ. ಹೇಳಿಕೆ ಕೊಟ್ಟ ಬಳಿಕ ಬೆಂಗಳೂರಿಗೆ ಹೋಗಿದ್ದಾನೆ. ಅದಾದ ಬಳಿಕ ತರೆಮರೆಸಿಕೊಂಡು ಹೋಗಿದ್ದಾನೆ ಎಂದು ರಾಜಕಾರಣ ಮಾಡಿದು ಯಾರು. ತರೆಮರೆಸಿಕೊಂಡು ಹೋಗುವವರು ಸ್ವಂತ ಕಾರು ಮೊಬೈಲ್ ತೆಗೆದುಕೊಂಡು ಹೋಗುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಕೋರ್ಟಿನಲ್ಲಿ ಜಡ್ಜ್ ನಿಮಗೆ ಮಂಗಳಾರತಿ ಮಾಡಿ ಐದು ನಿಮಿಷಕ್ಕೆ ಬೇಲ್ ಕೊಟ್ಟಿದ್ದಾರೆ. ರಾಜಕಾರಣ ಮಾಡುತ್ತಿರುವವರು ನೀವು ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:58 pm, Mon, 1 January 24