ಮಡಿಕೇರಿಯಲ್ಲಿ ಇದೇ ಶನಿವಾರ ಯಾರೂ ಮನೆಗಳಿಂದ ಹೊರಗೆ ಬರುವಂತಿಲ್ಲ; ರಸ್ತೆ ಮೇಲೆ ಜನ ಓಡಾಡುವಂತಿಲ್ಲ! ಯಾಕೆ?

President of india ram nath kovind visit to madikeri General Thimayya War Memorial Museum Coorg: ನಗರದಲ್ಲಿ ಇದೇ ಶನಿವಾರದಂದು ಯಾರೂ ಮನೆಗಳಿಂದ ಹೊರಗೆ ಬರುವಂತಿಲ್ಲ. ಅಂಗಡಿ ಬಾಗಿಲು ತೆರೆಯುವಂತಿಲ್ಲ, ರಸ್ತೆಗಳ ಮೇಲೆ ಜನ ಓಡಾಡುವಂತಿಲ್ಲ ಎಂದು ನಗರಸಭೆಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಮಡಿಕೇರಿಯಲ್ಲಿ ಇದೇ ಶನಿವಾರ ಯಾರೂ ಮನೆಗಳಿಂದ ಹೊರಗೆ ಬರುವಂತಿಲ್ಲ; ರಸ್ತೆ ಮೇಲೆ ಜನ ಓಡಾಡುವಂತಿಲ್ಲ! ಯಾಕೆ?
ಫೆಬ್ರವರಿ 6ರಂದು ಕೊಡಗು ಜಿಲ್ಲೆ ಮಡಿಕೇರಿಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಭೇಟಿ
Follow us
ಸಾಧು ಶ್ರೀನಾಥ್​
|

Updated on: Feb 03, 2021 | 5:11 PM

ಮಡಿಕೇರಿ: ನಗರದಲ್ಲಿ ಇದೇ ಶನಿವಾರದಂದು ಯಾರೂ ಮನೆಗಳಿಂದ ಹೊರಗೆ ಬರುವಂತಿಲ್ಲ. ಅಂಗಡಿ ಬಾಗಿಲು ತೆರೆಯುವಂತಿಲ್ಲ, ರಸ್ತೆಗಳ ಮೇಲೆ ಜನ ಓಡಾಡುವಂತಿಲ್ಲ. ಪ್ರಾಣಿಗಳು ಕಾಣಿಸಿಕೊಳ್ಳುವಂತಿಲ್ಲ. ಕಟ್ಟುನಿಟ್ಟಿನ ನಿಗಾ ಇಟ್ಟಿರಬೇಕು ಎಂದು ನಗರಸಭೆಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಹೌದು, ಫೆಬ್ರವರಿ 6ರಂದು ಕೊಡಗು ಜಿಲ್ಲೆ ಮಡಿಕೇರಿಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಕಟ್ಟಾಜ್ಞೆ ಜಾರಿಯಾಗಿದೆ. ರಾಷ್ಟ್ರಪತಿ ಕೋವಿಂದ್ ಭೇಟಿ ನಿಮಿತ್ತ ಅಂದು ನಗರದಲ್ಲಿ ಯಾವುದೇ ಅಂಗಡಿ ಬಾಗಿಲು ತೆರೆಯುವಂತಿಲ್ಲ. ಮನೆಯಿಂದಲೂ ಯಾರೂ ಹೊರಗೆ ಬರುವಂತಿಲ್ಲ. ಬೀದಿಯಲ್ಲಿ ಜನ ಓಡಾಡುವಂತಿಲ್ಲ. ಈ ಬಗ್ಗೆ ನಿಗಾ ಇಡಲು ನಗರಸಭೆಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಇದೇ ವೇಳೆ, ರಾಷ್ಟ್ರಪತಿ ಸಂಚರಿಸುವ ನಾಲ್ಕು ಮಾರ್ಗಗಳನ್ನು ಕೊಡಗು ಜಿಲ್ಲಾಡಳಿತ ಗುರುತಿಸಿದೆ. ರಾಷ್ಟ್ರಪತಿ ಸಂಚರಿಸುವ ಮಾರ್ಗದಲ್ಲಿ ಸ್ಟ್ರಿಕ್ಟ್ ರೂಲ್ಸ್ ಅನುಸರಿಸಬೇಕು. ರಸ್ತೆಬದಿಯ ಮನೆ, ಅಂಗಡಿ, ಮಳಿಗೆಗಳಿಗೆ ಖಡಕ್ ಸೂಚನೆ ನೀಡಿರಬೇಕು ಎಂದು ಆದೇಶ ಹೊರಡಿಸಿದೆ. ಮಡಿಕೇರಿಗೆ ರಾಷ್ಟ್ರಪತಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿನ ರಸ್ತೆಗಳಿಗೆ ತೇಪೆ ಹಚ್ಚುವ ಕಾರ್ಯ ಭರದಿಂದ ನಡೆಯುತ್ತಿದೆ.

ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಕಾರ್ಯಕ್ರಮ ವಿವರ President of india ram nath kovind visit to madikeri: ಅಂದಹಾಗೆ, ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅವರು ಜನರಲ್ ತಿಮ್ಮಯ್ಯ ವಾರ್ ಮ್ಯೂಸಿಯಂ (General Thimayya War Memorial Museum Coorg) ಉದ್ಘಾಟನೆಗಾಗಿ ನಗರಕ್ಕೆ ಆಗಮಿಸುತ್ತಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು ಫೆ. 6ರಂದು ಬೆಳಗ್ಗೆ 11 ಗಂಟೆಗೆ ತಲಕಾವೇರಿಗೆ ಭೇಟಿ ನೀಡಲಿದ್ದಾರೆ.

12 ಗಂಟೆಗೆ ಮಡಿಕೇರಿಯ ಹೆಲಿಪ್ಯಾಡ್‌ಗೆ ಆಗಮನವಾಗಲಿದೆ. ಬಳಿಕ ಸರ್ಕಾರಿ ಅತಿಥಿ ಗೃಹದಲ್ಲಿ ರಾಷ್ಟ್ರಪತಿ ವಿಶ್ರಾಂತಿ ಪಡೆಯಲಿದ್ದಾರೆ. ರಾಷ್ಟ್ರಪತಿ ಕೋವಿಂದ್​ ಅವರು ಮಧ್ಯಾಹ್ನ 3 ಗಂಟೆಗೆ ಸನ್ನಿ ಸೈಡ್ ಉದ್ಘಾಟಿಸಲಿದ್ದಾರೆ. 35 ನಿಮಿಷ ಕಾಲ ಸನ್ನಿ ಸೈಡ್‌ ವೀಕ್ಷಿಸಲಿದ್ದಾರೆ.

ಜಿಲ್ಲಾಡಳಿತ ಕ್ರಮಕ್ಕೆ ತೀವ್ರ ಆಕ್ರೋಶ ಆದರೆ ಜಿಲ್ಲಾಡಳಿತದ ಈ ನಡೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಫೆಬ್ರವರಿ 6ರಂದು ಕೊಡಗು ಜಿಲ್ಲೆ ಮಡಿಕೇರಿಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಭೇಟಿ

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್