AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವು ತಿಂಗಳುಗಳಿಂದ ಪಾವತಿಯಾಗಿಲ್ಲ ವೇತನ: ಮಡಿಕೇರಿಯಲ್ಲಿ ಕೆಎಸ್​ಆರ್​ಟಿಸಿ ಬಸ್ ಚಾಲಕರಿಂದ ಪ್ರತಿಭಟನೆ

ಕೆಎಸ್​ಆರ್​ಟಿಸಿ ನೌಕರರ ಸಂಕಷ್ಟ ಮುಗಿಯುತ್ತಲೇ ಇಲ್ಲ. ಇದೀಗ, ಸಂಬಳವೇ ಕೊಡುತ್ತಾ ಇಲ್ಲ ಎಂದು ಮಡಿಕೇರಿ ಡಿಪೋದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕೆಎಸ್​ಆರ್​ಟಿಸಿ ಬಸ್ ಚಾಲಕರು ಪ್ರತಿಭಟನೆಗೆ ಇಳಿದಿದ್ದಾರೆ. ಬಸ್​ಗಳಿಲ್ಲದೆ ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.

ಕೆಲವು ತಿಂಗಳುಗಳಿಂದ ಪಾವತಿಯಾಗಿಲ್ಲ ವೇತನ: ಮಡಿಕೇರಿಯಲ್ಲಿ ಕೆಎಸ್​ಆರ್​ಟಿಸಿ ಬಸ್ ಚಾಲಕರಿಂದ ಪ್ರತಿಭಟನೆ
ಮಡಿಕೇರಿಯಲ್ಲಿ ಕೆಎಸ್​ಆರ್​ಟಿಸಿ ಬಸ್ ಚಾಲಕರಿಂದ ಪ್ರತಿಭಟನೆ
Follow us
Gopal AS
| Updated By: Ganapathi Sharma

Updated on:Sep 14, 2024 | 4:53 PM

ಮಡಿಕೇರಿ, ಸೆಪ್ಟೆಂಬರ್ 14: ಕೊಡಗು ಜಿಲ್ಲೆಯ ಮಡಿಕೇರಿ ಡಿಪೋದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕೆಎಸ್​ಆರ್​ಟಿಸಿ ಬಸ್ ಚಾಲಕರು ಶನಿವಾರ ಬೀದಿಗಿಳಿದು, ಮೌನ ಪ್ರತಿಭಟನೆ ಮಾಡುತ್ತಿದ್ದಾರೆ. ಮಡಿಕೇರಿ ಡಿಪೋದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಇವರೆಲ್ಲರಿಗೂ ಕಳೆದ ಕೆಲವು ತಿಂಗಳಿನಿಂದ ಸರಿಯಾಗಿ ವೇತನ ಪಾವತಿಯಾಗಿಲ್ಲ. ಹಾಗಾಗಿ ಬೆಳಗ್ಗಿನಿಂದಲೇ ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.

ಇವರನ್ನು ಈ ಮೊದಲು ಬೇರೆಯೊಂದು ಸಂಸ್ಥೆ ಗುತ್ತಿಗೆ ಮೇಲೆ ನೇಮಕ ಮಾಡಿಕೊಂಡಿತ್ತು. ಆದರೆ, ಇದೀಗ ಕಳೆದ ಎರಡು ತಿಂಗಳಿನಿಂದ ಬಹುತೇಕ ಚಾಲಕರ ವೇತನವನ್ನು ಕಾರಣವೇ ಇಲ್ಲದೆ 8 ರಿಂದ 10 ಸಾವಿರ ರೂಪಾಯಿವರೆಗೆ ಕಡಿತ ಮಾಡಲಾಗಿದೆ. ಇವರ ಖಾತೆಗೆ ಇಎಫ್ ಹಣ ಕೂಡ ವರ್ಗಾವಣೆಯಾಗಿಲ್ಲ. ಇದರ ಬಗ್ಗೆ ಕೇಳಿದರೆ ‘‘ಪೂಜ್ಯಾಯ ಸಂಸ್ಥೆ’’ ಉಡಾಫೆಯ ಉತ್ತರ ನೀಡುತ್ತಿದೆ ಎಂಬುದು ಚಾಲಕರ ಆರೋಪವಾಗಿದೆ.

ಅಲ್ಪ ಮೊತ್ತವಷ್ಟೇ ಜಮೆ ಮಾಡುತ್ತಿದ್ದಾರೆ: ಚಾಲಕರ ಆರೋಪ

ಚಾಲಕರಿಗೆ 25 ಸಾವಿರ ರೂ. ಸಂಬಳದಲ್ಲಿ 2 ಸಾವಿರ ರೂ. ಪಿಎಫ್ ಕಡಿತ ಮಾಡಿ ಉಳಿದ 23 ಸಾವಿರ ರೂ. ಹಣ ಅಕೌಂಟ್​ಗೆ ಹಾಕಬೇಕು. ಆದರೆ 23 ಸಾವಿರ ರೂ. ಬದಲು 10 ಸಾವಿರ, 14 ಸಾವಿರ ಹೀಗೆ ಅಲ್ಪ ಮೊತ್ತವನ್ನ ಜಮೆ ಮಾಡಲಾಗುತ್ತಿದೆ ಎಂಬುದು ಚಾಲಕರ ವಾದ. ಈ ಬಗ್ಗೆ ಡಿಪೋ ಡಿಸಿ ಬಳಿ ಪ್ರಶ್ನಿಸಿದಾಗ, ಸಮಸ್ಯೆ ಬಗೆಹರಿಸುತ್ತೇವೆ ಎನ್ನುತ್ತಾರೆ. ಹಾಗೆ ಹೇಳುವುದು ಬಿಟ್ಟರೆ ಈವರೆಗೆ ಸಮಸ್ಯೆ ಪರಿಹಾರವಾಗಿಲ್ಲ ಎಂಬುದು ಚಾಲಕರ ದೂರಾಗಿದೆ.

ಎಷ್ಟೋ ಚಾಲಕರು ತಿಂಗಳಿಗೆ 30 ಗಂಟೆಗೂ ಅಧಿಕ ಒಟಿ ಮಾಡಿದ್ದಾರೆ. ಅದರ ಹಣ ಕೂಡ ಕೊಟ್ಟಿಲ್ಲ. ಅಲ್ಲದೆ, ಒಂದು ದಿನ ರಜೆ ಹಾಕಿದ್ರೆ 250 ರೂ. ಕಡಿತ ಮಾಡಲಾಗುತ್ತಿದೆ. ಈ ತಿಂಗಳು ಹಬ್ಬಕ್ಕಾದ್ರೂ ವೇತನ ಕೊಡಿ ಎಂದು ಮನವಿ ಮಾಡಿದರೂ ಹಣ ಕೊಡದೆ ಸತಾಯಿಸಿದ್ದಾರಂತೆ. ಹಾಗಾಗಿ ಈ ಎಲ್ಲಾ ಸಮಸ್ಯೆಗಳ ಬಗ್ಗೆ ಕಳೆದ ಹಲವು ದಿನಗಳಿಂದ ಪೂಜ್ಯಾಯ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಬೇರೆ ದಾರಿ ಇಲ್ಲದೆ, ಇದೀಗ ಪ್ರತಿಭಟನೆಗೆ ಇಳಿದಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಎಚ್‌ಎಸ್‌ಆರ್‌ಪಿಗೆ ನಾಳೆಯೇ ಗಡುವು: ಸ್ವಲ್ಪ ದಿನಗಳ ಮಟ್ಟಿಗೆ ಇದೆ ಗುಡ್ ನ್ಯೂಸ್!

ಉಚಿತ ಪ್ರಯಾಣ ಯೋಜನೆಯೇ ಕಾರಣವೇ?

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಈ ಸಮಸ್ಯೆಯ ಮೂಲ ರಾಜ್ಯ ಸರ್ಕಾರವೇ ಎಂದು ಸಾರ್ವಜನಿಕ ವಲಯದಲ್ಲಿ ಶಂಕೆ ಮೂಡಿದೆ. ಮಹಿಳೆಯರಿಗೆ ಉಚಿತ ಬಸ್ ಹೊರೆಯಿಂದಾಗಿ ಸರ್ಕಾರದಿಂದ ಸಾರಿಗೆ ಸಂಸ್ಥೆಯ ಗುತ್ತಿಗೆದಾರರಿಗೆ ನೀಡಲು ಹಣವಿಲ್ಲದೆ ಸರ್ಕಾರವೇ ಎಡವಟ್ಟು ಮಾಡಿದೆಯಾ ಎಂಬ ಬಗ್ಗೆ ಚರ್ಚೆಯಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:49 pm, Sat, 14 September 24

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ